Homeಕರ್ನಾಟಕವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ವಿಸ್ಟ್ರಾನ್ ದಾಂಧಲೆಗೆ ಎಸ್‌ಎಫ್‌ಐ ಕಾರಣ: ಸಂಸದ ಮುನಿಸ್ವಾಮಿ ಹೇಳಿಕೆ ವಿರುದ್ಧ ಆಕ್ರೋಶ

ಎಸ್‌ಎಫ್‌ಐಗೂ ವಿಸ್ಟ್ರಾನ್‌ ಘಟನೆಗೂ ಯಾವುದೇ ಸಂಬಂಧವಿಲ್ಲದಿದ್ದರೂ ಎಸ್. ಮುನಿಸ್ವಾಮಿಯವರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ- ಕೆ.ವಾಸುದೇವರೆಡ್ಡಿ

- Advertisement -
- Advertisement -

ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಐಫೋನ್ ತಯಾರಕ ಕಂಪನಿಯಲ್ಲಿ ನಡೆದ ದಾಂಧಲೆಗೆ ಎಸ್‌ಎಫ್‌ಐ ಕಾರ್ಯಕರ್ತರು ಕಾರಣರಾಗಿದ್ದಾರೆ ಎಂಬ ಸಂಸದ ಮುನಿಸ್ವಾಮಿಯವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಎಸ್‌ಎಫ್‌ಐ, ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದಿದೆ.

3-4 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಹಲವು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾವಿರಾರು ಕಾರ್ಮಿಕರು ನಿನ್ನೆ ಬೆಳಿಗ್ಗೆ ತಾಳ್ಮೆ ಕಳೆದುಕೊಂಡಿದ್ದು, ಕಂಪನಿಯ ಒಂದು ಭಾಗಕ್ಕೆ ಬೆಂಕಿ ಹಚ್ಚಿ, ಕಿಟಕಿ ಗಾಜುಗಳನ್ನು ಒಡೆದು, ಕಾರುಗಳನ್ನು ಜಖಂಗೊಳಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ನೂರಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಕ್ಕೆ ಹೇಳಿಕೆ ನಿಡಿದ್ದ ಸಂಸದ ಮುನಿಸ್ವಾಮಿಯವರು “ಎಸ್‌ಎಫ್‌ಐ ಸಂಘಟನೆ ಹೊರರಾಜ್ಯದ ಜನರನ್ನು ಕರೆಸಿಕೊಂಡು ದಾಂಧಲೆ ಸಂಘಟಿಸಿದೆ. ಎಸ್‌ಎಫ್‌ಐ ಕಾರ್ಯಕರ್ತರು ಫೇಸ್‌ಬುಕ್ ಮತ್ತು ವಾಟ್ಸಾಪ್‌ಗಳಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿ ದಾಂಧಲೆಗೆ ಕಾರಣರಾಗಿದ್ದಾರೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಕುರಿತು ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ, “ಎಸ್‌ಎಫ್‌ಐಗೂ ವಿಸ್ಟ್ರಾನ್‌ ಘಟನೆಗೂ ಯಾವುದೇ ಸಂಬಂಧವಿಲ್ಲದಿದ್ದರೂ ಕೋಲಾರದ ಸಂಸದ ಎಸ್. ಮುನಿಸ್ವಾಮಿಯವರು ರಾಜಕೀಯ ಪ್ರೇರಿತ ಆರೋಪ ಮಾಡಿ ನಿಷ್ಪಕ್ಷಪಾತ ತನಿಖೆಯನ್ನು ದಿಕ್ಕುತಪ್ಪಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸುತ್ತೇನೆ” ಎಂದಿದ್ದಾರೆ.

