Homeಮುಖಪುಟಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ನಟ ನಿವಿನ್ ಪೌಲಿ ವಿಚಾರಣೆ ನಡೆಸಿದ ಎಸ್‌ಐಟಿ

- Advertisement -
- Advertisement -

ಮಲಯಾಳಂ ಚಿತ್ರರಂಗದಲ್ಲಿ ಭೂಗೆಲಿದ್ದಿರುವ ಲೈಂಗಿಕ ಕಿರುಕುಳದ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ ಅವರನ್ನು ಇಂದು ವಿಚಾರಣೆಗೆ ಒಳಪಡಿಸಿದೆ.

ಕೋತಮಂಗಲಂನ ಯುವ ನಟಿ ನೀಡಿದ ದೂರಿನ ಆಧಾರದ ಮೇಲೆ ಎಸ್‌ಐಟಿ ತಂಡ ಮಂಗಳವಾರ ಬೆಳಗ್ಗೆ ಕೊಚ್ಚಿಗೆ ಆಗಮಿಸಿ ವಿಚಾರಣೆ ನಡೆಸಿತು.

ಸಿನಿಮಾದಲ್ಲಿ ನಟಿಸುವುದಕ್ಕೆ ಅವಕಾಶ ನೀಡುವುದಾಗಿ ನಂಬಿಸಿ ದುಬೈನಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಆಕೆಯ ದೂರಿನ ಪ್ರಕಾರ, ಡಿಸೆಂಬರ್ 14 ಮತ್ತು ಡಿಸೆಂಬರ್ 15, 2023 ರಂದು ಹೋಟೆಲ್ ಕೋಣೆಯಲ್ಲಿ ಹಲ್ಲೆ ನಡೆದಿದೆ.

ತ್ರಿಶೂರ್ ನಿವಾಸಿಯಾದ ಶ್ರೇಯಾ ತನ್ನನ್ನು ದುಬೈಗೆ ಕರೆದೊಯ್ದು ಅಲ್ಲಿ ನಿವಿನ್ ಪೌಲಿ ಮತ್ತು ಆತನ ಸಹಚರರಿಂದ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಹೇಳಿದ್ದಾಳೆ. ಹಲ್ಲೆಕೋರರು ತನಗೆ ಬ್ಲ್ಯಾಕ್‌ಮೇಲ್ ಮಾಡಲು ಈ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಎರ್ನಾಕುಲಂನ ಓನ್ನುಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತ್ರಿಶೂರ್‌ನ ಚಲನಚಿತ್ರ ನಿರ್ಮಾಪಕ ಎ ಕೆ ಸುನಿಲ್ ಮತ್ತು ಬಿನು, ಬಶೀರ್ ಮತ್ತು ಕುಟ್ಟನ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ನಿವಿನ್ ಪೌಲಿ ಅವರನ್ನು ಆರನೇ ಆರೋಪಿಯನ್ನಾಗಿ ಪಟ್ಟಿ ಮಾಡಲಾಗಿದೆ.

ಆದರೆ, ನಿವಿನ್ ಪೌಲಿ ಆರೋಪವನ್ನು ನಿರಾಕರಿಸಿದ್ದು, ದೂರಿನ ಹಿಂದೆ ಪಿತೂರಿ ಇದೆ ಎಂದು ಹೇಳಿದ್ದಾರೆ. ನಿವಿನ್ ಅವರ ಹೇಳಿಕೆಯನ್ನು ನಿರ್ದೇಶಕ ಮತ್ತು ಗಾಯಕ ವಿನೀತ್ ಶ್ರೀನಿವಾಸನ್ ಬೆಂಬಲಿಸಿದ್ದಾರೆ. ಘಟನೆ ನಡೆದಿದೆ ಎನ್ನಲಾದ ದಿನದಂದು ಅವರು ಕೊಚ್ಚಿಯಲ್ಲಿ ತಾಣು ನಿರ್ದೇಶಿಸಿದ ಚಿತ್ರದ ಸೆಟ್‌ನಲ್ಲಿದ್ದರು ಎಂದು ವಿನೀತ್ ಸಾಕ್ಷ್ಯ ನೀಡಿದ್ದಾರೆ.

ಇದನ್ನೂ ಓದಿ; ತನ್ನ ಮಗಳಿಗೆ ಮದುವೆ ಮಾಡಿರುವ ಜಗ್ಗಿ ವಾಸುದೇವ್, ಬೇರೆಯವರ ಹೆಣ್ಣು ಮಗಳು ಸನ್ಯಾಸಿನಿಯಾಗಲು ಹುರಿದುಂಬಿಸುವುದು ಏಕೆ? ಮದ್ರಾಸ್ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...