Homeಕರ್ನಾಟಕದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ ಪತ್ನಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಒಬ್ಬಳು ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯ ಸಹೋದರಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಶಾಲೆಯ ಮಾಲೀಕ ಧನಂಜಯ ಹಾಗೂ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲೆಯಾಗಿರುವ ಧನಂಜಯನ ಪತ್ನಿ ಶೈಲಜಾಳನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಅಕ್ಕ-ತಂಗಿ ವಸತಿ ಶಾಲೆಯಲ್ಲಿ 8 ಮತ್ತು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಫೆ.9ರಂದು ಧನಂಜಯ ಶಾಲೆಯ ಕೊಠಡಿಯೊಂದರಲ್ಲಿ ಅಕ್ಕನ ಮೇಲೆ ಎರಡು ಬಾರಿ ಅತ್ಯಾಚಾರವೆಸಗಿದ್ದ. ನಂತರ ತಂಗಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಶೌಚಾಲಯದಲ್ಲಿ ಅಡಗಿಕೂತು ತಪ್ಪಿಸಿಕೊಂಡಿದ್ದಾಳೆ ಎಂದು ವರದಿಗಳು ವಿವರಿಸಿವೆ.

ಪತ್ನಿಯಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ

ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕಲು ಶಾಲೆಯ ಪ್ರಾಂಶುಪಾಲೆಯಾಗಿರುವ ಆರೋಪಿಯ ಪತ್ನಿ ಶೈಲಜಾ ಯತ್ನಿಸಿದ್ದಳು. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭ ಧರಿಸದಂತೆ ನೋಡಿಕೊಳ್ಳಲು ವಾರಗಟ್ಟಲೆ ಆಕೆಗೆ ಬಲವಂತವಾಗಿ ಪರಂಗಿ ಹಣ್ಣು ತಿನ್ನಿಸಿದ್ದಳು. ನಡೆದ ವಿಷಯವನ್ನು ಯಾರಲ್ಲೂ ಹೇಳಬಾರದು. ಎಸ್‌ಎಸ್‌ಎಲ್‌ಸಿವರೆಗೆ ಯಾವುದೇ ಶುಲ್ಕ ಪಡೆಯದೆ ಓದಿಸುತ್ತೇವೆ, ಚೆನ್ನಾಗಿ ನೋಡಿಕೊಳ್ಳುತ್ತೇವೆ ಎಂದು ಬಾಲಕಿಗೆ ಆಮಿಷವೊಡ್ಡಿದ್ದಳು. ಅಲ್ಲದೆ, ಯಾರಲ್ಲಾದರು ವಿಷಯ ಹೇಳಿದರೆ ಫೇಲ್ ಮಾಡುವುದಾಗಿ ಬೆದರಿಸಿದ್ದಳು ಎಂದು ಆರೋಪಿಸಲಾಗಿದೆ.

ಪ್ರಕರಣ ನಡೆದ ದಿನದಿಂದ ಬಾಲಕಿಯರನ್ನು ಅವರ ಪಾಲಕರು ಭೇಟಿಯಾಗದಂತೆ ನೋಡಿಕೊಳ್ಳಲಾಗಿತ್ತು. ಮಕ್ಕಳು ಪ್ರವಾಸಕ್ಕೆ ತೆರಳಿದ್ದಾರೆ, ಪರೀಕ್ಷೆಗೆ ಓದಿಕೊಳ್ಳುತ್ತಿದ್ದಾರೆ ಎಂಬ ನೆಪಗಳನ್ನು ಹೇಳಿ ಅವರು ಪೋಷಕರ ಸಂಪರ್ಕಕ್ಕೆ ಸಿಗದಂತೆ ಮಾಡಲಾಗಿತ್ತು. ಕೊನೆಗೆ ಪಾಲಕರು ಒತ್ತಾಯ ಮಾಡಿದಾಗ 5 ನಿಮಿಷಗಳ ಕಾಲ ಮಾತ್ರ ಪೋಷಕರನ್ನು ಭೇಟಿಯಾಗಲು ಮಕ್ಕಳಿಗೆ ಅವಕಾಶ ನೀಡಲಾಗಿತ್ತು. ಈ ವೇಳೆ ಮಕ್ಕಳು ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದರು. ಪೋಷಕರು ದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರು ಮಲಗುತ್ತಿದ್ದ ಕೊಠಡಿಗೆ ಬೋಲ್ಟ್- ಬೀಗವೇ ಇರಲಿಲ್ಲ ಎಂಬುವುದು ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ಧನಂಜಯ ಉದ್ದೇಶಪೂರ್ವಕವಾಗಿಯೇ ಕೊಠಡಿಯನ್ನು ಸುಲಭವಾಗಿ ಪ್ರವೇಶಿಸಲು ಈ ರೀತಿ ಮಾಡಿದ್ದನೇ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ ದಿನ ವಸತಿ ಶಾಲೆಯ ವಾರ್ಡನ್ ಆಗಿರುವ ತನ್ನ ಅತ್ತೆಯನ್ನು ಆರೋಪಿ ಮನೆಗೆ ಕಳುಹಿಸಿದ್ದ ಎಂದು ವರದಿಗಳು ಉಲ್ಲೇಖಿಸಿವೆ.

ಇಬ್ಬರು ಆರೋಪಿಗಳ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಶಾಲೆಗೆ ತಾತ್ಕಾಲಿಕ ರಜೆ ಘೋಷಿಸಲಾಗಿದೆ. ಶಾಲೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಭೇಟಿ ಮಾಹಿತಿ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...