Homeಕರ್ನಾಟಕಲೈಂಗಿಕ ಹಗರಣ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಲೈಂಗಿಕ ಹಗರಣ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

- Advertisement -
- Advertisement -

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಮೊಮ್ಮಗ, ಜೆಡಿಎಸ್ ಪಕ್ಷದ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಲೈಂಗಿಕ ಹಗರಣದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳದಿಂದ ಅಮಾನತುಗೊಳಿಸಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಆರ್‌. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡರ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದ್ದು, ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿನ ತೀರ್ಮಾನದಂತೆ ಕೆಲವೇ ನಿಮಿಷಗಳಲ್ಲಿ ಅಮಾನತು ಮಾಡಲಾಗಿದೆ.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎನ್ನಲಾದ ಸಾವಿರಾರು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಇದು ಪಕ್ಷ ಮತ್ತು ನಾಯಕತ್ವಕ್ಕೆ ಭಾರೀ ಮುಜುಗರ ಉಂಟು ಮಾಡಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

“ಈ ಬಗ್ಗೆ ತನಿಖೆ ನಡೆಸಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ ಎಂದು ಹೇಳಿರುವ ಅವರು, ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಸಂವಿಧಾನ ಮತ್ತು ಶಿಸ್ತು ಉಲ್ಲಂಘನೆ ಮತ್ತು ಶಿಕ್ಷೆಗೆ ಸಂಬಂಧಿಸಿದ ನಿಯಮಗಳ ಪ್ರಕಾರ ಪ್ರಜ್ವಲ್ ರೇವಣ್ಣ ಅವರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ” ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರ ಒಪ್ಪಿಗೆ ಮೇರೆಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಆರ್ ಶಿವಕುಮಾರ್ ಸಹಿ ಹಾಕಿರುವ ಅಮಾನತು ಆದೇಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.

ಕಳೆದ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಾಸನದಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಪ್ರಜ್ವಲ್, ದೇವೇಗೌಡರ ಹಿರಿಯ ಪುತ್ರ ಹೆಚ್ ಡಿ ರೇವಣ್ಣ ಅವರ ಪುತ್ರ, ಅವರು ಶಾಸಕ ಮತ್ತು ಮಾಜಿ ಸಚಿವ. ಪ್ರಜ್ವಲ್ ಅವರ ಚಿಕ್ಕಪ್ಪ ಎಚ್ ಡಿ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾರೆ.

ಕೋರ್ ಕಮಿಟಿ ಸಭೆಯ ನಂತರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅದರ ಮುಖ್ಯಸ್ಥ ಹಾಗೂ ಶಾಸಕ ಜಿ.ಟಿ.ದೇವೇಗೌಡ, “ಪ್ರಜ್ವಲ್ ರೇವಣ್ಣ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಎಸ್‌ಐಟಿ ರಚಿಸಿ ಅವರು ತನಿಖೆ ಆರಂಭಿಸಿದ್ದಾರೆ, ನಾವು ಅದನ್ನು ಸ್ವಾಗತಿಸುತ್ತೇವೆ, ತನಿಖೆ ಮುಂದುವರೆದಿದೆ. ಈ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸದಿರಲು ಮತ್ತು ತನಿಖೆಗೆ ಸಂಪೂರ್ಣ ಸಹಕಾರವನ್ನು ನೀಡಲು ನಾವು ನಿರ್ಧರಿಸಿದ್ದೇವೆ” ಎಂದರು.

“ಪ್ರಜ್ವಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ಸರ್ವಾನುಮತದ ನಿರ್ಣಯವನ್ನು ಮಾಡಿದ್ದೇವೆ ಮತ್ತು ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡರಿಗೆ ಶಿಫಾರಸು ಮಾಡಿದ್ದೇವೆ. ಅವರು (ಪ್ರಜ್ವಲ್) ಲೋಕಸಭಾ ಸದಸ್ಯರಾಗಿರುವ ಕಾರಣ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು, ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇವೆ” ಎಂದು ವಿವರಿಸಿದರು.

ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಕೆಲವು ಸ್ಪಷ್ಟ ವಿಡಿಯೋ ತುಣುಕುಗಳು ಇತ್ತೀಚಿನ ದಿನಗಳಲ್ಲಿ ಹಾಸನದಲ್ಲಿ ಸದ್ದು ಮಾಡಲಾರಂಭಿಸಿದ್ದವು. ಸಂಸದರನ್ನು ಒಳಗೊಂಡಿರುವ ಲೈಂಗಿಕ ಹಗರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಈಗಾಗಲೇ ವಿಚಾರಣೆ ಆರಂಭಿಸಿದೆ.

ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹಾಗೂ ಇತರೆ ಸದಸ್ಯರು ಉಪಸ್ಥಿತರಿದ್ದರು. ಎಸ್‌ಐಟಿ ತನಿಖಾ ವರದಿ ಹಾಗೂ ಸರ್ಕಾರದ ಕ್ರಮದ ಆಧಾರದ ಮೇಲೆ ಪ್ರಜ್ವಲ್ ಅವರನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಎಸ್‌ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ; ಪ್ರಜ್ವಲ್ ಪಾತ್ರದ ಬಗ್ಗೆ ಎಸ್‌ಐಟಿ ವರದಿ ಬರುವವರೆಗೆ ಅಮಾನತು ಮಾಡಲಾಗುವುದು. ಅವರು ತಪ್ಪಿತಸ್ಥರೆಂದು ವರದಿಯಲ್ಲಿ ಬಂದರೆ ಅವರನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗುವುದು” ಎಂದು ಅವರು ಹೇಳಿದರು.

ಇದನ್ನೂ ಓದಿ; ದೇವೇಗೌಡರ ಮೊಮ್ಮಗನ ಲೈಂಗಿಕ ಹಗರಣದಲ್ಲಿ ಕಾಂಗ್ರೆಸ್ ನಿಷ್ಕ್ರಿಯತೆ: ಅಮಿತ್ ಶಾ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...