Homeಕರ್ನಾಟಕಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

- Advertisement -
- Advertisement -

ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್, ಜಾಮೀನು ನೀಡಲು ನಿರಾಕರಿಸಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದ್ದಾರೆ.

“ರೇವಣ್ಣ ಅವರನ್ನು ಬಂಧಿಸದಂತೆ ರಕ್ಷಣೆ ನೀಡಿದರೆ ಇಂದೇ ಎಸ್ಐಟಿ ಮುಂದೆ ಹಾಜರಾಗುತ್ತಾರೆ” ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದರು. ಆದರೆ, ಈ ಮನವಿಯನ್ನು ಪುರಸ್ಕರಿಸದ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ.

ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್‌ ಹಾಗೂ ವಿಶೇಷ ತನಿಖಾ ತಂಡದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ವಾದ ಮಂಡನೆ ಮಾಡಿದರು.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...