HomeಅಂಕಣಗಳುSIRSIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

- Advertisement -
- Advertisement -

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು ಕೋರಿ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದೆ.

ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ಸಾಮಾಜಿಕವಾಗಿ ವಂಚಿತ ಸಮುದಾಯಗಳಿಗೆ ಸೇರಿದವರಾಗಿದ್ದು, ಗುರುತಿನ ಮತ್ತು ವಾಸಸ್ಥಳದ ದಾಖಲೆಗಳನ್ನು ಪಡೆಯಲು ಹಾಗೂ ಅವುಗಳನ್ನು ನವೀಕರಿಸಲು ಗಮನಾರ್ಹ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಂಸ್ಥೆಯು ತನ್ನ ಪತ್ರದಲ್ಲಿ ತಿಳಿಸಿದೆ.

ಇವರಲ್ಲಿ ಅನೇಕರು ವಲಸಿಗರಾಗಿದ್ದು, ಕೊಳಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ಅಲ್ಲದೆ, ಸ್ಥಳಾಂತರಿಸುವಿಕೆ ಅಥವಾ ಸಾಮಾಜಿಕ ಕಳಂಕದ ಕಾರಣದಿಂದಾಗಿ ಅವರು ಪದೇ ಪದೇ ವಾಸಸ್ಥಳವನ್ನು ಬದಲಾಯಿಸುತ್ತಿರುತ್ತಾರೆ ಮತ್ತು ತಮ್ಮ ಕುಟುಂಬಗಳೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ಪರಿಸ್ಥಿತಿಗಳಿಂದಾಗಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿಯಲ್ಲಿ ಅಗತ್ಯವಿರುವ ದಾಖಲಾತಿ ನಿಯಮಗಳನ್ನು ಪೂರೈಸುವುದು ಲೈಂಗಿಕ ಕಾರ್ಯಕರ್ತೆಯರಿಗೆ ಕಷ್ಟಕರವಾಗಿದೆ ಎಂದು ಪತ್ರವು ವಿವರಿಸಿದೆ.

ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ತಮ್ಮ ಪೋಷಕರೊಂದಿಗೆ ಸಂಬಂಧವನ್ನು ಸ್ಥಾಪಿಸುವ ಯಾವುದೇ ದಾಖಲೆಗಳನ್ನು ಹೊಂದಿರುವುದಿಲ್ಲ ಎಂದು ಹೇಳಿರುವ ಸಂಸ್ಥೆ, ಪೋಷಕರು ಅಥವಾ ಮಕ್ಕಳ ಮ್ಯಾಪಿಂಗ್ (ಸಂಬಂಧದ ಕೊಂಡಿ ಜೋಡಿಸುವಿಕೆ) ಅಗತ್ಯತೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದೆ.

“ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಅನೇಕ ಮಹಿಳೆಯರು ತಮ್ಮ ಪೋಷಕರೊಂದಿಗೆ ಸಂಬಂಧವನ್ನು ಸ್ಥಾಪಿಸುವ ದಾಖಲೆಗಳನ್ನು ಹೊಂದಿಲ್ಲದಿರಬಹುದು ಅಥವಾ ಅವರು ಹಲವು ವರ್ಷಗಳಿಂದ ತಮ್ಮ ಕುಟುಂಬಗಳಿಂದ ದೂರ ವಾಸಿಸುತ್ತಿರಬಹುದು. ಅದೇ ರೀತಿ, ಅವರ ಮಕ್ಕಳೂ ಸಹ ಪರಿಶೀಲನೆಗೆ ಅಪೇಕ್ಷಿತ ರೀತಿಯಲ್ಲಿ ಪೋಷಕರ ಸಂಬಂಧವನ್ನು ಸಾಬೀತುಪಡಿಸುವ ದಾಖಲೆಗಳನ್ನು ಹೊಂದಿಲ್ಲದಿರಬಹುದು. ಕೆಲವು ಸಂದರ್ಭಗಳಲ್ಲಿ, ಮಕ್ಕಳನ್ನು ಸಂಬಂಧಿಕರು, ಪೋಷಕರು, ಸಮುದಾಯದ ಸದಸ್ಯರು ಅಥವಾ ಸಾಂಸ್ಥಿಕ ಆರೈಕೆಯಲ್ಲಿ ಬೆಳೆಸಲಾಗಿರುತ್ತದೆ, ಇದು ಸಾಂಪ್ರದಾಯಿಕ ಕೌಟುಂಬಿಕ ದಾಖಲಾತಿಯನ್ನು ಕಷ್ಟಕರವಾಗಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಅನೇಕ ಲೈಂಗಿಕ ಕಾರ್ಯಕರ್ತೆಯರ ಪೋಷಕರು ಮರಣ ಹೊಂದಿದ್ದಾರೆ ಅಥವಾ ಅವರಿಗೆ ತಮ್ಮ ಪೋಷಕರ ಪೂರ್ಣ ಕಾನೂನಾತ್ಮಕ ಹೆಸರುಗಳು, ಜನ್ಮಸ್ಥಳ ಅಥವಾ ಚುನಾವಣಾ ಇತಿಹಾಸ ತಿಳಿದಿಲ್ಲ ಎಂದು ಸಂಸ್ಥೆಯು ತಿಳಿಸಿದೆ. ಅನೇಕ ಸಂದರ್ಭಗಳಲ್ಲಿ, ಕೌಟುಂಬಿಕ ಸಂಬಂಧಗಳು ಕಡಿತಗೊಂಡಿವೆ ಅಥವಾ ಅದಕ್ಕೆ ಸಂಬಂಧಿಸಿದ ದಾಖಲೆಗಳು ಎಂದಿಗೂ ಅಸ್ತಿತ್ವದಲ್ಲಿಲ್ಲ ಎಂದು ಹೇಳಿರುವ ಸಂಸ್ಥೆಯು, ಇಂತಹ ವ್ಯಕ್ತಿಗಳು ಹಿಂದಿನ ಮತದಾರರ ಪಟ್ಟಿಗಳೊಂದಿಗೆ ಕೌಟುಂಬಿಕ ಕೊಂಡಿಯನ್ನು ಸಾಬೀತುಪಡಿಸಬೇಕೆಂದು ನಿರೀಕ್ಷಿಸುವುದು ಅವಾಸ್ತವಿಕವಾಗಿದೆ ಎಂದು ಪತ್ರದಲ್ಲಿ ಸೇರಿಸಿದೆ.

ಈ ಪರಿಸ್ಥಿತಿಗಳು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಅಪಾಯವನ್ನು ಉಂಟುಮಾಡುತ್ತವೆ ಎಂದು ವಾದಿಸಿರುವ ಪತ್ರವು, ಇಂತಹ ಹೊರಗಿಡುವಿಕೆಯು ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವ ಚುನಾವಣಾ ಆಯೋಗದ ಬದ್ಧತೆಯನ್ನು ಕುಂಠಿತಗೊಳಿಸುತ್ತದೆ ಎಂದು ತಿಳಿಸಿದೆ.

“ಬುದ್ಧದೇವ್ ಕರ್ಮಾಕರ್ V/S ಪಶ್ಚಿಮ ಬಂಗಾಳ ಸರ್ಕಾರ’ ಮತ್ತು ‘ಪ್ರಜ್ವಲ V/S ಭಾರತ ಸರ್ಕಾರ’ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ನು ಸಂಸ್ಥೆಯು ಉಲ್ಲೇಖಿಸಿದೆ. ಈ ತೀರ್ಪುಗಳಲ್ಲಿ ನ್ಯಾಯಾಲಯವು ಮಾನವ ಕಳ್ಳಸಾಗಣೆ (ಟ್ರಾಫಿಕಿಂಗ್) ಮತ್ತು ಒಪ್ಪಿಗೆಯ ಮೇರೆಗೆ ವಯಸ್ಕರು ನಡೆಸುವ ಲೈಂಗಿಕ ವೃತ್ತಿಯ ನಡುವಿನ ವ್ಯತ್ಯಾಸವನ್ನು ಸ್ಪಷ್ಟಪಡಿಸಿದೆ ಹಾಗೂ ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕರ ಘನತೆ ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಮಾನ್ಯ ಮಾಡಿದೆ ಎಂದು ಹೇಳಿದೆ.

