Homeಮುಖಪುಟಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಮೇಲೂ ಲೈಂಗಿಕ ದೌರ್ಜನ್ಯ ಆರೋಪ: ಯುವಕನಿಂದ ದೂರು!

ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಮೇಲೂ ಲೈಂಗಿಕ ದೌರ್ಜನ್ಯ ಆರೋಪ: ಯುವಕನಿಂದ ದೂರು!

- Advertisement -
- Advertisement -

ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ.

ಸೂರಜ್ ರೇವಣ್ಣ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹಾಸನ ಜಿಲ್ಲೆ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಬೆಂಗಳೂರಿನಲ್ಲಿ ಮುಖಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಸುಮಾರು 16 ಪುಟಗಳ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತ ಯುವಕ ಲೋಕಸಭೆ ಚುನಾವಣೆಯ ವೇಳೆ ಹಾಸನದ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ. ಈ ವೇಳೆ ಆತನನ್ನು ಪರಿಚಯ ಮಾಡಿಕೊಂಡಿದ್ದ ಸೂರಜ್ ರೇವಣ್ಣ, ಬಳಿಕ ಆತನಿಗೆ ಮೆಸೇಜ್ ಮಾಡಿ ಆಪ್ತತೆ ಬೆಳೆಸಿಕೊಂಡಿದ್ದರು. ಜೂನ್ 16ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವಕ ದೂರಿನಲ್ಲಿ ಆರೋಪಿಸಿದ್ದಾಗಿ ತಿಳಿದು ಬಂದಿದೆ.

“ಕಳೆದ ಜೂನ್ 16ರ ಭಾನುವಾರಂದು ತನಗೆ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದ ಸೂರಜ್ ರೇವಣ್ಣ, ಗನ್ನಿಕಡದ ತೋಟದ ಮನೆಗೆ ಆಹ್ವಾನಿಸಿದ್ದಕ್ಕೆ ತೆರಳಿದ್ದೆ. ತನಗೆ ಉದ್ಯೋಗದ ನೆರವು ನೀಡುವುದಾಗಿ ಭರವಸೆ ಕೊಟ್ಟು ಕರೆಸಿಕೊಂಡಿದ್ದರು. ಸಂದೇಶ ನಂಬಿಕೊಂಡು ಅಲ್ಲಿಗೆ ಹೋಗಿದ್ದೆ. ನಾನು ತೋಟದ ಮನೆಗೆ ತಲುಪಿಪಿದ ಬಳಿಕ, ಅಲ್ಲಿನ ಕೊಠಡಿಯೊಂದಕ್ಕೆ ಕರೆದುಕೊಂಡು ಹೋಗಿ ಸಲಿಂಗಕಾಮಕ್ಕೆ ಒತ್ತಾಯಿಸಿದ್ದಾರೆ. ನನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ, ನನ್ನ ದೇಹದ ಮೇಲೆಲ್ಲ ಗಾಯ ಮಾಡಿದ್ದಾರೆ. ಇದನ್ನು ಎಲ್ಲಾದರೂ ಬಾಯಿಬಿಟ್ಟರೆ ಕೊಲ್ಲುವ ಬೆದರಿಕೆ ಕೂಡ ಹಾಕಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ” ಎಂದು ಸುದೀರ್ಘ ದೂರಿನಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಉದ್ಯೋಗಿ, ಜೆಡಿಎಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿ ಗಂಭೀರ ಆರೋಪ ಮಾಡಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ : ಬಳ್ಳಾರಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ: ಮೇಯರ್ ಆಗಿ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...