Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ

- Advertisement -
- Advertisement -

ಕೆಲಸ ಕೇಳಿಕೊಂಡು ಬಂದಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಮತ್ತು ಸಿಡಿ ವಿವಾದದಲ್ಲಿ ಸಿಲುಕಿಕೊಂಡಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ರಾಜೀನಾಮೆ ನೀಡಿದ್ದಾರೆ.

ಸಿಡಿ ನಕಲಿಯಾಗಿದೆ. ನಾನು ರಾಜೀನಾಮೆ ನೀಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದ ರಮೇಶ್ ಜಾರಕಿಹೊಳಿ ಮೇಲೆ ವಿಪಕ್ಷ ನಾಯಕರು ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಮುಜುಗರ ಮಾಡಲು ಬಯಸುವುದಿಲ್ಲ. ತನಿಖೆ ಆದ ಬಳಿಕ ನಿರ್ದೋಷಿಯಾಗಿ ಬರುತ್ತೇನೆ. ನಂತರ ಮತ್ತೆ ಸಚಿವ ಆಗುತ್ತೇನೆ ಎಂದು ರಮೇಶ್‌ ಅವರು ಮುಖ್ಯಮಂತ್ರಿಗೆ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ…

ರಾಜ್ಯದ ಬೃಹತ್‌ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೆಲಸದ ಆಮಿಷ ಒಡ್ಡಿ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು ಕೇಳಿಬರುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾಗಿರುವ ಆಡಿಯೋ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.

“ಕೆಲಸದ ಆಸೆಯಿಂದ ಸಚಿವರನ್ನು ಭೇಟಿ ಮಾಡಿದ ಸಂದರ್ಭ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಅತ್ಯಂತ ಹೇಯ ಕೃತ್ಯ. ಬಿಜೆಪಿ ಪಕ್ಷ ಎಂದರೆ ಕಾಮಲೀಲೆ ಪಕ್ಷ ಎಂದು ಮತ್ತೊಮ್ಮೆ ಸಾಬೀತಾಗಿದೆ. ಅಧಿಕಾರದಲ್ಲಿದ್ದಾಗ ಮುಗ್ಧ ಹೆಣ್ಣುಮಕ್ಕಳ ಬಗ್ಗೆ ನಡೆಯುವ ಇಂತಹ ಕಾಮಲೀಲೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಕೂಡಲೇ ಇವರನ್ನ ಪಕ್ಷದಿಂದ ಅಮಾನತುಗೊಳಿಸಿ ಸಚಿವ ಸಂಪುಟದಿಂದ ವಜಾಗೊಳಿಸದೇ ಹೋದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುತ್ತೇವೆ” ಎಂದು ಕಾಂಗ್ರೆಸ್ ಪಕ್ಷವು ಎಚ್ಚರಿಕೆ ನೀಡಿತ್ತು.

ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ‌ಕುಶಲ ಸ್ವಾಮಿ ಪ್ರಶ್ನಿಸಿದ್ದರು.

ಇತ್ತ ರಮೇಶ್‌ ಜಾರಕಿಹೊಳಿಯವರದ್ದು ಎಂದು ಹೇಳಲಾಗುತ್ತಿರುವ ವೀಡಿಯೋ ಕುರಿತು ಸಿಐಡಿ ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಯಡಿಯೂರಪ್ಪ ಅವರನ್ನು ಬಾಲಚಂದರ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಬಾಲಚಂದರ್ ಜಾರಕಿಹೊಳಿ ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್‌) ಅಧ್ಯಕ್ಷರಾಗಿದ್ದು, ರಮೇಶ್ ಜಾರಕಿಹೊಳಿಯವರ ಸಹೋದರರಾಗಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಬಗ್ಗೆ CBI ತನಿಖೆ ಅಗತ್ಯ: ಬಾಲಚಂದರ್ ಜಾರಕಿಹೋಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...