Homeಮುಖಪುಟ142 ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲನ ಬಂಧನ

142 ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರಾಂಶುಪಾಲನ ಬಂಧನ

- Advertisement -
- Advertisement -

ಹರಿಯಾಣದ ಜಿಂದ್‌ನ ಸರ್ಕಾರಿ ಶಾಲೆಯೊಂದರಲ್ಲಿ ಓದುತ್ತಿರುವ 142 ಅಪ್ರಾಪ್ತ ಬಾಲಕಿಯರು ಶಾಲೆಯ ಪ್ರಾಂಶುಪಾಲ ಕಳೆದ ಆರು ವರ್ಷಗಳಿಂದ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ನೇತೃತ್ವದ ತನಿಖಾ ಸಮಿತಿಯು ಶಾಲೆಯ ಒಟ್ಟು 390 ಬಾಲಕಿಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ನಾವು ಹುಡುಗಿಯರ ಮೇಲಿನ ಲೈಂಗಿಕ ದೌರ್ಜನ್ಯದ 142 ದೂರುಗಳನ್ನು ಮುಂದಿನ ಕ್ರಮಕ್ಕಾಗಿ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ರವಾನಿಸಿದ್ದೇವೆ” ಎಂದು ಜಿಂದ್ ಜಿಲ್ಲೆಯ ಉಪ ಆಯುಕ್ತ ಮೊಹಮ್ಮದ್ ಇಮ್ರಾನ್ ರಝಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

142 ಹುಡುಗಿಯರಲ್ಲಿ ಹೆಚ್ಚಿನವರು ಪ್ರಾಂಶುಪಾಲರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಉಳಿದವರು ಪ್ರಾಂಶುಪಾಲರ ಭಯಾನಕ ಕೃತ್ಯಕ್ಕೆ ಸಾಕ್ಷಿಯಾಗಿದ್ದಾರೆ ಎಂದು ಉಪ ಆಯುಕ್ತ ಮಾಹಿತಿ ನೀಡಿದ್ದಾರೆ. ಆರೋಪಿ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದು, ಸದ್ಯ ಆತ ಜೈಲಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಗಮನಾರ್ಹ ಸಂಗತಿಯೆಂದರೆ, ಪ್ರಾಂಶುಪಾಲರ ದುಷ್ಕೃತ್ಯದ ಕುರಿತು ಸುಮಾರು 15 ಹುಡುಗಿಯರು ಈ ಹಿಂದೆ ಆಗಸ್ಟ್ 31 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿದ್ದರು.

ಸೆಪ್ಟೆಂಬರ್ 13 ರಂದು, ಹರಿಯಾಣ ಮಹಿಳಾ ಆಯೋಗವು ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕಾಗಿ ಜಿಂದ್ ಪೊಲೀಸರಿಗೆ ರವಾನಿಸಿತ್ತು. ಆದರೆ, ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಯನ್ನು ನವೆಂಬರ್ 4 ರಂದು ಬಂಧಿಸಿದ ಪೊಲೀಸರು ನವೆಂಬರ್ 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸರ್ಕಾರಿ ಶಾಲೆಯ 60 ಬಾಲಕಿಯರು ಪ್ರಾಂಶುಪಾಲರ ವಿರುದ್ಧ ಹೇಳಿಕೆ ದಾಖಲಿಸಲು ಮುಂದೆ ಬಂದಿದ್ದರು ಎಂದು ರಾಜ್ಯ ಮಹಿಳಾ ಆಯೋಗ ಈ ಹಿಂದೆ ಹೇಳಿತ್ತು. ಆದರೆ, ಈಗ ಸಂಖ್ಯೆ 142ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪೊಲೀಸರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ತ್ವರಿತವಾಗಿ ಕ್ರಮ ಕೈಗೊಂಡಿಲ್ಲ. ವಿಶೇಷವಾಗಿ ಪೋಕ್ಸೋ ಕಾಯ್ದೆಯ ಉಪವಿಭಾಗ 19, 20 ಮತ್ತು 21 ರ ಪ್ರಕಾರ ತಕ್ಷಣ ಎಫ್‌ಐಆರ್ ದಾಖಲು ಮಾಡಿಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಶ್ರೇಣಿಯ ಮೂವರು ಅಧಿಕಾರಿಗಳ ತಂಡ ನಡೆಸಿದ ವಿಚಾರಣೆ ವೇಳೆ ಪ್ರಾಂಶುಪಾಲ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆತನ ವಿರುದ್ದ ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪ: ಓವೈಸಿ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...