Homeಚಳವಳಿಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು: ಬಿ.ಟಿ ವೆಂಕಟೇಶ್

ಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು: ಬಿ.ಟಿ ವೆಂಕಟೇಶ್

ಲೈಂಗಿಕ ಕಾರ್ಯಕರ್ತೆಯರಿಗೂ ಕಾರ್ಮಿಕ ಕಾನೂನುಗಳ ಅಡಿ ಸೌಲಭ್ಯ ನೀಡಿ, ಉಚಿತ ವಸತಿ, ಶಿಕ್ಷಣ ಸೌಲಭ್ಯ ಕಲ್ಪಿಸಲು ಸಭೆಯಲ್ಲಿ ಆಗ್ರಹಿಸಲಾಯಿತು.

- Advertisement -
- Advertisement -

ಲೈಂಗಿಕ ಕೆಲಸವು ಸಹ ಒಂದು ಕೆಲಸವಾಗಿದೆ ಮತ್ತು ಲೈಂಗಿಕ ಕಾರ್ಯಕರ್ತರು ಗೌರವ ಮತ್ತು ಘನತೆಗೆ ಅರ್ಹರು ಎಂದು ಖ್ಯಾತ ವಕೀಲರು ಮತ್ತು ಮಾಜಿ ರಾಜ್ಯ ಸರಕಾರಿ ಅಭಿಯೋಜಕರಾದ ಬಿ.ಟಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ಲೈಂಗಿಕ ಕಾರ್ಯಕರ್ತೆಯರ ಪ್ರಸ್ತುತ ಸಮಸ್ಯೆಗಳ ಕುರಿತು ಬೆಂಗಳೂರಿನ ಎಸ್‌ಸಿಎಂ ಹೌಸ್‌ನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “ಲೈಂಗಿಕ ಕಾರ್ಯಕರ್ತರು ತಮ್ಮ ನ್ಯಾಯಬದ್ಧ ಹಕ್ಕುಗಳಿಗಾಗಿ 25 ವರ್ಷಗಳಿಂದ ಹೋರಾಡುತ್ತಿದ್ದಾರೆ. ಈಗ ಅವರ ಪರವಾಗಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಜಾರಿಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ” ಎಂದರು.

ಎಲ್ಲ ಅಂಚಿನಲ್ಲಿರುವ ಸಮುದಾಯಗಳಂತೆ ಲೈಂಗಿಕ ಕಾರ್ಯಕರ್ತೆಯರಿಗೂ ವಸತಿ ಸೌಲಭ್ಯ ಕಲ್ಪಿಸುವ ತುರ್ತು ಅಗತ್ಯವಿದ್ದು, ಲೈಂಗಿಕ ಕಾರ್ಯಕರ್ತೆಯರ ಮಕ್ಕಳಿಗೆ ಉಚಿತ ಮನೆ ಮತ್ತು ಶಿಕ್ಷಣ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಲು ನಾವು ಸಿದ್ಧರಿದ್ದೇವೆ ಎಂದು ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಎಂ.ಜಿ.ಪಾಲಿ ಹೇಳಿದರು.

ಲೈಂಗಿಕ ಕಾರ್ಯಕರ್ತೆಯರನ್ನು ಅಪರಾಧೀಕರಿಸುವ ಅನೈತಿಕ ಕಳ್ಳಸಾಗಣೆ ತಡೆ ಕಾಯಿದೆ (ITPA) ಅನ್ನು ರದ್ದುಗೊಳಿಸಬೇಕು, ಕಾರ್ಮಿಕ ಕಾನೂನುಗಳ ಅಡಿಯಲ್ಲಿ ಲೈಂಗಿಕ ಕೆಲಸವನ್ನು ಗುರುತಿಸಿ ಮತ್ತು ಇತರ ಕಾರ್ಮಿಕರಿಗೆ ಲಭ್ಯವಿರುವ ಎಲ್ಲಾ ಹಕ್ಕುಗಳು ಮತ್ತು ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಲಾಯಿತು.

ಸ್ವಂತ ಮನೆ ಹೊಂದಿರದ ಲೈಂಗಿಕ ಕಾರ್ಯಕರ್ತರಿಗೆ ವಸತಿ ಒದಗಿಸುವುದು, ನಿವೃತ್ತ ಲೈಂಗಿಕ ಕಾರ್ಯಕರ್ತರಿಗೆ (40 ವರ್ಷಕ್ಕಿಂತ ಮೇಲ್ಪಟ್ಟವರು) ಪಿಂಚಣಿ ಮತ್ತು ಪರ್ಯಾಯ ಜೀವನೋಪಾಯವನ್ನು ಒದಗಿಸುವುದು, ಲೈಂಗಿಕ ಕಾರ್ಯಕರ್ತೆಯರ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯಗಳು, ಮಕ್ಕಳ ಆರೈಕೆ ಕೇಂದ್ರಗಳು ಮತ್ತು ವಿದ್ಯಾರ್ಥಿವೇತನ ಒದಗಿಸಬೇಕೆಂಬ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.

ಇದನ್ನೂ ಓದಿ: ಲೈಂಗಿಕ ಕೆಲಸಕ್ಕೆ ‘ವೃತ್ತಿ’ ಮಾನ್ಯತೆ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸಾಲಿಡಾರಿಟಿ ಫೌಂಡೇಶನ್, ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ ಮತ್ತು ಸಂಗಮ ಸಂಘಟನೆಯಳು ಕಾರ್ಯಕ್ರಮ ಆಯೋಜಿಸಿದ್ದವು. 18 ವಿವಿಧ ಎನ್‌ಜಿಒಗಳು, ಸಿಬಿಒಗಳು, ನಾಗರಿಕ ಸಮಾಜ ಸಂಘಟನೆಗಳು, ಪ್ರಗತಿಪರ ಚಳವಳಿಗಳು, ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಮತ್ತು ಸಮಾಜಕಾರ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶುಕ್ರವಾರ ಸಂಜೆ 6 ಗಂಟೆಗೆ ನಗರದ ಫ್ರೀಂಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮ್ಯಾನೇಜ್‌ಮೆಂಟ್‌ ಸರ್ಕಾರ| ಆಡಿಯೊ ನನ್ನದೇ, ರಾಜೀನಾಮೆ ಕೇಳಿದರೆ ಕೊಡುವೆ- ಮಾಧುಸ್ವಾಮಿ

0
ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರ ಆಡಿಯೊವೊಂದು ಸೋರಿಕೆಯಾಗಿರುವ ಪರಿಣಾಮ ಬಿಜೆಪಿ ಸರ್ಕಾರ ತೀವ್ರ ಮುಜುಗರಕ್ಕೊಳಗಾಗಿದ್ದು ಸರ್ಕಾರದೊಳಗೆ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ನಾಯಕರು ಮಾಧುಸ್ವಾಮಿ ಹೇಳಿಕೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಮಾಧುಸ್ವಾಮಿಯವರೂ ಪ್ರಕರಣಕ್ಕೆ ಸಂಬಂಧಿಸಿದಂತೆ...