ಎಸ್ಎಫ್ಐ ಯಾವುದೇ ಪ್ರತಿಭಟನೆಯನ್ನು ಸಂಘಟಿಸಿಲ್ಲರಲಿಲ್ಲ. ಎಸ್ಎಫ್ಐ ಒಂದು ವಿದ್ಯಾರ್ಥಿ ಸಂಘಟನೆಯಾಗಿದ್ದು ಅದು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಹೋರಾಡುತ್ತಿದೆ. ಆದರೆ ವಿಸ್ಟ್ರಾನ್ ಘಟನೆ ಕಾರ್ಮಿಕರು ಮತ್ತು ಕೈಗಾರಿಕೆ ಆಡಳಿತ ಮಂಡಳಿಯ ವಿಷಯವಾಗಿದ್ದು, ಅನಾವಶ್ಯಕವಾಗಿ ವಿದ್ಯಾರ್ಥಿ ಸಂಘಟನೆಯ ಹೆಸರನ್ನು ಎಳೆದು ತರುವ ಪ್ರಯತ್ನವನ್ನು ಸಂಸದರು ನಡೆಸಿರುವುದು ಅವರ ಬೇಜವಾಬ್ದಾರಿತನ ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾರ್ಮಿಕರ ಕಾನೂನುಗಳನ್ನು ಉಲ್ಲಂಘಿಸಿ ಯುವಜನರನ್ನು ಕಡಿಮೆ ಸಂಬಳ ನೀಡಿ 12 ಗಂಟೆಗಳ ಕಾಲ ದುಡಿಸಿಕೊಂಡು ನಾಲ್ಕೈದು ತಿಂಗಳಿಂದ ಸಂಬಳ ನೀಡದೆ ಸತಾಯಿಸಿ, ಶೋಷಿಸುವುದರ ವಿರುದ್ಧ ಧ್ವನಿ ಎತ್ತಬೇಕಾಗಿದ್ದ ಕೋಲಾರದ ಸಂಸದ ಮುನಿಸ್ವಾಮಿ, ಬಂಡವಾಳಶಾಹಿ ಕಂಪನಿಗಳ ಪ್ರಭಾವಕ್ಕೆ ಒಳಗಾಗಿ ಕಾರ್ಮಿಕರ ಹಿತವನ್ನು ಮರೆತಿದ್ದಾರೆ. ಕಾರ್ಮಿಕರ ಶೋಷಣೆಯ ಮೂಲಕ ಕಾರ್ಪೋರೇಟ್ ಹಣಕಾಸು ಬಂಡವಾಳಶಾಹಿಗಳ ಆಸ್ತಿ ಹೆಚ್ಚಳಕ್ಕೆ ಕೈಜೋಡಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಘಟನೆ ನಡೆಯಲು ಕಾರ್ಮಿಕರ ಗುತ್ತಿಗೆ ಏಜೆನ್ಸಿ ಮತ್ತು ಕಾರ್ಮಿಕರ ನಡುವಿನ ವೇತನ ಶೋಷಣೆ ಮತ್ತು ಈ ಸಮಸ್ಯೆಯನ್ನು ನಿರ್ವಹಿಸುವಲ್ಲಿನ ಕಾರ್ಮಿಕ ಅಧಿಕಾರಿಗಳ ನಿರ್ಲಕ್ಷ್ಯತೆಯೇ ಕಾರಣ. ಹಾಗಾಗಿ ಕಾರ್ಮಿಕರು ರೊಚ್ಚಿಗೆದ್ದು ದಾಂಧಲೆಗೆ ಇಳಿದಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವಲ್ಲಿ ಸರ್ಕಾರ ಮತ್ತು ಜವಾಬ್ದಾರಿ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಸಂಸದ ಮುನಿಸ್ವಾಮಿ ವಿಫಲರಾಗಿದ್ದಾರೆ. ಆದ್ದರಿಂದ ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ವಿದ್ಯಾರ್ಥಿ ಸಂಘಟನೆಗಳ ವಿರುದ್ಧ ರಾಜಕೀಯ ಪ್ರೇರಿತ ಪಕ್ಷಪಾತಿ ಆರೋಪಗಳನ್ನು ಹೊರಿಸುತ್ತಿದ್ದಾರೆ ಎಂದು ವಾಸುದೇವರೆಡ್ಡಿ ಕಿಡಿಕಾರಿದ್ದಾರೆ.

ಈ ರೀತಿಯ ದಾಂಧಲೆ ಹಾಗು ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಎಸ್ಎಫ್ಐ ತೀವ್ರವಾಗಿ ವಿರೋಧಿಸುತ್ತದೆ. ಈ ದಾಂಧಲೆ ನಡೆಸಿದವರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಕಂಪನಿ ಪುನರ್ ಆರಂಭವಾಗಿ ನಡೆಯಬೇಕು. ಕಾರ್ಮಿಕ ವೇತನ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ತೋರಿರುವ ಕಾರ್ಮಿಕ ಅಧಿಕಾರಿಗಳು, ಕಂಪನಿ ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು. ಯಾವುದೇ ಸಾಕ್ಷ್ಯವಿಲ್ಲದೆ ಸಂಘಟನೆ ಹೆಸರು ಕೆಡಿಸಲು ಅನಗತ್ಯ ಆರೋಪ ಮಾಡಿರು ಸಂಸದ ಮುನಿಸ್ವಾಮಿಯವರು ತಮ್ಮ ಹೇಳಿಕೆಯನ್ನು ಈ ಕೂಡಲೇ ಬೇಷರತ್ತಾಗಿ ಹಿಂಪಡೆಯಬೇಕು. ಇಲ್ಲದಿದ್ದರೆ ಈ ಜಿಲ್ಲೆಯ ಯುವಜನರು ಸಂಸದ ಮುನಿಸ್ವಾಮಿ ರವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಶಿವಪ್ಪ.ಎನ್ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಸಂಬಳ ಕೊಡದ ಆರೋಪ: ನರಸಾಪುರದ ಐಫೋನ್ ತಯಾರಿಕ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...