Homeಮುಖಪುಟಅತ್ಯಾಚಾರ ಎಸಗಿದ ಇಬ್ಬರು ಸಿಆರ್‌ಪಿಎಫ್‌ ಅಧಿಕಾರಿಗಳ ಅಮಾನತು

ಅತ್ಯಾಚಾರ ಎಸಗಿದ ಇಬ್ಬರು ಸಿಆರ್‌ಪಿಎಫ್‌ ಅಧಿಕಾರಿಗಳ ಅಮಾನತು

- Advertisement -
- Advertisement -

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಕೇಂದ್ರೀಯ ರಿಸರ್ವ್ ಪೊಲೀಸ್ ಪಡೆಯ(ಸಿಆರ್‌ಪಿಎಫ್) ಮುಖ್ಯ ಕ್ರೀಡಾ ಅಧಿಕಾರಿ ಡಿಐಜಿ ಖಜನ್ ಸಿಂಗ್ ಮತ್ತು ತರಬೇತುದಾರ ಇನ್ಸ್‌ಪೆಕ್ಟರ್ ಸುರ್ಜಿತ್ ಸಿಂಗ್ ಅನ್ನು ಬುಧವಾರ ಅಮಾನತುಗೊಳಿಸಲಾಗಿದೆ. ಪ್ರಾಥಮಿಕ ತನಿಖೆಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

30 ವರ್ಷದ ಮಹಿಳಾ ಕಾನ್‌ಸ್ಟೆಬಲ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪಗಳು ಸಾಬೀತಾಗಿದೆ ಎಂದು ಶ್ರೀನಗರ ಮೂಲದ ಸಿಆರ್‌ಪಿಎಫ್ ಇನ್ಸ್‌ಪೆಕ್ಟರ್ ಜನರಲ್ ಚಾರು ಸಿನ್ಹಾ ನೇತೃತ್ವದ ಸಮಿತಿಯು ಹೇಳಿದೆ.

“ಸಮಿತಿಯು ನಡೆಸಿದ ಪ್ರಾಥಮಿಕ ತನಿಖೆಯ ಶಿಫಾರಸುಗಳನ್ನು ಅನುಸರಿಸಿ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಖಜನ್ ಸಿಂಗ್ ಮತ್ತು ಇನ್ಸ್‌ಪೆಕ್ಟರ್ ಸುರ್ಜಿತ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದ ಅತಿದೊಡ್ಡ ಅರೆಸೈನಿಕ ಪಡೆಗಳ ಮುಖ್ಯ ಕ್ರೀಡಾ ಅಧಿಕಾರಿ ಖಜನ್ ಸಿಂಗ್ ಅವರು 1986 ರ ಸಿಯೋಲ್ ಏಷ್ಯನ್ ಕ್ರೀಡಾಕೂಟದಲ್ಲಿ 200 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಇದು 1951 ರ ಆವೃತ್ತಿಯ ನಂತರ ಈ ಕ್ರೀಡಾಕೂಟದಲ್ಲಿ ಭಾರತ ಪಡೆದ ಮೊದಲ ಪದಕವಾಗಿದೆ.

ಖಜನ್ ಸಿಂಗ್ ಈ ಹಿಂದೆ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿ, “ಈ ಆರೋಪಗಳು ಸಂಪೂರ್ಣವಾಗಿ ಸುಳ್ಳಾಗಿದ್ದು, ಇದು ನನ್ನ ಇಮೇಜ್ ಅನ್ನು ಹಾಳುಗೆಡವಲು ರೂಪಿಸಿದ್ದಾಗಿದೆ” ಎಂದು ಪಿಟಿಐಗೆ ಹೇಳಿದ್ದರು.

ಇದನ್ನೂ ಓದಿ: 2014-2021ರವರೆಗೆ ಬಂಗಾಳದಲ್ಲಿ ಮೋದಿ ಭಾಷಣಗಳು: ಮಮತಾ ಪರವಿದ್ದ ಮೋದಿ ದಿಢೀರ್ ವಿರೋಧಿಯಾದ ಬಗೆ!

ಕಳೆದ ವರ್ಷ ಡಿಸೆಂಬರ್‌ನಲ್ಲಿ ದೆಹಲಿಯ ಬಾಬಾ ಹರಿದಾಸ್ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ನೀಡಿದ ದೂರಿನಲ್ಲಿ, ಈ ಅಧಿಕಾರಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಜೊತೆಗೆ ಅವರು ಹಲವು ಮಹಿಳಾ ಕಾನ್‌ಸ್ಟೆಬಲ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು.

2010 ರಲ್ಲಿ ಸಿಆರ್‌ಪಿಎಫ್‌ಗೆ ಸೇರ್ಪಡೆಯಾದ ಮಹಿಳೆ, ನಂತರ ಪೊಲೀಸ್ ತನಿಖೆಯ ವೇಳೆ ತನ್ನ ಆರೋಪಗಳನ್ನು ಹಿಂತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ. ಸಿಆರ್‌ಪಿಸಿ ಸೆಕ್ಷನ್ 164 ರ ಅಡಿಯಲ್ಲಿ ಮಹಿಳೆ ತನ್ನ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಅಲ್ಲಿ ಇಬ್ಬರು ಸಿಆರ್‌ಪಿಎಫ್ ಕ್ರೀಡಾ ಅಧಿಕಾರಿಗಳ ವಿರುದ್ಧದ ಆರೋಪಗಳನ್ನು ಹಿಂತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.

ಫೆಬ್ರವರಿಯಲ್ಲಿ ನಿವೃತ್ತರಾದ ಸಿಆರ್‌ಪಿಎಫ್‌ನ ಮಾಜಿ ಮಹಾನಿರ್ದೇಶಕ ಆನಂದ್ ಪ್ರಕಾಶ್ ಮಹೇಶ್ವರಿ ಜನವರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಈ ಪ್ರಕರಣದಲ್ಲಿ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಕಂಡುಬಂದಲ್ಲಿ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಶಿಕ್ಷೆ ವಿಧಿಸಲಾಗುತ್ತದೆ” ಎಂದು ಹೇಳಿದ್ದರು.

ಸಿಆರ್‌ಪಿಎಫ್ ಪಡೆಯು ಸುಮಾರು 3.25 ಲಕ್ಷ ಸಿಬ್ಬಂದಿಗಳನ್ನು ಹೊಂದಿದ್ದು, 1986 ರಲ್ಲಿ ಮೊದಲ ಬಾರಿಗೆ ಮಹಿಳೆಯರನ್ನು ಯುದ್ಧ ಶ್ರೇಣಿಯಲ್ಲಿ ಸೇರಿಸಿಕೊಂಡಿತು. ಇದು ಪ್ರಸ್ತುತ ಆರು ಮಹಿಳಾ ಬೆಟಾಲಿಯನ್‌ಗಳನ್ನು ಹೊಂದಿದ್ದು, ಒಟ್ಟಾರೆ ಸುಮಾರು 8,000 ಸಿಬ್ಬಂದಿಗಳನ್ನು ಹೊಂದಿದೆ. ಇದು ಕ್ರೀಡೆ ಮತ್ತು ಇತರ ಆಡಳಿತ ವಿಭಾಗಗಳಲ್ಲಿಯೂ ಸಹ ಮಹಿಳಾ ಸಿಬ್ಬಂದಿಯನ್ನು ಹೊಂದಿದೆ.


ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...