Homeಮುಖಪುಟತಂದೆಯಿಂದಲೇ ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ರಕ್ಷಿಸುವ ನೆಪದಲ್ಲಿ ಮತ್ತಿಬ್ಬರಿಂದ ಸಾಮೂಹಿಕ ಅತ್ಯಾಚಾರ

ತಂದೆಯಿಂದಲೇ ಅಪ್ತಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ರಕ್ಷಿಸುವ ನೆಪದಲ್ಲಿ ಮತ್ತಿಬ್ಬರಿಂದ ಸಾಮೂಹಿಕ ಅತ್ಯಾಚಾರ

- Advertisement -
- Advertisement -

68 ವರ್ಷದ ತಂದೆಯಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯಿಂದ ರಕ್ಷಿಸುವ ನೆಪದಲ್ಲಿ ಇನ್ನಿಬ್ಬರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ರಾಜಸ್ಥಾನದ ಬರಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮಂಗಳವಾರದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್ 26 ರಂದು, ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳು ಜೂನ್ 22 ರಿಂದ ಮನೆಯಿಂದ ಕಾಣೆಯಾಗಿದ್ದಾಳೆಂದು ಆರೋಪಿಸಿ ದೂರು ನೀಡಿದ್ದರು. ನಂತರ ಪೊಲೀಸರು ಜೂನ್ 30 ರಂದು ಆ ಬಾಲಕಿಯನ್ನು ರಕ್ಷಿಸಿದಾಗ ಆ ಮಗು ಅನುಭವಿಸಿದ ನೋವು, ಯಾತನೆ ಬಯಲಿಗೆ ಬಂದಿದೆ.

ತನ್ನ ತಂದೆ ಸುಮಾರು ಒಂದೂವರೆ ವರ್ಷಗಳಿಂದ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಮತ್ತು ಈ ಬಗ್ಗೆ ಯಾರೊಂದಿಗಾದರೂ ಮಾತನಾಡಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿ ತಿಳಿಸಿದ್ದಾಳೆ. ಆಕೆಯ ತಾಯಿ ಸುಮಾರು ಐದು ವರ್ಷಗಳ ಹಿಂದೆ ನಿಧನರಾದರು ಮತ್ತು ಅಂದಿನಿಂದ ಅವಳು ತನ್ನ ತಂದೆಯೊಂದಿಗೆ ವಾಸಿಸುತ್ತಿದ್ದಳು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ನಂತರ 29 ವರ್ಷದ ವ್ಯಕ್ತಿಯೊಬ್ಬರು ತಂದೆಯಿಂದ ರಕ್ಷಿಸುವುದಾಗಿ ತಿಳಿಸಿ ಜೂನ್ 22 ರಂದು ಬಾಲಕಿಯನ್ನು ತನ್ನೊಂದಿಗೆ ಕರೆದೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಆ ವ್ಯಕ್ತಿ ತನ್ನ ಸ್ನೇಹಿತನೊಂದಿಗೆ ಸೇರಿ ಹಲವು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಅವರು ಹೇಳಿದ್ದಾರೆ.

ಅಪ್ರಾಪ್ತ ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಆರೋಪಿ ತಂದೆಯ ವಿರುದ್ಧ ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಅತ್ಯಾಚಾರದ ಪ್ರಕರಣವನ್ನು ಮತ್ತು ಇಬ್ಬರ ವಿರುದ್ಧ ಸಾಮೂಹಿಕ ಅತ್ಯಾಚಾರದ ಪ್ರತ್ಯೇಕ ಪ್ರಕರಣವನ್ನು ದಾಖಲಿಸಿದ್ದಾರೆ.

ಪ್ರಾಥಮಿಕ ತನಿಖೆ ಮತ್ತು ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಸೋಮವಾರ ಸಂಜೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಮಂಗಳವಾರದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಆದಿವಾಸಿ ಯುವಕನ ಮುಖದ ಮೇಲೆ ಬಿಜೆಪಿ ಮುಖಂಡನಿಂದ ಮೂತ್ರ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...