ಸಾಮಾಜಿಕ ಕಳಂಕ, ವಲಸೆ, ಕೌಟುಂಬಿಕ ಪ್ರತ್ಯೇಕತೆ ಮತ್ತು ಪೋಷಕರ ಸಂಬಂಧವನ್ನು ಸಾಬೀತುಪಡಿಸುವ ದಾಖಲೆಗಳ ಕೊರತೆಯನ್ನು ಗಣನೆಗೆ ತೆಗೆದುಕೊಂಡು ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಜಾರಿಗೊಳಿಸಬೇಕು ಎಂದು ಸಂಸ್ಥೆಯು ಅಧಿಕಾರಿಗಳನ್ನು ಒತ್ತಾಯಿಸಿದೆ.

ಚುನಾವಣಾ ಅಧಿಕಾರಿಗಳು ದುರ್ಬಲ ಮತ್ತು ವಂಚಿತ ವರ್ಗದವರಿಗಾಗಿ ವಿಶೇಷ ಕ್ರಮಗಳನ್ನು ಅಳವಡಿಸಿಕೊಂಡಿರುವ ಇತರ ರಾಜ್ಯಗಳ ಉದಾಹರಣೆಗಳನ್ನು ಸಹ ಪತ್ರದಲ್ಲಿ ಎತ್ತಿ ತೋರಿಸಲಾಗಿದೆ.

ಎಲ್ಲಾ ಚುನಾವಣಾ ನೋಂದಣಾಧಿಕಾರಿಗಳು (ಇಆರ್‌ಒಗಳು), ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು (ಎಇಆರ್‌ಒಗಳು) ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒಗಳು) ಈ ಕೆಳಗಿನ ಸೂಚನೆಗಳನ್ನು ನೀಡುವಂತೆ ಸಂಸ್ಥೆಯು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ:

