Homeಕರ್ನಾಟಕಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಹರತಾಳು ಹಾಲಪ್ಪ ಆಪ್ತ ಅರುಣ್ ಕುಗ್ವೆ ಬಂಧನ

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಹರತಾಳು ಹಾಲಪ್ಪ ಆಪ್ತ ಅರುಣ್ ಕುಗ್ವೆ ಬಂಧನ

- Advertisement -
- Advertisement -

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ‌ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಆಕೆಯ ಕುಟುಂಬಕ್ಕೆ ಜೀವ‌ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ಮಾಜಿ ಸಚಿವ, ಹಾಗೂ ಬಿಜೆಪಿ ಮುಖಂಡ ಹರತಾಳು ಹಾಲಪ್ಪ ಅವರ ಆಪ್ತ ಅರುಣ್ ಕುಗ್ವೆ ಎಂಬಾತನನ್ನು ಶಿವಮೊಗ್ಗ ಪೊಲೀಸರು ಇಂದು ಬೆಳಿಗ್ಗೆ (ಜೂನ್ 23) ಬಂಧಿಸಿದ್ದಾರೆ.

ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅರುಣ್ ಕುಗ್ವೆಯನ್ನು ಆತನ ಮನೆಯಿಂದ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಆರೋಪಗಳ ಮೇಲೆ ಅರುಣ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

“ಶಿವಮೊಗ್ಗ ನಿವಾಸಿಯಾದ ನನ್ನೊಂದಿಗೆ ಉದ್ಯಮಿ ಮತ್ತು ರಾಜಕಾರಣಿ ಎಂದು ಹೇಳಿಕೊಂಡಿದ್ದ ಅರುಣ್ ಕುಮಾರ್ ಸಂಪರ್ಕ ಬೆಳೆಸಿದ್ದ. ನಂತರ, ವಿವಿಧ ಆಮಿಷ ತೋರಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ ಬಲಾತ್ಕಾರ ಮಾಡಿರುತ್ತಾನೆ. ಜೋಗ, ಶಿವಮೊಗ್ಗ ಮತ್ತಿತರ ಕಡೆಗಳಲ್ಲಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿರುತ್ತಾನೆ. ಬಲಾತ್ಕಾರವಾಗಿ ವಿಡಿಯೋ ಚಿತ್ರೀಕರಣ, ಫೋಟೋ ತೆಗೆದುಕೊಂಡಿದ್ದಾನೆ.‌ ರೌಡಿ ಹಿನ್ನೆಲೆ ಇರುವ ಅರುಣ್, ತನ್ನ ಬೇಡಿಕೆಗೆ ಒಪ್ಪದಿದ್ದರೆ ಕೊಲೆ ಮಾಡಿ ಜೈಲಿಗೆ ಹೋಗುವ ಬೆದರಿಕೆ ಒಡ್ಡಿರುತ್ತಾನೆ. ಇತ್ತೀಚೆಗೆ ಬೇರೆ ಹುಡುಗಿಯರೊಂದಿಗೆ ಇದೇ ರೀತಿ ವರ್ತಿಸಿದ್ದು ಕಂಡು ಬಂದಾಗ, ಆ ಬಗ್ಗೆ ಕೇಳಿದ್ದಕ್ಕೆ ಜೀವ ಬೆದರಿಕೆ ಒಡ್ಡಿರುತ್ತಾನೆ. ಈ ನಡುವೆ ಬೇರೊಬ್ಬ ಯುವತಿಯೊಂದಿಗೆ ಮದುವೆ ನಿಶ್ಚಯ ಮಾಡಿಕೊಂಡಿರುತ್ತಾನೆ. ಅದನ್ನು ಪ್ರಶ್ನಿಸಿದ್ದಕ್ಕೆ ಆತನ ಸೋದರ ಗಣೇಶ್ ಎಂಬುವವನು ನನಗೆ ಮತ್ತು ನನ್ನ ಕುಟುಂಬದವರಿಗೆ ಜೀವ ಬೆದರಿಕೆ ಒಡ್ಡಿರುತ್ತಾನೆ” ಎಂದು ಯುವತಿ ದೂರು ನೀಡಿದ್ದಾರೆ.‌

ಈ ಹಿನ್ನೆಲೆ ಅರುಣ್ ಕುಗ್ವೆ ಮತ್ತು ಗಣೇಶ್ ಇಬ್ಬರ ಮೇಲೆ ಐಪಿಸಿ ಸೆಕ್ಷನ್ 354, 376 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.

ಅರುಣ್ ಕುಗ್ವೆ ಮೇಲೆ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿದ್ದು, ಈ ಹಿಂದೆ ಗಡಿಪಾರು ಸೂಚನೆಯನ್ನೂ ನೀಡಲಾಗಿದ್ದ ಹಿನ್ನೆಲೆ, ಪೊಲೀಸರು ಪ್ರಕರಣದ ಗಂಭೀರತೆಯನ್ನು ಅರಿತು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ; ಪ್ರಕರಣದ ವಿಚಾರಣೆ ಹೊಣೆ ಸಿಐಡಿಗೆ ಹಸ್ತಾಂತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...