Homeಮುಖಪುಟಆಸ್ಪತ್ರೆಯಲ್ಲಿ ಲೈಂಗಿಕ ಕಿರುಕುಳ: ಸನ್ನೆಗಳ ಮೂಲಕ ವಿಷಯ ತಿಳಿಸಿದ ಯುವತಿ!

ಆಸ್ಪತ್ರೆಯಲ್ಲಿ ಲೈಂಗಿಕ ಕಿರುಕುಳ: ಸನ್ನೆಗಳ ಮೂಲಕ ವಿಷಯ ತಿಳಿಸಿದ ಯುವತಿ!

21 ವರ್ಷದ ಯುವತಿ ಕ್ಷಯರೋಗದಿಂದ ಬಳಲುತ್ತಿದ್ದು, ಅಕ್ಟೋಬರ್ 21 ರಂದು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಳು.

- Advertisement -
- Advertisement -

ಆಸ್ಪತ್ರೆಗೆ ದಾಖಲಾಗಿರುವ ಯುವತಿಯೊಬ್ಬಳು ಅಲ್ಲಿ ತನ್ನ ಮೇಲೆ ನಡೆದಿರುವ ಲೈಂಗಿಕ ಕಿರುಕುಳವನ್ನು ಸನ್ನೆಗಳ ಮೂಲಕ ತನ್ನ ತಂದೆಗೆ ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುಗ್ರಾಮ್ ಖಾಸಗಿ ಆಸ್ಪತ್ರೆಗೆ ದಾಖಲಾದ ಯುವತಿಗೆ ಆರು ದಿನಗಳ ನಂತರ ಪ್ರಜ್ಞೆ ಬಂದಿರುವುದಾಗಿಯೂ, ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ವಿಷಯ ಹೇಳಿದ್ದಾಳೆ ಎಂದು ಆಕೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಸುಶಾಂತ್ ಲೋಕ್ ಪೊಲೀಸ್ ಠಾಣೆಯಲ್ಲಿ ಯುವತಿಯ ತಂದೆ ದೂರು ನೀಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿ, ಎಫ್‌ಐಆರ್‌ ಹಾಕಿದ್ದಾರೆ.

21 ವರ್ಷದ ಯುವತಿ ಕ್ಷಯರೋಗದಿಂದ ಬಳಲುತ್ತಿದ್ದು, ಅಕ್ಟೋಬರ್ 21 ರಂದು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಅಕ್ಟೋಬರ್ 27 ರಂದು ಆಕೆಗೆ ಪ್ರಜ್ಞೆ ಬಂದನಂತರ, ವಿಕಾಸ್ ಎಂಬ ವ್ಯಕ್ತಿ ತನಗೆ ಕಿರುಕುಳ ನೀಡಿದ್ದಾನೆ ಎಂದು ತನ್ನ ತಂದೆಗೆ ಸನ್ನೆಗಳ ಮೂಲಕ ಹೇಳಿದ್ದಳು.

ಇದನ್ನೂ ಓದಿ: ಕೇರಳ: ಅತ್ಯಾಚಾರಕ್ಕೊಳಗಾದ 16 ವರ್ಷದ ದಲಿತ ಯುವತಿ ಆತ್ಮಹತ್ಯೆಗೆ ಯತ್ನ!

ದೂರನ್ನು ಸ್ವೀಕರಿಸಿದ ನಂತರ, ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ಪಡೆಯಲು ಪ್ರಯತ್ನಿಸಿದರು. ಆದರೆ ಅವರು ಮಾತನಾಡುವ ಸ್ಥಿತಿಯಲ್ಲಿಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂಬುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮಕ್ಸೂದ್ ಅಹ್ಮದ್ ತಿಳಿಸಿದ್ದಾರೆ. ಆರೋಪಿ ವಿಕಾಸ್ ಆಸ್ಪತ್ರೆಯಲ್ಲಿ ಕೆಲಸಗಾರನೇ ಅಥವಾ ಇಲ್ಲವೇ ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಹ್ಮದ್ ತಿಳಿಸಿದ್ದಾರೆ.


ಇದನ್ನೂ ಓದಿ: ಒಂದೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; 6 ವರ್ಷದ ನಂತರ ಅಪರಾಧಿಗೆ ಮರಣದಂಡನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...