Homeಕರ್ನಾಟಕಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ, ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್...

ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ, ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಹಾಗೂ ಹಿಂದುತ್ವ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ ಎಂದು ವರದಿಗಳು ಹೇಳಿವೆ.

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ 47 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅರುಣ್ ಕುಮಾರ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆಯ ದೂರು ಆಧರಿಸಿ ಪೊಲೀಸರು ಅರುಣ್ ಕುಮಾರ್ ವಿರುದ್ದ ಹಳೆಯ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 417, 354ಎ ಮತ್ತು 506ರ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ. ಹೊಸ ಕ್ರಿಮಿನಲ್ ಕಾನೂನು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಾಗುವ ಮುನ್ನ ಪ್ರಕರಣ ನಡೆದಿರುವುದರಿಂದ ಐಪಿಸಿ ಅಡಿಯೇ ಪ್ರಕರಣ ದಾಖಲಿಸಿರುವುದಾಗಿ ವರದಿಯಾಗಿದೆ.

ಅರುಣ್ ಕುಮಾರ್ ಪುತ್ತಿಲ ಮಹಿಳೆಯೊಬ್ಬರ ಜೊತೆ ಮಾತನಾಡಿದ್ದು ಎನ್ನಲಾಗಿದ್ದ ಆಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ‌ಅದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.

ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?

ಅರುಣ್ ಕುಮಾರ್ ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಯಿಂದ ಮಹಿಳೆ ಅವರ ಅಭಿಮಾನಿಯಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡುತ್ತಿದ್ದರು. ಜೊತೆಗೆ ಪುತ್ತಿಲಗೆ ನೈತಿಕ ಬೆಂಬಲವನ್ನೂ ನೀಡುತ್ತಿದ್ದರು. ಬಳಿಕ ಪರಿಚಯವಾದ ಮೇಲೆ ಪುತ್ತಿಲ ಅವರು 2023ರ ಜೂನ್‌ನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ಗೆ ಕರೆಸಿಕೊಂಡು ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ನ್ಯಾಯಾಲಯದಿಂದ ತಡೆಯಾಜ್ಞೆ ತಂದ ಪುತ್ತಿಲ : 

ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆಯೊಬ್ಬರ ನಡುವೆ ನಡೆದಿದೆ ಎನ್ನಲಾಗಿದ್ದ ಮಾತುಕತೆಯ ಆಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಆ ಬಳಿಕ ಪುತ್ತಿಲ ಪರಿವಾರದಿಂದ ತನಗೆ ಬೆದರಿಕೆ ಇದೆ ಎಂದು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದ ಬಗ್ಗೆ ವರದಿಯಾಗಿತ್ತು. ಈ ಬೆಳವಣಿಗೆಯ ನಡುವೆ, ತನ್ನ ವಿರುದ್ದ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ ಅರುಣ್ ಕುಮಾರ್ ಬೆಂಗಳೂರಿನ 7ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಇದರ ಬೆನ್ನಲ್ಲೇ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಅರುಣ್ ಕುಮಾರ್ ಪುತ್ತಿಲ ಯಾರು?

ಅರುಣ್ ಕುಮಾರ್ ಪುತ್ತಿಲ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಹಿಂದುತ್ವ ಮುಖಂಡ. ತನ್ನದೇ ‘ಪುತ್ತಿಲ ಪರಿವಾರ’ ಎಂಬ ತಂಡ ಕಟ್ಟಿಕೊಂಡು ಹಿಂದುತ್ವದ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಪುತ್ತೂರಿನ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ಅವರಿಗೆ ಟಿಕೆಟ್ ನೀಡದೆ ಮಹಿಳೆಯೊಬ್ಬರನ್ನು ಕಣಕ್ಕಿಳಿಸಿತ್ತು. ಇದರಿಂದ ಅಸಮಾಧಾನಗೊಂಡ ಪುತ್ತಿಲ, ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಆದರೆ, ಅವರು ಗೆಲುವು ಸಾಧಿಸಿರಲಿಲ್ಲ. ಚುನಾವಣೆಯಲ್ಲಿ ಸೋತರೂ, ಹೆಚ್ಚು ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯ ಸೋಲಿಗೆ ಕಾರಣರಾಗುವ ಮೂಲಕ ಬಿಜೆಪಿ ನಾಯಕರಿಗೆ ಪುತ್ತಿಲ ತನ್ನ ಶಕ್ತಿ ತೋರ್ಪಡಿಸಿದ್ದರು. ಬಿಜೆಪಿ ಮತ್ತು ಪುತ್ತಿಲ ಪರಿವಾರದ ಜಟಾಪಟಿಯ ಲಾಭ ಪಡೆದ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದರು.

ನಂತರ 2024ರ ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಅರುಣ್ ಕುಮಾರ್ ಪುತ್ತಿಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ನೀಡದಿದ್ದರೆ ವಿಧಾನಸಭೆ ಚುನಾವಣೆಯಂತೆ ಬಂಡಾಯವಾಗಿ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದರು. ಈ ವೇಳೆ ಬಿಜೆಪಿ ದಕ್ಷಿಣ ಕನ್ನಡದ ಅಭ್ಯರ್ಥಿಯನ್ನು ಬದಲಿಸಿತ್ತು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಬದಲಾಗಿ ಕ್ಯಾಪ್ಟನ್‌ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಿತ್ತು. ನಳಿನ್ ಕುಮಾರ್‌ಗೆ ಟಿಕೆಟ್ ತಪ್ಪಿದ ಬಳಿಕ ಹಠಾತ್ ಬೆಳವಣಿಗೆಯಲ್ಲಿ ಅರುಣ್ ಕುಮಾರ್ ಬಿಜೆಪಿ ಸೇರಿ ಹೊಸ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಬೆಂಬಲಿಸಿದ್ದರು. ಅರುಣ್ ಕುಮಾರ್ ಬಿಜೆಪಿ ಸೇರಿದರೂ, ಅವರ ಪುತ್ತಿಲ ಪರಿವಾರ ಮತ್ತು ಬಿಜೆಪಿ ನಡುವಿನ ಶೀತಲ ಸಮರ ಮುಂದುವರೆದಿದೆ. ಈ ನಡುವೆ ಅವರ ಮೇಲೆ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : ‘ಮಲಯಾಳಂ ಚಿತ್ರರಂಗದಲ್ಲಿ ಪವರ್ ಗ್ರೂಪ್ ಇಲ್ಲ..’; ಜಸ್ಟೀಸ್ ಹೇಮಾ ಸಮಿತಿ ವರದಿ ಕುರಿತು ಮೌನ ಮುರಿದ ನಟ ಮಮ್ಮುಟ್ಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...