Homeಮುಖಪುಟಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ಆರೋಪ : ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಇಸ್ಕಾನ್ ಶಾಲೆಗಳಲ್ಲಿ ಲೈಂಗಿಕ ಕಿರುಕುಳ ಆರೋಪ : ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

- Advertisement -
- Advertisement -

ಇಸ್ಕಾನ್ ಸಂಸ್ಥೆ ನಡೆಸುವ ಶಾಲೆಗಳಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತನಿಖೆ ನಡೆಸಬೇಕೆಂದು ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 24) ವಿಲೇವಾರಿ ಮಾಡಿದೆ.

ಅರ್ಜಿದಾರರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್), ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಮಕ್ಕಳ ಹಕ್ಕುಗಳ ಆಯೋಗಗಳ ಮೊರೆ ಹೋಗುವಂತೆ ಸೂಚಿಸಿದೆ.

ಆಂತರಿಕ ದಾಖಲೆಗಳು ಗಂಭೀರ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸೂಚಿಸುತ್ತವೆ. ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠ ವಿಚಾರಣೆ ನಡೆಸಿದೆ.

“ನಾವೀಗ ನ್ಯಾಯಾಲಯಕ್ಕೆ ತೋರಿಸಿರುವ ದಾಖಲೆಗಳು ಪ್ರಕರಣದ ಒಂದು ಸಣ್ಣ ಭಾಗ ಮಾತ್ರ. ನಿಜವಾಗಿ ಇದಕ್ಕಿಂತ ತುಂಬಾ ದೊಡ್ಡ ಮಟ್ಟದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಅನ್ಯಾಯ ನಡೆಯುತ್ತಿದೆ ಎಂದು ಮಕ್ಕಳ ಹಕ್ಕುಗಳ ಸಂಸ್ಥೆಗಳಿಗೆ ಈ ಹಿಂದೆಯೇ ದೂರು ಕೊಟ್ಟಿದ್ದೇವೆ. ಆದರೆ, ಅವರು ಯಾವ ಉತ್ತರವೂ ಕೊಟ್ಟಿಲ್ಲ, ಯಾವ ಕ್ರಮವೂ ಕೈಗೊಂಡಿಲ್ಲ” ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದರು.

ವಾದ ಆಲಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಅರ್ಜಿದಾರರಿಗೆ ಎನ್‌ಸಿಪಿಆರ್‌ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ಆಯೋಗಗಳಿಗೆ ಮತ್ತೊಂದು ಜ್ಞಾಪನೆಯನ್ನು (ರಿಮೈಂಡರ್) ಕಳುಹಿಸಲು ಸೂಚಿಸಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ಯಾವುದೇ ಎಫ್‌ಐಆರ್‌ ದಾಖಲಿಸಿ, ತನಿಖೆ ಪ್ರಾರಂಭಿಸಲಾಗಿದೆಯೇ ಎಂದು ವಕೀಲರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ವಕೀಲರು, “ನಮಗೆ ಪೂರ್ತಿ ಮಾಹಿತಿ ಗೊತ್ತಿಲ್ಲ, ಆದರೆ ನಾವು ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇವೆ” ಎಂದು ತಿಳಿಸಿದ್ದಾರೆ.

ಶ್ರೀಲ ಪ್ರಭುಪಾದ ಫೌಂಡೇಶನ್‌ನ ನ್ಯಾಯಮೂರ್ತಿ ರಜನೀಶ್ ಕಪೂರ್ ಮತ್ತು ರಾಧೇ ಕೃಷ್ಣ ಕಾನೂನು ನೆರವು ಪ್ರತಿಷ್ಠಾನ ಸುಪ್ರೀಂ ಕೋರ್ಟ್‌ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಇಸ್ಕಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಈ ಅರ್ಜಿಯನ್ನು ಇಸ್ಕಾನ್‌ನ ಬೆಂಗಳೂರು ಬಣ ಮತ್ತು ಸಂಸ್ಥೆಯ ಇತರ ಘಟಕಗಳ ನಡುವೆ ನಡೆಯುತ್ತಿರುವ ವಿವಾದದ ಕಾರಣಕ್ಕೆ ಸಲ್ಲಿಸಲಾಗಿದೆ. ಪರಿಶೀಲನಾ ಪೀಠದಲ್ಲಿನ ವಿಭಜನೆಯ ನಂತರ ಈ ವಿವಾದವು ಮೂವರು ನ್ಯಾಯಾಧೀಶರ ಪೀಠದ ಮುಂದೆ ಪರಿಗಣನೆಗೆ ಬಾಕಿ ಇದೆ ಎಂದು ಹೇಳಿದ್ದಾರೆ.

ಪ್ರಕರಣವು ಬಣ ಸಂಘರ್ಷಕ್ಕೆ ಸಂಬಂಧಿಸಿದೆ ಎಂಬುದನ್ನು ಅರ್ಜಿದಾರರು ನಿರಾಕರಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ನ್ಯಾಯಮೂರ್ತಿ ನಾಗರತ್ನ ಅವರು, “ಈ ಪ್ರಕರಣವು ಮಕ್ಕಳಿಗೆ ಸಂಬಂಧಿಸಿದೆ. ಅದಕ್ಕಾಗಿಯೇ ನಾವು ನಿಮ್ಮನ್ನು ತಟಸ್ಥ ಸಂಸ್ಥೆಗೆ ಹೋಗಲು ಸೂಚಿಸಿದ್ದೇವೆ” ಎಂದು ಹೇಳಿದ್ದಾರೆ.

Courtesy : livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...