Homeಮುಖಪುಟಮೊರಾರ್ಜಿ ವಸತಿ ಶಾಲೆಗಳಲ್ಲಿ RSS ತಾಲೀಮು ಶಿಬಿರಕ್ಕೆ SFI ವಿರೋಧ

ಮೊರಾರ್ಜಿ ವಸತಿ ಶಾಲೆಗಳಲ್ಲಿ RSS ತಾಲೀಮು ಶಿಬಿರಕ್ಕೆ SFI ವಿರೋಧ

- Advertisement -
- Advertisement -

ರಾಜ್ಯದ ಹಲವು ಮೊರಾರ್ಜಿ ವಸತಿ ಶಾಲೆಗಳಲ್ಲಿ RSS ಕಾರ್ಯಕರ್ತರಿಗೆ ತಾಲೀಮು ಶಿಬಿರ ನಡೆಸಲು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ಅವಕಾಶ ನೀಡಿರುವುದಕ್ಕೆ SFI ವಿರೋಧ ವ್ಯಕ್ತಪಡಿಸಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೂತಾಂಡಹಳ್ಳಿಯಲ್ಲಿರುವ ಕರ್ನಾಟಕ ಸರ್ಕಾರದ ಕ್ರೈಸ್ ಸಂಸ್ಥೆಯ ವಸತಿ ನಿಲಯವನ್ನು ನಾಳೆಯಿಂದ ಅಕ್ಟೋಬರ್ 09 ರಿಂದ 15ರವರೆಗೆ ಒಟ್ಟು 9 ದಿನಗಳ ಕಾಲ ಸಂಘ
ಪರಿವಾರದ ತಾಲೀಮು ಶಿಬಿರ ನಡೆಸ ಲು ಸ್ವತಃ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯೇ ವಸತಿ ಶಾಲೆಯನ್ನು ಹಿಂದುತ್ವ ಕಾರ್ಯಗಳಿಗೆ ಬಳಕೆಗೆ ಬಿಟ್ಟು ಕೊಡಲು ಶಿಫಾರಸ್ಸು ಮಾಡಿರುವುದು ಸರಿಯಲ್ಲ ಎಂದು ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಕೆ. ವಾಸುದೇವರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಾ (ಆರ್ ಎಸ್ ಎಸ್) ಸಂಘ ಕೋಲಾರ ವಿಭಾಗ ಪ್ರಶಿಕ್ಷಣ ಶಿಬಿರವನ್ನು ನಡೆಸಲು
ಕರ್ನಾಟಕ ಸರ್ಕಾರವೇ ಸರ್ಕಾರಿ ವಸತಿ ಶಾಲೆಗಳನ್ನು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಮೂಲಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳನ್ನು ಸಂಘ ಪರಿವಾರದ ತರಬೇತಿ ತಾಣಗಳನ್ನಾಗಿ ಮಾರ್ಪಡಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಕೋಲಾರ ಮೂಲದ ಪ್ರೇರಣಾ ಪ್ರತಿಷ್ಠಾನ ಆಯೋಜಿಸಿರುವ ಶಿಬಿರದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ಹಿಂದು ಸಂಘಟನೆಯ ಕಾರ್ಯಕರ್ತರು ಭಾಗವಹಿಸುತ್ತಿದ್ದು ,ಇದರಿಂದ ವಸತಿ ಶಾಲೆಯ ವಿದ್ಯಾರ್ಥಿಗಳ ಭೋದನಾ ಚಟುವಟಿಕೆಗಳಿಗೆ ಅಡ್ಡಿಯಾಗಲಿದ್ದು, ತಕ್ಷಣವೇ ಸದರಿ ಆದೇಶ ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೋಲಾರ ಮಾತ್ರವಲ್ಲದೆ ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಅಕ್ಟೋಬರ್ 7 ರಿಂದ ಈ ತರಬೇತಿ ನಡೆಯುತ್ತಿದೆ. ಬಾಲಕರು-ತರುಣರಿಗೆ ಯೋಗಾಸನ, ರಾಷ್ಟ್ರೀಯ ಚಿಂತನೆ ಕುರಿತು ದೈಹಿಕ – ಬೌದ್ಧಿಕ- ವ್ಯಕ್ತಿತ್ವ ವಿಕಸನ ಶಿಬಿರದ ಹೆಸರಿನಲ್ಲಿ ತಾಲೀಮು ನಡೆಸಲು ಅನುಮತಿ ನೀಡಲಾಗಿದೆ. ಆದರೆ ಅದರ ಹೆಸರಿನಲ್ಲಿ ಆರ್‌ಎಸ್‌ಎಸ್‌  ಪ್ರಾಥಮಿಕ ಶಿಕ್ಷಾ ವರ್ಗದ ತಾಲೀಮು ನಡೆಸುವುದಾಗಿ ಕರಪತ್ರಗಳನ್ನು ಹಂಚುತ್ತಿದೆ.

ಇದನ್ನೂ ಓದಿ:ಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...