Homeಫ್ಯಾಕ್ಟ್‌ಚೆಕ್ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ.

- Advertisement -
- Advertisement -

ನಿರ್ಜನ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಹುಡುಗಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೇರಳದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಹಿಂದೂಗಳು ಅಲ್ಪ ಸಂಖ್ಯಾತರಾಗಿದ್ದು, ಅವರ ಮೇಲೆ ಇಂತಹ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಹೇಳಲಾಗಿತ್ತು. ಅದಕ್ಕೆ ಸಾಕ್ಷಿಯಾಗಿ ಈ ವಿಡಿಯೋ ನೀಡಲಾಗಿತ್ತು.

ಆ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಹುಡುಗಿಯನ್ನು ವಿವಸ್ತ್ರಗೊಳಿಸಿ ಆಕೆಯ ಮೇಲೆ ದೈಹಿಕ-ಲೈಂಗಿಕ ಹಲ್ಲೆಗೆ ಮುಂದಾಗುತ್ತಾನೆ. ಆಕೆ ಬಿಟ್ಟುಬಿಡುವಂತೆ ಎಷ್ಟೇ ಬೇಡಿಕೊಂಡರೂ, ಕಿರುಚಿದರೂ ಸಹ ಆತ ಅದನ್ನು ಗಮನಿಸಿದೆ ಆಕೆಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಮುಂದುವರೆಸುತ್ತಾನೆ. ಇದೇ ವೇಳೆ ಮತ್ತೋರ್ವ ಯುವತಿ ಆಕೆಯ ರಕ್ಷಣೆಗೆ ಮುಂದಾಗುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದಾಗಿದೆ. ಈ ಮೂವರ ಧ್ವನಿಯನ್ನು ವಿಡಿಯೋದಲ್ಲಿ ಕೇಳಬಹುದಾಗಿದೆ.

ಹಾಗಾದರೆ, ಆ ವಿಡಿಯೋ ಕೇರಳ ರಾಜ್ಯದ್ದೇ?, ಅಲ್ಲಿ ನಡೆದದ್ದು ಏನು ಎಂಬುದನ್ನು ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಈ ವಿಡಿಯೋದ ಅಸಲಿ ಕಥೆಯನ್ನು ಹೊರಗೆಡವಿದ್ದು, ಸತ್ಯವನ್ನು ಬಯಲು ಮಾಡಿದೆ. ಅಸಲಿಗೆ ಇದು ಕೇರಳದಲ್ಲಿ ನಡೆದ ಘಟನೆಯೇ ಅಲ್ಲ. ಬದಲಾಗಿ ಇದು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮೂರು ವರ್ಷಗಳ ಹಿಂದೆ ನಡೆದಿರುವ ಘಟನೆಯಾಗಿದೆ. ಜೊತೆಗೆ ಸ್ವತಃ ಯುವತಿಯ ಗೆಳೆಯನೇ ಆತನ ಸ್ನೇಹಿತರ ಜೊತೆ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಅಂಶವನ್ನು ಪತ್ತೆ ಮಾಡಿದೆ.

ಇದನ್ನೂ ಓದಿ: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು: ಕನ್ನಡಿಗರನ್ನು ಬಂಧಿಸಿ ನಾಮಕರಣಕ್ಕೆ ಮುಂದಾದ ಸರ್ಕಾರ

ಸೆ.7 ರಂದು ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬರು, “ಇದು ಕೇರಳದ ಮಹಿಳೆಯೊಬ್ಬಳ ಕಿರುಕುಳವನ್ನು ತೋರಿಸುವ ಏಕೈಕ ವೈರಲ್ ವಿಡಿಯೋ ಅಲ್ಲ. ಇಂತಹ ಘಟನೆಗಳು ಅಲ್ಲಿ ಸಾಮಾನ್ಯವಾಗಿದೆ. ಇದಕ್ಕೆ ಮುಖ್ಯ ಕಾರಣವೇನೆಂದರೆ, ಹಿಂದೂಗಳು ಆ ರಾಜ್ಯದಲ್ಲಿ ಅಲ್ಪಸಂಖ್ಯಾತರು” ಎಂದು ಶೀರ್ಷಿಕೆ ನೀಡಿದ್ದರು.

