Homeಕರ್ನಾಟಕ3ವರ್ಷದ ಮಗುವಿನ ಮೇಲೆ ಚಿಕ್ಕಪ್ಪನಿಂದಲೇ ಲೈಂಗಿಕ ದೌರ್ಜನ್ಯ: 5 ವರ್ಷ ಕಠಿಣ ಜೈಲು ಶಿಕ್ಷೆ

3ವರ್ಷದ ಮಗುವಿನ ಮೇಲೆ ಚಿಕ್ಕಪ್ಪನಿಂದಲೇ ಲೈಂಗಿಕ ದೌರ್ಜನ್ಯ: 5 ವರ್ಷ ಕಠಿಣ ಜೈಲು ಶಿಕ್ಷೆ

- Advertisement -
- Advertisement -

ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮಗುವಿನ ಚಿಕ್ಕಪ್ಪನಿಗೆ 5 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಒಂದನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ
ನೀಡಿದೆ.

2022ರಲ್ಲಿ ಚಂದ್ರಾಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಬಗ್ಗೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ರೋ) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು.

ನ್ಯಾಯಾಧೀಶೆ ರೂಪಾ ಕೆ.ಎನ್. ಅವರು ಈ ಪ್ರಕರಣದ ವಿಚಾರಣೆಯನ್ನು ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಕೃಷ್ಣವೇಣಿ ವಾದಿಸಿದ್ದರು.

ಆ ಮಗುವಿನ ಚಿಕ್ಕಪ್ಪ ಭದ್ರತಾ ಸಿಬ್ಬಂದಿ ಕೆಲಸ ಮಾಡುತ್ತಿದ್ದನು. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ಮಗುವಿನ ತಾಯಿ ಠಾಣೆಗೆ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

”ನ್ಯಾಯಾಲಯವು ಅಪರಾಧಿಗೆ 75 ಸಾವಿರ ರೂ. ದಂಡ ವಿಧಿಸಿದೆ. ಜೊತೆಗೆ, ಮಗುವಿಗೆ 50,000 ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಿದೆ” ಎಂದು ತಿಳಿಸಿದರು.

ಇದನ್ನೂ ಓದಿ: ಶಿವಮೊಗ್ಗ: ಲೈಂಗಿಕ ದೌರ್ಜನ್ಯದಿಂದ ಬಾಲಕಿ ಆತ್ಮಹತ್ಯೆ ಪ್ರಕರಣ; ಆರೋಪಿಗೆ 20ವರ್ಷ ಜೈಲು, 1.25ಲಕ್ಷ ದಂಡ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

0
ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾ ಮತದಾನ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಎರಡು ದಿನಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್‌ನ...