Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

- Advertisement -
- Advertisement -

ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

“ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ”ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರ ಪೀಠವು ಈ ಕುರಿತು ಅರ್ಜಿಯನ್ನು ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು. ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಲಕ್ಷ ರೂ. ಬಾಂಡ್, ತನಿಖೆಗೆ ಸಹಕರಿಸಬೇಕೆಂಬ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮನೆ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಕಿಡ್ನಾಪ್ ಮಾಡಿದ್ದ ಕೇಸ್‍ನಲ್ಲಿ ಕಳೆದ ವಾರವಷ್ಟೇ ಮಧ್ಯಂತರ ಜಾಮೀನಿನಲ್ಲಿ ರೇವಣ್ಣ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೇ ನ್ಯಾಯಾಲಯ ನೀಡಿದ್ದ ಮಧ್ಯಂತರ ಜಾಮೀನಿಗೆ ಪ್ರಾಸಿಕ್ಯೂಷನ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಕುರಿತ ವಾದ-ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಲಾಗಿತ್ತು.

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಹಾಸನದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಆಗಿತ್ತು. ಇದಾದ ಬಳಿಕ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ವಿರುದ್ದ ಎಫ್‌ಐಆರ್‌ ದಾಖಲಾಗಿತ್ತು. ಕೇಸ್‌ ದಾಖಲಾಗುತ್ತಿದ್ದಂತೆ ಪ್ರಜ್ವಲ್‌ ದೇಶ ತೊರೆದಿದ್ದರು. ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಪ್ರಜ್ವಲ್‌ ಬಂಧನಕ್ಕೆ ಈಗಾಗಲೇ ವಾರೆಂಟ್ ಜಾರಿ ಮಾಡಲಾಗಿದೆ. ರೇವಣ್ಣ ಅವರ ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರ ಅಪಹರಣ ನಡೆದಿತ್ತು. ಮಹಿಳೆಯ ಪುತ್ರನ ದೂರಿನ ಆಧಾರದ ಮೇಲೆ 66 ವರ್ಷದ ರೇವಣ್ಣ ಮತ್ತು ಅವರ ಆಪ್ತ ಸತೀಸ್‌ ಬಾಬಣ್ಣ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ರೇವಣ್ಣ ತನ್ನ ತಾಯಿಯನ್ನು ಅಪಹರಿಸಿ ಅಕ್ರಮವಾಗಿ ದಿನಗಟ್ಟಲೆ ಬಂಧಿಸಿದ್ದಾರೆ ಎಂದು ಅವರು ಆರೋಪಿಸಿದ್ದರು. ಆ ಬಳಿಕ ಮಹಿಳೆಯನ್ನು ಪೊಲೀಸರು ರಕ್ಷಿಸಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು.

ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವ ಹೆಚ್ ಡಿ ರೇವಣ್ಣ ಅವರ ಸಹಾಯಕರ ನಿವಾಸದಿಂದ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಹಿಳೆಯನ್ನು ರಕ್ಷಿಸಿದ ಒಂದು ವಾರದ ನಂತರ ಮಹಿಳೆ ವಿಡಿಯೋವೊಂದನ್ನು ಕೂಡ ಬಿಡುಗಡೆ ಮಾಡಿದ್ದರು. ಅದರಲ್ಲಿ, ನನ್ನನ್ನು ಯಾರೂ ಅಪಹರಣ ಮಾಡಿಲ್ಲ, ನಾನಾಗಿ ಮನೆಯಿಂದ ಬಂದಿದ್ದೇನೆ. ಭವಾನಿ, ರೇವಣ್ಣ, ಪ್ರಜ್ವಲ್ ಮತ್ತು ಬಾಬಣ್ಣರಿಂದ ಯಾವುದೇ ತೊಂದರೆ ಆಗಿಲ್ಲ ಎಂದು ಹೇಳಲಾಗಿದೆ. ಇದಲ್ಲದೆ ನಮ್ಮ ಊರಿನವರು ಏನೇನೋ ಮಾತನಾಡಿದ್ದನ್ನು ಕೇಳಿ ಬೇಸರವಾಗಿತ್ತು. ಹೀಗಾಗಿ 4 ದಿನ ಇದ್ದು ಹೋಗೋಣವೆಂದು ನೆಂಟರ ಮನೆಗೆ ಬಂದಿದ್ದೇನೆ. ಸಂಬಂಧಿಕರ ಮನೆಯಲ್ಲಿ ಇದ್ದೇನೆ, 2 ದಿನಗಳ ಬಳಿಕ ನಾನೇ ಬರುತ್ತೇನೆ ಎಂದು ಉಲ್ಲೇಖಿಸಿದ್ದು, ಗಾಬರಿ ಪಡಬೇಡಿ ಏನೂ ತೊಂದರೆ ಆಗಿಲ್ಲ, ಚನ್ನಾಗಿ ಇದ್ದೇನೆ ವಾಪಸ್ ಬರುತ್ತೇನೆ. ಯಾರೂ ಏನೆ ಅಂದರು ತಲೆಗೆ ಹಾಕಿಕೊಳ್ಳಬೇಡಿ. ಅವರಿಂದ ನಮಗೆ ತೊಂದರೆ ಆಗಿಲ್ಲ. ಮೊಬೈಲ್‍ಗೂ ನಮಗೂ ಸಂಬಂಧವಿಲ್ಲ. ನಾಲ್ಕು ದಿನ ನೆಂಟರ ಮನೆಗೆ ಹೋಗಿದ್ದೆ, ಈ ಬಗ್ಗೆ ಎಲ್ಲಿ ಬೇಕಾದರೂ ಮಾಹಿತಿ ನೀಡುತ್ತೇನೆ ಎಂದು ಹೇಳಲಾಗಿತ್ತು.

ಇದನ್ನು ಓದಿ: ಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...