Homeಮುಖಪುಟಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ: ಆತ್ಮಹತ್ಯೆಗೆ ಯತ್ನ, ಬಿಜೆಪಿ ಮುಖಂಡನ ಪುತ್ರನೇ ಆರೋಪಿ

ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ: ಆತ್ಮಹತ್ಯೆಗೆ ಯತ್ನ, ಬಿಜೆಪಿ ಮುಖಂಡನ ಪುತ್ರನೇ ಆರೋಪಿ

- Advertisement -
- Advertisement -

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಅಪ್ರಾಪ್ತ ಸಹೋದರಿಯ ಮೇಲೆ ಬಿಜೆಪಿ ಮುಖಂಡನ ಮಗ ಸೇರಿದಂತೆ ನಾಲ್ವರು ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ನಡೆದಿದೆ.

17 ಮತ್ತು 19 ವರ್ಷ ವಯಸ್ಸಿನ ಇಬ್ಬರು ಶಾಲಾ ಬಾಲಕಿಯರು ಸಂತ್ರಸ್ತಾರಗಿದ್ದಾರೆ. ನಾಲ್ವರು ಆರೋಪಿಗಳಲ್ಲಿ ಓರ್ವ ಮಧ್ಯಪ್ರದೇಶದ ಬಿಜೆಪಿ ಮುಖಂಡನ ಮಗನಾಗಿದ್ದಾನೆ. ಸಂತ್ರಸ್ತರ ಸಂಬಂಧಿಕರು ಮತ್ತು ಸ್ಥಳೀಯರು ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು. ಆ ನಂತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರದೇಶವು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ತವರು ಕ್ಷೇತ್ರವಾಗಿದೆ, ಅವರು ಡಾಟಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

19 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಸಾಮೂಹಿಕ ಅತ್ಯಾಚಾರದಿಂದ ಬದುಕುಳಿದ ಯುವತಿ ಆತ್ಮಹತ್ಯೆಗೆ ಯತ್ನಿಸಿದಳು ಆದರೆ ಆಕೆಯ ಕುಟುಂಬ ಸದಸ್ಯರು ರಕ್ಷಿಸಿದ್ದಾರೆ.

ಈ ಘಟನೆ ಬಗ್ಗೆ ಪೊಲೀಸರ ತಾತ್ಸಾರ ತೋರಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನಂತರ ಪೊಲೀಸರು ಶುಕ್ರವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ. ಅಪರಾಧದಲ್ಲಿ ಭಾಗಿಯಾಗಿರುವವರಲ್ಲಿ ಮೂವರು ಅಪ್ರಾಪ್ತರು ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಹೋದರಿಯರು ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಶಂಕಿತ ಆರೋಪಿಯ ಮನೆಗೆ ಇಬ್ಬರನ್ನೂ ಎಳೆದೊಯ್ದು, ಅಲ್ಲಿ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರು ಮನೆಗೆ ತಲುಪಿದಾಗ ಮತ್ತು ಮೌನವಾಗಿದ್ದಾಗ ಸಹೋದರಿಯರು ತೀವ್ರವಾಗಿ ಆಘಾತಕ್ಕೊಳಗಾಗಿದ್ದರು. ಆದರೆ ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದಾಗ, ಆಕೆಯ ಕಿರಿಯ ಸಹೋದರಿ ತಮ್ಮ ಪೋಷಕರಿಗೆ ಘಟನೆ ಬಗ್ಗೆ ತಿಳಿಸಿದ್ದಾಳೆ. ಆನಂತರ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಹೋದರಿಯರನ್ನು ಝಾನ್ಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಾರೆ ಹಾಗಾಗಿ ಸ್ಥಳೀಯರು ಕ್ರಮಕ್ಕಾಗಿ ಒತ್ತಾಯಿಸಿ ರಾತ್ರಿ 9.30 ಕ್ಕೆ ಉನಾವ್ ಪೊಲೀಸ್ ಠಾಣೆಗೆ ಘೇರಾವ್ ಹಾಕಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆಬಳಿಕ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಮೂವರು ಆರೋಪಿಗಳು ಬಂಧನದಲ್ಲಿದ್ದು, ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‌ಪಿ ಶರ್ಮಾ ತಿಳಿಸಿದ್ದಾರೆ. ಅವರ ವಿರುದ್ಧ ಅಕ್ರಮ ಬಂಧನ, ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಲಾಗಿದೆ.

(ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಆಕೆಯ ಗೌಪ್ಯತೆಯನ್ನು ರಕ್ಷಿಸಲು ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲಾಗಿಲ್ಲ)

ಇದನ್ನೂ ಓದಿ: ಧರ್ಮಸ್ಥಳದ “ನಿರ್ಭಯಾ” ಅತ್ಯಾಚಾರ-ಕೊಲೆ ಕೇಸ್: ಆರೋಪಿ ಸಂತೋಷ್ ರಾವ್ ನಿರ್ದೋಷಿ; ಅಸಲಿ ಅಪರಾಧಿಗಳನ್ನೇಕೆ ಹಿಡಿಯಲಾಗುತ್ತಿಲ್ಲ?! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...