Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ಹೆಚ್‌. ಡಿ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ಹೆಚ್‌. ಡಿ ರೇವಣ್ಣ

- Advertisement -
- Advertisement -

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಮೊದಲ ಆರೋಪಿ, ಶಾಸಕ ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ನಿನ್ನೆ(ಮೇ 2) ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಇಂದಿಗೆ (ಮೇ 3) ಮುಂದೂಡಿದ್ದರು. ಇಂದು ನ್ಯಾಯಾಲಯಕ್ಕೆ ಹಾಜರಾದ ರೇವಣ್ಣ ಪರ ವಕೀಲರು ಅರ್ಜಿ ವಾಪಸ್ ಪಡೆದಿದ್ದಾರೆ ಎಂದು ವರದಿಯಾಗಿದೆ.

ಎಸ್‌ಐಟಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿ.ಎನ್‌ ಜಗದೀಶ್, ರೇವಣ್ಣ ಪ್ರಕರಣದಲ್ಲಿ ಸೆಕ್ಷನ್ 376 (ಅತ್ಯಾಚಾರ) ಸೇರ್ಪಡೆ ಮಾಡಿಲ್ಲ. ಅತ್ಯಾಚಾರ ಆರೋಪ ಇಲ್ಲದಿರುವ ಕಾರಣ ನಿರೀಕ್ಷಣಾ ಜಾಮೀನು ಕೋರಿಕೆಯ ಅರ್ಜಿ ವಿಚಾರಣೆ ಅಗತ್ಯವಿಲ್ಲ. ಆರೋಪಿ ವಿರುದ್ದ ಜಾಮೀನು ನೀಡಬಹುದಾದ ಆರೋಪಗಳು ಮಾತ್ರ ಇವೆ ಎಂದು ತಿಳಿಸಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿಕೆ ಹಿನ್ನೆಲೆ ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯಕ್ ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮೈಸೂರು: ಮಹಿಳೆ ನಾಪತ್ತೆ; ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...