Homeಮುಖಪುಟಮಧ್ಯಪ್ರದೇಶದ ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಒಟ್ಟು 15 ಆರೋಪಿಗಳ ಬಂಧನ

ಮಧ್ಯಪ್ರದೇಶದ ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಒಟ್ಟು 15 ಆರೋಪಿಗಳ ಬಂಧನ

- Advertisement -
- Advertisement -

ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಇಬ್ಬರು ಆದಿವಾಸಿ ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ 15 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಘಟನೆಯ ವಿಡಿಯೋ ಶನಿವಾರದಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬಳಿಕ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದರ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದರು.

“ಘಟನೆಯ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಇದು ಸೂಕ್ಷ್ಮ ವಿಷಯವಾದ್ದರಿಂದ, ಸುಮೊಟೊ ಪ್ರಕರಣ ದಾಖಲಿಸಿ ತನಿಖೆ ಮಾಡಲು ಪ್ರಾರಂಭಿಸಿದ್ದೇವೆ. ಈಗಾಗಲೆ 15 ಜನರನ್ನು ಬಂಧಿಸಿದ್ದೇವೆ” ಎಂದು ಅಲಿರಾಜಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಸಿಂಗ್ ಹೇಳಿದ್ದಾರೆ.

ವೈರಲ್‌ ಆಗಿರುವ ವಿಡಿಯೊದಲ್ಲಿ ಇಬ್ಬರು ಹೆಣ್ಣುಮಕ್ಕಳಿಗೆ ಯುವಕರ ಗುಂಪು ಕಿರುಕುಳ ನೀಡುತ್ತಿರುವುದು ದಾಖಲಾಗಿತ್ತು. ವಾಹನದ ಮರೆಯಲ್ಲಿದ್ದ ಯುವತಿಗೆ ಕಿರುಕುಳ ನೀಡುತ್ತಿರುವುದು ಒಂದೆಡೆಯಾದರೆ, ಮತ್ತೊಬ್ಬ ಬಾಲಕಿಯನ್ನು ನಡುಬೀದಿಯಲ್ಲಿ ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಜೊತೆಗೆ ಮತ್ತೊಂದು ಗುಂಪಿನ ಆರೋಪಿಗಳು ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

ಇದನ್ನೂ ಓದಿ: ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌

ಸ್ಥಳೀಯ ವಾರ್ಷಿಕ ಜಾತ್ರೆ ‘ಭಗೋರಿಯಾ ಮೇಳ’ದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಘಟನೆ ಮಾರ್ಚ್ 11 ರಂದು ಸಂಭವಿಸಿದ್ದು, ವಿಡಿಯೊ ವೈರಲ್ ಆದ ನಂತರವೇ ಅವರಿಗೆ ಘಟನೆಯ ಬಗ್ಗೆ ತಿಳಿದು ಬಂದಿತ್ತು.

“ವೀಡಿಯೊ ವೈರಲ್ ಆದ ನಂತರ ನಾವು ಸ್ವಯಂ ಪ್ರೇರಿತ ಕ್ರಮ ಕೈಗೊಂಡಿದ್ದೇವೆ. ಸಂತ್ರಸ್ತರು ದೂರು ನೀಡಲು ಮುಂದೆ ಬಂದಿಲ್ಲ. ವೀಡಿಯೋ ಆಧಾರದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗಳನ್ನು ಗುರುತಿಸಿದ್ದೇವೆ” ಎಂದು ಎಸ್ಪಿ ಹೇಳಿದ್ದರು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಎ) (ಹೆಣ್ಣಿನ ಘನತೆಯ ಮೇಲೆ ಹಲ್ಲೆ) ಮತ್ತು 34 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾತ್ರೆ ನಡೆಯುವ ಜಾಗಗಳಲ್ಲಿ ಹೆಚ್ಚಿನ ಸಿಸಿಟಿವಿಗಳ ಅಳವಡಿಕೆ, ಪೊಲೀಸ್‌ ಬಂದೋಬಸ್ತ್‌ ಹೆಚ್ಚಿಸುವುದು ಸೇರಿದಂತೆ ಹಲವು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಬುಡಕಟ್ಟು ಪ್ರಾಬಲ್ಯದ ಜಿಲ್ಲೆಗಳಾದ ಝಬುವಾ, ಧಾರ್, ಅಲಿರಾಜಪುರ, ಬರ್ವಾನಿ ಮತ್ತು ಪಶ್ಚಿಮ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಒಂದು ವಾರದ ಅವಧಿಯ ಭಗೋರಿಯಾ ಜಾತ್ರೆಯನ್ನು ಆಚರಿಸಲಾಗುತ್ತದೆ. ಇದು ಆದಿವಾಸಿಗಳ ದೊಡ್ಡ ಹಬ್ಬವೆಂದು ಪರಿಗಣಿಸಲ್ಪಟ್ಟಿದೆ. ಪ್ರತಿ ವರ್ಷ ಗಂಗಾ ಮಹಾದೇವನ ದೇವಸ್ಥಾನದಲ್ಲಿ ಜಾತ್ರೆಯನ್ನು ಆಯೋಜಿಸುವುದರೊಂದಿಗೆ ಹಬ್ಬ ಪ್ರಾರಂಭವಾಗುತ್ತದೆ. ಅಲಿರಾಜಪುರದ ವಾಲ್ಪುರ್‌ನ ಭಗೋರಿಯಾ ಹಬ್ಬ ಬಹಳ ಜನಪ್ರಿಯವಾಗಿದೆ.

ಇದನ್ನೂ ಓದಿ:  9 ಮಕ್ಕಳು ಸೇರಿದಂತೆ 20 ಆದಿವಾಸಿಗಳನ್ನು ಬಂಧಿತ ಕಾರ್ಮಿಕರಾಗಿ ರಾಜ್ಯಕ್ಕೆ ಕರೆತರಲಾಗಿದೆ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...