Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ : ಜುಲೈ 18ರವರೆಗೆ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯ ಪ್ರಕರಣ : ಜುಲೈ 18ರವರೆಗೆ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ

- Advertisement -
- Advertisement -

ಇಬ್ಬರು ಯುವಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದ ಮೇಲೆ ಬಂಧಿತರಾಗಿರುವ ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರಿಗೆ ಬೆಂಗಳೂರಿನ ಸಷೆನ್ಸ್‌ ನ್ಯಾಯಾಲಯ ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ವಿಧಾನಪರಿಷತ್‌ನ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಜುಲೈ 18ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೆ ಎಸಿಎಂಎಂ ನ್ಯಾಯಾಲಯ ಇಂದು (ಜುಲೈ 3) ಆದೇಶಿಸಿದೆ.

ಎಸ್‌ಐಟಿ ಕಸ್ಟಡಿ ಅವಧಿ ಕೊನೆಗೊಂಡ ಕಾರಣ ಸೂರಜ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಜುಲೈ 18ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ಮತ್ತೊಂದೆಡೆ, ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಜು.4ರಂದು ನಡೆಯಲಿದ್ದು, ಆಕ್ಷೇಪಣೆ ಸಲ್ಲಿಸುವಂತೆಯೂ ಎಸ್‌ಐಟಿ ಪರ ವಕೀಲರಿಗೆ ಸೂಚನೆ ನೀಡಲಾಗಿದೆ.

ಜೂ.23ರಂದು ಸೂರಜ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ಎಸ್‌ಐಟಿ ಅಧಿಕಾರಿಗಳು, 7 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಬಳಿಕ ಕಸ್ಟಡಿ ಅವಧಿ 2 ದಿನಗಳ ಕಾಲ ವಿಸ್ತರಿಸಿ ಜುಲೈ 1ರಂದು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿತ್ತು.

ಸಿಐಡಿ ತಂಡ ಕಳೆದ ವಾರ ಸೂರಜ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದೆ. ಡಿಎನ್‌ಎ ಮಾದರಿಗಳನ್ನು ಕೂಡ ಸಂಗ್ರಹಿಸಿದೆ. ಪುರುಷತ್ವ ಪರೀಕ್ಷೆಗೆ ಕೂಡ ಒಳಪಡಿಸಿದೆ.

ಮೊದಲ ಪ್ರಕರಣದಲ್ಲಿ, ಹಾಸನ ಜಿಲ್ಲೆಯ ಯುವಕರೊಬ್ಬರು ಸೂರಜ್‌ ರೇವಣ್ಣ ಜೂನ್‌ 16ರಂದು ಫಾರ್ಮ್‌ಹೌಸ್‌ನಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ,36 ವರ್ಷದ ಯುವಕರೊಬ್ಬರು ದೂರು ನೀಡಿದ್ದು, ಕೋವಿಡ್‌ ಸಮಯದಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಆರೋಪಿಸಿದ್ದಾರೆ.

ಇವೆರೆಡೂ ದೂರುಗಳ ಆಧಾರದ ಮೇಲೆ ಸೂರಜ್‌ ವಿರುದ್ಧ 377,342,506 ಸೆಕ್ಷನ್‌ಗಳು ಸೇರಿದಂತೆ ಐಪಿಸಿಯ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ, ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...