ಟ್ವೀಟ್ ಮಾಡಿ ಅದನ್ನು ಡಿಲೀಟ್ ಮಾಡಿದ್ದರೂ ಸಹ ಅಷ್ಟರಲ್ಲಿ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕೂಡ ಇದನ್ನು ರಿಟ್ವೀಟ್ ಮಾಡಿದ್ದು, ಈ ವಿಷಯವನ್ನು ಕೈಗೆತ್ತಿಕೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗವನ್ನು ಕೋರಿದ್ದರು.

ಇದನ್ನೂ ಓದಿ: ರಿಯಾ ಚಕ್ರವರ್ತಿ ಬಂಧನ: ಅವರು ಧರಿಸಿದ್ದ ‘ಪುರುಷಾಧಿಪತ್ಯ ಅಳಿಸಿ’ ಟೀಶರ್ಟ್ ಈಗ ಚರ್ಚಿತ ವಿಷಯ

ಇಂಡಿಯಾ ಟುಡೆ ಆಂಟಿ ಫೇಕ್ ನ್ಯೂಸ್ ವಾರ್ ರೂಮ್ ಇನ್ವಿಡ್ ಬಳಸಿ ಈ ವಿಡಿಯೋ ಕೀಫ್ರೇಮ್ಗಳಲ್ಲಿ ಒಂದರ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನಿಸಿದಾಗ ಈ ಘಟನೆಯ ಸತ್ಯಾಸತ್ಯತೆ ಬಯಲಾಗಿದೆ. ಈ ಘಟನೆಯ ಕುರಿತು “ದಿ ಟೈಮ್ಸ್ ಆಫ್ ಇಂಡಿಯಾ” ವರದಿಯನ್ನೂ ನಾವು ಶೋಧಿಸಿದ್ದೇವೆ ಎಂದಿದೆ. ಈ ವರದಿಯ ಪ್ರಕಾರ 2017ರ ಆಗಸ್ಟ್‌ನಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆದರೆ, ಈ ವಿಡಿಯೋ ಮಾತ್ರ ಈಗ ವೈರಲ್ ಆಗುತ್ತಿದೆ ಎಂಬುದು ತಿಳಿದುಬಂದಿದೆ ಎಂದಿದ್ದಾರೆ.

“ದಿ ಹಿಂದೂ” ವರದಿ ಪ್ರಕಾರ,  ಆಗಸ್ಟ್ 29, 2017 ರಂದು ಬಾಲಕಿ 19 ವರ್ಷದ ವಿದ್ಯಾರ್ಥಿನಿ ತನ್ನ ಪ್ರೀತಿಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕೆ, ತನ್ನ ಗೆಳೆಯ ಸಾಯಿ ಎಂಬ ವ್ಯಕ್ತಿಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ. ಅಲ್ಲದೆ, ಯುವಕನ ಸ್ನೇಹಿತ ಕಾರ್ತಿಕ್ ಮತ್ತು ಪವನ್ ಈ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಆಗಲೇ ಅರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

ಇನ್ನು ಕೇರಳದಲ್ಲಿ ಹಿಂದೂಗಳು ಅಲ್ಪಸಂಖ್ಯಾತರೇ? ಎಂಬ ಪ್ರಶ್ನೆಗೆ 2011 ರ ಜನಗಣತಿ ಉತ್ತರ ನಿಡುತ್ತದೆ. ಇದರ ಪ್ರಕಾರ ಕೇರಳದ ಜನಸಂಖ್ಯೆಯ ಶೇಕಡಾ 54.7 ರಷ್ಟು ಹಿಂದೂಗಳು, ಮುಸ್ಲಿಮರು ಶೇ. 26.5 ಮತ್ತು ಕ್ರಿಶ್ಚಿಯನ್ನರು ಶೇ.18.3 ಇದ್ದಾರೆ.


ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...