Homeಕರ್ನಾಟಕಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

- Advertisement -
- Advertisement -

ಸಿಡಿ ಹಗರಣದ ಸಂತ್ರಸ್ತ ಯುವತಿ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

’ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ..?’ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಿಡಿ ಪ್ರಕರಣದ ಬಗ್ಗೆ ಬರೆದಿರುವ ವಿರೋಧ ಪಕ್ಷದ ನಾಯಕ ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವರ ಮೇಲೆ ಕಿಡಿಕಾರಿದ್ದಾರೆ. ಪ್ರಾಣ ಭಯ ಇದೆ ಎಂದು ಖುದ್ದು ಯುವತಿಯೇ ದೂರು ನೀಡಿದ್ದರೂ, ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

“ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಸಂತ್ರಸ್ತ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ಬಿಜೆಪಿ ಸರ್ಕಾರವೇ ಹೊಣೆಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: ‘ಆಕೆ’ ವಿಜಯ್ ಮಲ್ಯನೋ ಇಲ್ಲ ನೀರವ್ ಮೋದಿಯೋ? – ಸಿಡಿ ಪ್ರಕರಣದ ಕುರಿತು ಸಿದ್ದರಾಮಯ್ಯ

“ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್ ಐಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ” ಎಂದಿದ್ದಾರೆ.

ಸಂತ್ರಸ್ಥ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ ಮುಖ್ಯಮಂತ್ರಿಗಳು, ಗೃಹಸಚಿವರು ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಆದರೆ, ಫಲಿತಾಂಶ ಏನು..? ಎಂದು ಸರ್ಕಾರ ಆರೋಪಿ ರಮೇಶ್ ಜಾರಕಿಹೊಳಿಯನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿ.ಡಿ. ಹಗರಣ: ಐದನೆ ವಿಡಿಯೋ ರಿಲೀಸ್ ಮಾಡಿ ಸಂತ್ರಸ್ತ ಯುವತಿ; ಹೇಳಿದ್ದೇನು?

“ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ..?” ಎಂದು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿರೋಧ ಪಕ್ಷದ ಶಾಸಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ ಅಭಿಮಾನಿಗಳು ಕೂಡ ಡಿ.ಕೆ.ಶಿವಕುಮಾರ್‌ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಇಂದು(ಸೋಮವಾರ) ನ್ಯಾಯಾಧೀಶರ ಮುಂದೆ ಹಾಜರಾಗಿ ಸ್ಟೇಟ್‌ಮೆಂಟ್ 164 ದಾಖಲಿಸುವ ಸಾಧ್ಯತೆ ಇದೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...