  1. ಪೋಷಕರು ಅಥವಾ ಮಕ್ಕಳ ಮ್ಯಾಪಿಂಗ್ (ಸಂಬಂಧದ ಕೊಂಡಿ ಜೋಡಿಸುವಿಕೆ) ಇಲ್ಲದಿರುವುದನ್ನು, ಇತರ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಮತದಾರರನ್ನು ಹೊರಗಿಡಲು ಒಂದು ಕಾರಣವಾಗಿ ಮಾಡಬಾರದು.
  2. ಕೌಟುಂಬಿಕ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳು ಲಭ್ಯವಿಲ್ಲದಿದ್ದಲ್ಲಿ, ಪರ್ಯಾಯ ದಾಖಲೆಗಳು ಮತ್ತು ಕ್ಷೇತ್ರ ಮಟ್ಟದ ಪರಿಷ್ಕರಣೆ (ಫೀಲ್ಡ್ ವೆರಿಫಿಕೇಶನ್) ವಿಧಾನಗಳನ್ನು ಅಂಗೀಕರಿಸಬೇಕು. ಇಂತಹ ಪರ್ಯಾಯ ಪರಿಶೀಲನೆಗಾಗಿ ಹಿಂದಿನ ಚುನಾವಣಾ ದಾಖಲೆಗಳು, ಎಪಿಕ್ (ಮತದಾರರ ಗುರುತಿನ ಚೀಟಿ), ಸರ್ಕಾರಿ ಯೋಜನೆಗಳ ಅಡಿಯಲ್ಲಿನ ದಾಖಲೆಗಳು, ಹಾಗೆಯೇ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಅಥವಾ ನೋಂದಾಯಿತ ಸಮುದಾಯ ಆಧಾರಿತ ಸಂಸ್ಥೆಗಳು (ಸಿಬಿಒಗಳು) ನೀಡಿರುವ ಗುರುತಿನ ಅಥವಾ ವಾಸಸ್ಥಳದ ಪ್ರಮಾಣಪತ್ರಗಳು ಅಥವಾ ಪರಿಶೀಲನಾ ಪತ್ರಗಳನ್ನು ಒಳಗೊಂಡಿರಬಹುದು.
  3. ಪರಿಶೀಲನಾ ಪ್ರಕ್ರಿಯೆಯ ಸಂದರ್ಭದಲ್ಲಿ, ಲೈಂಗಿಕ ವೃತ್ತಿಯಲ್ಲಿ ತೊಡಗಿರುವ ಮಹಿಳೆಯರು, ಅವರ ಮಕ್ಕಳು ಮತ್ತು ಇತರ ದುರ್ಬಲ ವರ್ಗದವರ ವಿಶೇಷ ಪರಿಸ್ಥಿತಿಗಳಿಗೆ ಸೂಕ್ತ ಪರಿಗಣನೆ ನೀಡಬೇಕು.
  4. ಲೈಂಗಿಕ ಕಾರ್ಯಕರ್ತೆಯರು ಎದುರಿಸುತ್ತಿರುವ ಸಾಮಾಜಿಕ ಕಳಂಕ, ತಾರತಮ್ಯ ಮತ್ತು ದಾಖಲಾತಿ ಸಂಬಂಧಿತ ಅಡೆತಡೆಗಳ ಕುರಿತು ಚುನಾವಣಾ ಅಧಿಕಾರಿಗಳು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಸಂವೇದನಾಶೀಲತಾ ತರಬೇತಿಯನ್ನು (ಸೆನ್ಸಿಟೈಸೇಶನ್ ಟ್ರೈನಿಂಗ್) ಆಯೋಜಿಸಬೇಕು.
  5. ಕುಟುಂಬದ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳ ಕೊರತೆಯಿಂದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗದ ಅಪಾಯದಲ್ಲಿರುವ ದುರ್ಬಲ ವರ್ಗದ ಮತದಾರರಿಗಾಗಿ ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು (ಗ್ರೀವೆನ್ಸ್ ರಿಡ್ರೆಸಲ್ ಮೆಕಾನಿಸಂ) ಸ್ಥಾಪಿಸಬೇಕು.
  6. ಮತದಾರರ ಪರಿಶೀಲನೆ ಮತ್ತು ಸೇರ್ಪಡೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಮುದಾಯ ಆಧಾರಿತ ಸಂಸ್ಥೆಗಳು ಮತ್ತು ನಾಗರಿಕ ಸಮಾಜದ ಸಂಸ್ಥೆಗಳೊಂದಿಗೆ (ಸಿವಿಲ್ ಸೊಸೈಟಿ ಆರ್ಗನೈಸೇಶನ್ಸ್) ಸಮನ್ವಯವನ್ನು ಸಾಧಿಸಬೇಕು.
  7. ಸಾಂಪ್ರದಾಯಿಕ ಕೌಟುಂಬಿಕ ಸಂಬಂಧಗಳನ್ನು ಸಾಬೀತುಪಡಿಸುವ ದಾಖಲೆಗಳು ಲಭ್ಯವಿಲ್ಲ ಎಂಬ ಕಾರಣಕ್ಕಾಗಿ ಮಾತ್ರ ಮಹಿಳಾ ಲೈಂಗಿಕ ಕಾರ್ಯಕರ್ತೆಯರು, ಅವರ ಮಕ್ಕಳು ಮತ್ತು ಇತರ ದುರ್ಬಲ ವರ್ಗದ ಮತದಾರರನ್ನೊಳಗೊಂಡ ಪ್ರಕರಣಗಳಲ್ಲಿ ಯಾವುದೇ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡಬಾರದು. ಇಂತಹ ಸಂದರ್ಭಗಳಲ್ಲಿ, ಪ್ರಸ್ತುತ ಪರಿಸ್ಥಿತಿಗಳ ಆಧಾರದ ಮೇಲೆ ಹೊಂದಿಕೊಳ್ಳುವಂತಹ (ಫ್ಲೆಕ್ಸಿಬಲ್) ಪರಿಶೀಲನಾ ವಿಧಾನವನ್ನು ಅಳವಡಿಸಿಕೊಳ್ಳಬೇಕು ಮತ್ತು ಅಗತ್ಯವಿರುವ ಕಡೆಗಳಲ್ಲಿ ನ್ಯಾಷನಲ್ ನೆಟ್‌ವರ್ಕ್ ಆಫ್ ಸೆಕ್ಸ್ ವರ್ಕರ್ಸ್ (ಎನ್‌ಎನ್‌ಎಸ್‌ಡಬ್ಲ್ಯು) ಹಾಗೂ ಸಮುದಾಯ ಆಧಾರಿತ ಸಂಸ್ಥೆಗಳ ಪರಿಶೀಲನೆಯನ್ನು ಸಹ ಪರಿಗಣಿಸಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...