Homeಮುಖಪುಟದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೆ 15 ಮಂದಿ ಬಂಧನ

ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೆ 15 ಮಂದಿ ಬಂಧನ

- Advertisement -
- Advertisement -

13 ವರ್ಷದವಳಿದ್ದಾಗಿನಿಂದ ಪ್ರಾರಂಭಿಸಿ ಕಳೆದ ಐದು ವರ್ಷಗಳಲ್ಲಿ 60ಕ್ಕೂ ಹೆಚ್ಚು ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ ನಂತರ ಇಲ್ಲಿಯವರೆಗೆ 20 ಮಂದಿಯನ್ನು ಬಂಧಿಸಲಾಗಿದೆ ಮತ್ತು ಅವರ ಮೇಲೆ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗಳು ನಡೆದಾಗ ದೂರುದಾರರು ಅಪ್ರಾಪ್ತ ವಯಸ್ಕರಾಗಿದ್ದ ಕಾರಣ, ಬಂಧಿತರ ಮೇಲೆ ಪೋಕ್ಸೋ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಮತ್ತು ನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇನ್ನೂ ಹೆಚ್ಚಿನ ಬಂಧನಗಳನ್ನು ನಿರೀಕ್ಷಿಸಲಾಗಿದೆ. ಯುವತಿಯು ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಮಾಲೋಚನೆಯ ಸಮಯದಲ್ಲಿ ದೌರ್ಜನ್ಯವನ್ನು ಬಹಿರಂಗಪಡಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಇದರ ನಂತರ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪ್ರಕರಣವನ್ನು ಕೈಗೆತ್ತಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದೆ. ಪ್ರಸ್ತುತ ತನಿಖೆಯನ್ನು ಉಪಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ನಂದಕುಮಾರ್ ಮತ್ತು ಇನ್ಸ್‌ಪೆಕ್ಟರ್ ವಿನೋದ್ ಕೃಷ್ಣನ್ ನೇತೃತ್ವ ವಹಿಸಿದ್ದಾರೆ.

ಕೇರಳ ರಾಜ್ಯ ಮಹಿಳಾ ಆಯೋಗವು ಸಹ ಸ್ವಯಂಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ವರದಿಯನ್ನು ನೀಡಿದೆ.

2019ರಲ್ಲಿ ಯುವತಿಯ ನೆರೆಮನೆಯ ಸುಬಿನ್ (24) ಎಂಬಾತನು ಈಗ ದೂರು ನೀಡಿರುವ ಯುವತಿ ಅಂದು 13ನೇ ವಯಸ್ಸಿನಲ್ಲಿದ್ದಾಗ ಆಕೆಯ ನಗ್ನ ಛಾಯಾಚಿತ್ರಗಳನ್ನು ಸೆರೆಹಿಡಿದಾಗ ದೌರ್ಜನ್ಯ ಪ್ರಾರಂಭವಾಗಿತ್ತು. ನಂತರ ಬಾಲಕಿ 16 ವರ್ಷದವಳಿದ್ದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ, ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ ಮತ್ತು ಅವುಗಳನ್ನು ಇತರ ಆರೋಪಿಗಳೊಂದಿಗೆ ಹಂಚಿಕೊಂಡಿದ್ದ ಎಂದು ಆರೋಪಿಸಲಾಗಿದೆ ಮತ್ತು ನಂತರದ ವರ್ಷಗಳಲ್ಲಿ ಇತರರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಈ ದೌರ್ಜನ್ಯವನ್ನು ಸಾರ್ವಜನಿಕ ಸ್ಥಳಗಳು ಮತ್ತು ಆಕೆಯ ಶಾಲೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈ ಲೈಂಗಿಕ ದೌರ್ಜನ್ಯಗಳು ನಡೆದಿವೆ.

ಯುವತಿಯ ತಂದೆಯ ಫೋನ್‌ನಿಂದ ಪೊಲೀಸರು 40 ಜನ ಆರೋಪಿಗಳ ವಿವರಗಳನ್ನು ಸಂಗ್ರಹಿಸಿದ್ದಾರೆ.  ಯುವತಿಯು ಈ ಮೊದಲು ತನ್ನ ತಂದೆಯ ಮೊಬೈಲ್ ಅನ್ನು ತನ್ನ ಸಂವಹನಕ್ಕೆ ಬಳಕೆ ಮಾಡುತ್ತಿದ್ದು,  ಇದರಲ್ಲಿ ಯುವತಿ ಜೊತೆ ದೌರ್ಜನ್ಯವೆಸಗಿದವರು ಯುವತಿ ಜೊತೆ ಸಂವಹನ ನಡೆಸಿರುವ ವಿವರಗಳಿವೆ. ಆಕೆಯ ಪೋಷಕರಿಗೆ ಈ ದೌರ್ಜನ್ಯದ ಬಗ್ಗೆ ಸಂಪೂರ್ಣವಾಗಿ ತಿಳಿದಿರಲಿಲ್ಲ ಎಂದು ವರದಿಯಾಗಿದೆ.

ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಅವರು ಒಂದೇ ಪ್ರದೇಶದವರಾಗಿದ್ದರೂ, ಐದು ವರ್ಷಗಳ ಅವಧಿಯಲ್ಲಿ ಅವರು ಕೆಲಸಕ್ಕಾಗಿ ಬೇರೆ ಬೇರೆ ಸ್ಥಳಗಳಿಗೆ ತೆರಳಿದ್ದಾರೆ.

ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...