Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್‌ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು

ಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್‌ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು

- Advertisement -
- Advertisement -

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ 2023ರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಧಾರ್ಮಿಕ ನಾಯಕ ಆಸಾರಾಮ್ ಬಾಪು (ಅಸುಮಲ್ ಹರ್ಪಲಾನಿ) ಅವರಿಗೆ ರಾಜಸ್ಥಾನ ಹೈಕೋರ್ಟ್ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು ನೀಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣ

ಒಂದು ವಾರದ ಹಿಂದೆಯಷ್ಟೆ ಅತ್ಯಾಚಾರ ಪ್ರಕರಣದಲ್ಲಿ ಆಸಾರಾಮ್‌ಗೆ ಸುಪ್ರೀಂ ಕೋರ್ಟ್ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ನಂತರ, ಆಸಾರಾಮ್ ಅವರ ವಕೀಲರು ಅವರ ಶಿಕ್ಷೆಯನ್ನು ಅಮಾನತುಗೊಳಿಸಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಮಂಗಳವಾರ, ನ್ಯಾಯಮೂರ್ತಿಗಳಾದ ದಿನೇಶ್ ಮೆಹ್ತಾ ಮತ್ತು ವಿನೀತ್ ಕುಮಾರ್ ಮಾಥುರ್ ಅವರ ವಿಭಾಗೀಯ ಪೀಠವು ಧಾರ್ಮಿಕ ನಾಯಕನಿಗೆ ಮಧ್ಯಂತರ ಜಾಮೀನು ನೀಡಿದ್ದು, ಅರ್ಜಿಯು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ರೀತಿಯಲ್ಲೆ ಇದೆ ಎಂದು ಹೇಳಿದೆ. ಲೈಂಗಿಕ ದೌರ್ಜನ್ಯ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಒಂದು ಷರತ್ತನ್ನು ಹೊರತುಪಡಿಸಿ ಮಧ್ಯಂತರ ಜಾಮೀನಿನ ಷರತ್ತುಗಳು ಸುಪ್ರೀಂ ಕೋರ್ಟ್‌ನ ಜನವರಿ 7 ರ ಆದೇಶದಲ್ಲಿರುವಂತೆಯೇ ಇವೆ ಎಂದು ಅಸಾರಾಂ ಅವರ ವಕೀಲ ನಿಶಾಂತ್ ಬೋರಾ ಹೇಳಿದ್ದಾರೆ. “ಆಸಾರಾಮ್ ಜೋಧ್‌ಪುರದ ಹೊರಗೆ ಪ್ರಯಾಣಿಸಲು ಬಯಸಿದರೆ, ಅವರೊಂದಿಗೆ ಹೋಗಲು ಕೇಳಲಾದ ಮೂವರು ಕಾನ್‌ಸ್ಟೆಬಲ್‌ಗಳ ವೆಚ್ಚವನ್ನು ಅವರು ಭರಿಸಬೇಕಾಗುತ್ತದೆ” ಎಂದು ವಕೀಲರು ಪಿಟಿಐಗೆ ತಿಳಿಸಿದ್ದಾರೆ.

86 ವರ್ಷದ ಅವರು ಆಗಸ್ಟ್ 31, 2013 ರಿಂದ ಬಂಧನದಲ್ಲಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪಗಳನ್ನು ಎದುರಿಸುತ್ತಿದ್ದಾರೆ. ಜನವರಿ 2023 ರಲ್ಲಿ, ಗಾಂಧಿನಗರ ಸೆಷನ್ಸ್ ನ್ಯಾಯಾಲಯವು 2001 ಮತ್ತು 2006 ರ ನಡುವೆ ಮೋಟೆರಾದ ತಮ್ಮ ಆಶ್ರಮದಲ್ಲಿ 16 ವರ್ಷದ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಕ್ಕಾಗಿ ಅಸಾರಾಂಗೆ ಜೀವಾವಧಿ ಶಿಕ್ಷೆ ವಿಧಿಸಿತು.

ಶಿಕ್ಷೆಗೆ ಗುರಿಯಾಗುವ ಮೊದಲು, ಅಸಾರಾಂ ಒಬ್ಬ ಪ್ರಮುಖ ಧಾರ್ಮಿಕ ನಾಯಕರಾಗಿ ಜನಪ್ರಿಯರಾಗಿದ್ದರು. ಅವರು 1970 ರ ದಶಕದಲ್ಲಿ ಅಹಮದಾಬಾದ್‌ನ ಸಬರಮತಿ ನದಿಯ ಉದ್ದಕ್ಕೂ ತಮ್ಮ ಮೊದಲ ಆಶ್ರಮವನ್ನು ಸ್ಥಾಪಿಸಿದ್ದರು. ಮತ್ತು ಅಲ್ಲಿ ವಿವಿಧ ಉತ್ಪನ್ನಗಳು ಮತ್ತು ಆಧ್ಯಾತ್ಮಿಕ ಸಾಹಿತ್ಯವನ್ನು ಒಳಗೊಂಡ ಬಹುಕೋಟಿ ವ್ಯಾಪಾರ ಸಾಮ್ರಾಜ್ಯವನ್ನು ನಿರ್ಮಿಸಿದ್ದರು.

ಆಗಸ್ಟ್ 2024 ರಲ್ಲಿ, ಗುಜರಾತ್ ಹೈಕೋರ್ಟ್ ಅಸಾರಾಂ ಬಾಪು ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವ ಮನವಿಯನ್ನು ತಿರಸ್ಕರಿಸಿತ್ತು.

ಇದನ್ನೂಓದಿ:  ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಸಾರಿಗೆ ನೌಕರರಿಗೆ ಸಿಗದ ಕೊರೊನಾ ಪರಿಹಾರ – ಸರ್ಕಾರದ ನಡೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...