Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಹಾಸನದ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಹೇಳಿಕೆ ಅಗತ್ಯವಿದೆ. ಹೀಗಾಗಿ, ಸಿಆರ್‌ಪಿಸಿ 41 (ಎ) ಅಡಿ ರೇವಣ್ಣ ಹಾಗೂ ಪ್ರಜ್ವಲ್‌ಗೆ ನೋಟಿಸ್ ನೀಡಲಾಗಿದೆ ಎಂದು ಎಸ್ಐಟಿ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಎಸ್‌ಐಟಿ ಸೂಚಿಸಿದೆ. ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ ಎಂದು ವರದಿಗಳು ತಿಳಿಸಿವೆ.

ನೂರಾರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡಿರುವ ಆರೋಪ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿದೆ. ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದೆ.

ಇದನ್ನೂ ಓದಿ : ಲೈಂಗಿಕ ಹಗರಣ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...