Homeಮುಖಪುಟಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ: ಬಿಜೆಪಿ ಸಂಸದನ ವಿರುದ್ದ ಮತ್ತೆ ಪ್ರತಿಭಟನೆ ಆರಂಭ

ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ: ಬಿಜೆಪಿ ಸಂಸದನ ವಿರುದ್ದ ಮತ್ತೆ ಪ್ರತಿಭಟನೆ ಆರಂಭ

- Advertisement -
- Advertisement -

ಮಹಿಳಾ ಆಟಗಾರ್ತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಕ್ರೀಡಾ ಆಡಳಿತ ಮಂಡಳಿಯ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಭಾರತದ ಅಗ್ರ ಕುಸ್ತಿಪಟುಗಳು ಭಾನುವಾರ ಮತ್ತೆ ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದ್ದಾರೆ.

ಒಲಿಂಪಿಕ್ ಕಂಚಿನ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಧರಣಿ ನಡೆಸಿದರು.

ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಭಾರತೀಯ ಜನತಾ ಪಕ್ಷದ ಸಂಸದರೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜನವರಿ 18ರಂದು ಅಥ್ಲೀಟ್‌ಗಳು ಮೊದಲ ಬಾರಿಗೆ ಆರೋಪಗಳನ್ನ ಮಾಡಿ ಪ್ರತಿಭಟನೆ ನಡೆಸಿದ್ದರು.

ಈ ಬಗ್ಗೆ ಭಾನುವಾರ ವಿನೇಶ್ ಫೋಗಟ್ ಅವರು ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ”ಕುಸ್ತಿಪಟುಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ. ಇದು ಮಹಿಳಾ ಕ್ರೀಡಾಪಟುಗಳ ಗೌರವದ ಬಗ್ಗೆ ಪ್ರಶ್ನೆಯಾಗಿದೆ. ಮೂರು ತಿಂಗಳಾದರೂ ಕೇಂದ್ರ ಕ್ರೀಡಾ ಸಚಿವಾಲಯದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಅಪ್ರಾಪ್ತ ವಯಸ್ಕರು ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಶುಕ್ರವಾರ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಆದರೆ ಈ ವರೆಗೂ ಎಫ್ಐಆರ್ ದಾಖಲಿಸಿಲ್ಲ ಎಂದು ಮಲಿಕ್ ಹೇಳಿದ್ದಾರೆ.

ಈ ಬಗ್ಗೆ ದೆಹಲಿ ಮಹಿಳಾ ಆಯೋಗಕ್ಕೂ ದೂರು ನೀಡಲಾಗಿದೆ. ಮಹಿಳಾ ಕುಸ್ತಿಪಟುಗಳ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ”ಇದು ಅತ್ಯಂತ ಗಂಭೀರವಾದ ವಿಷಯ” ಎಂದು ಅದರ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಭಾನುವಾರ ಉಪ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಎಫ್‌ಐಆರ್‌ ದಾಖಲಿಸಲು ವಿಳಂಬವಾಗಲು ಕಾರಣವೇನು ಎಂದು ಮಲಿವಾಲ್‌ ಅವರು ಪೊಲೀಸರನ್ನು ಪ್ರಶ್ನೆ ಮಾಡಿದ್ದಾರೆ. ”ಕೆಲವು ದೂರುದಾರರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಕ್ರೀಡಾ ಇಲಾಖೆಯಲ್ಲಿರುವ ಕೆಲವು IPS [ಭಾರತೀಯ ಪೊಲೀಸ್ ಸೇವೆ] ಅಧಿಕಾರಿಯಿಂದ ಫೋನ್ ಕರೆಗಳನ್ನು ಮಾಡಲಾಗುತ್ತಿದೆ ಅವರು ಹೇಳಿದ್ದಾರೆ.

ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪಗಳನ್ನು ತನಿಖೆ ಮಾಡಲು ಕ್ರೀಡಾ ಸಚಿವಾಲಯವು ಜನವರಿ 23 ರಂದು ಖ್ಯಾತ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದಲ್ಲಿ ಉಸ್ತುವಾರಿ ಸಮಿತಿಯನ್ನು ರಚಿಸಿತ್ತು.

ಸಮಿತಿಗೆ ಒಂದು ತಿಂಗಳ ಗಡುವು ನೀಡಲಾಗಿತ್ತು. ಆದರೆ ಸಮಿತಿಯು ಏಪ್ರಿಲ್ ಮೊದಲ ವಾರದಲ್ಲಿ ತನ್ನ ವರದಿಯನ್ನು ಸಲ್ಲಿಸಿದೆ ಮತ್ತು ಅದರ ಸಂಶೋಧನೆಗಳನ್ನು ಇದುವರೆಗೆ ಸಾರ್ವಜನಿಕಗೊಳಿಸಲಾಗಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗ್ ಅವರು ಭಾರತೀಯ ಒಲಿಂಪಿಕ್ ಸಂಸ್ಥೆ ಮತ್ತು ಸರ್ಕಾರದ ಮೇಲುಸ್ತುವಾರಿ ಸಮಿತಿಯ ಮುಂದೆ ಹಾಜರಾಗಿದ್ದರು.

ಕ್ರೀಡಾಪಟುಗಳು ಸಮಿತಿ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಮತ್ತು ಸಿಂಗ್ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡಿಲ್ಲ ಎಂದು ಫೋಗಟ್ ಹೇಳಿದ್ದರು.

”ಮೇಲ್ವಿಚಾರಣಾ ಸಮಿತಿಯ ಸಂಶೋಧನೆಗಳು ಮತ್ತು ತನಿಖೆಯ ಕುರಿತಾದ ವಿವರಗಳು ಮೇಲೆ ಏಕೆ ಗೌಪ್ಯತೆಯಿದೆ?” ಎಂದು ಅವರು ಪ್ರಶ್ನಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಾಮನಿರ್ದೇಶನ ರದ್ದು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿಯಿಂದ ಅರ್ಜಿ; ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

0
ಪಶ್ಚಿಮ ಬಂಗಾಳದ ಬಿರ್ಭೂಮ್ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ದೇಬಾಶಿಶ್ ಧಾರ್ ಅವರು ತಮ್ಮ ನಾಮಪತ್ರಗಳನ್ನು ರದ್ದುಗೊಳಿಸುವುದರ ವಿರುದ್ಧ ಸಲ್ಲಿಸಿದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ...