Homeಮುಖಪುಟಕೋಲ್ಕತ್ತಾದ ಪ್ರೆಸಿಡೆನ್ಸಿ ಯುನಿವರ್ಸಿಟಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಸ್‌ಎಫ್‌ಐ ಸಿದ್ಧತೆ

ಕೋಲ್ಕತ್ತಾದ ಪ್ರೆಸಿಡೆನ್ಸಿ ಯುನಿವರ್ಸಿಟಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಸ್‌ಎಫ್‌ಐ ಸಿದ್ಧತೆ

- Advertisement -
- Advertisement -

ದೆಹಲಿ ಜೆಎನ್‌ಯು ವಿದ್ಯಾರ್ಥಿಗಳ ಒಕ್ಕೂಟದ ಕಚೇರಿಯಲ್ಲಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಹಲವಾರು ವಿದ್ಯಾರ್ಥಿಗಳು ಸೇರಿದ್ದರು. ಆದರೆ ಈ ಪ್ರದರ್ಶನದ ಕಾರ್ಯಕ್ರಮಕ್ಕೆ ತಡೆಯೊಡ್ಡಲು ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿದ್ಯುತ್ ಮತ್ತು ಇಂಟರ್ನೆಟ್ ಅನ್ನು ಕಡಿತಗೊಳಿಸಿತು. ಅಷ್ಟೇಅಲ್ಲದೇ, ಈ ವೇಳೆ ಎಬಿವಿಪಿ ಗೂಂಡಾಗಳು ಕಲ್ಲು ತೂರಾಟ ನಡೆಸಿತು ಎನ್ನುವ ಆರೋಪ ಕೇಳಿಬಂದಿದೆ.

ಈ ನಡುವೆ ಕೋಲ್ಕತ್ತಾದ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಜನವರಿ 27 ರಂದು ಸಂಜೆ 4 ಗಂಟೆಗೆ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರ ಪ್ರದರ್ಶಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಅನುಮತಿ ಕೇಳಿದೆ.

ಇದನ್ನೂ ಓದಿ: ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಹೈದರಾಬಾದ್‌ನಲ್ಲಿ, ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಗುಂಪು ಅನುಮತಿಯಿಲ್ಲದೆ ತನ್ನ ಕ್ಯಾಂಪಸ್‌ನಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ಆಯೋಜಿಸಿದೆ. ಅಗತ್ಯ ಕ್ರಮ ತೆಗೆದುಕೊಳ್ಳಲು ಕಾರ್ಯಕ್ರಮದ ಕುರಿತು ವರದಿಯನ್ನು ಕೇಳಲು ವಿಶ್ವವಿದ್ಯಾಲಯದ ಅಧಿಕಾರಿಗಳು ತಿರ್ಮಾನಿಸಿದ್ದಾರೆ.

ಕೊಲ್ಕತ್ತಾ ಪ್ರೆಸಿಡೆನ್ಸಿ ವಿಶ್ವವಿದ್ಯಾನಿಲಯದ ಎಸ್‌ಎಫ್‌ಐ, ಬೃಹತ್ ಪರದೆಯಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ಸಾಧ್ಯತೆಯಿರುವ ಹಿನ್ನೆಲೆ ಕ್ಯಾಂಪಸ್‌ನಲ್ಲಿ ಬ್ಯಾಡ್ಮಿಂಟನ್ ಕೋರ್ಟ್ ಅನ್ನು ಕಾಯ್ದಿರಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಇಮೇಲ್ ಕಳುಹಿಸಿದೆ. ಆದರೆ, ವಿಶ್ವವಿದ್ಯಾಲಯದ ಅಧಿಕಾರಿಗಳು ಮನವಿಗೆ ಇನ್ನೂ ಸ್ಪಂದಿಸಿಲ್ಲ.

ಬಿಬಿಸಿ ಸಾಕ್ಷ್ಯಚಿತ್ರವನ್ನು ಎಡಪಕ್ಷಗಳ ಪರವಾದ ಎಸ್‌ಎಫ್‌ಐ ಸೇರಿದಂತೆ ವಿವಿಧ ರಾಜಕೀಯ ಸಂಘಟನೆಗಳು ಮಂಗಳವಾರ ಕೇರಳದಾದ್ಯಂತ ಪ್ರದರ್ಶಿಸಿದವು. ಈ ವೇಳೆ ಪ್ರದರ್ಶನವನ್ನು ವಿರೋಧಿಸಿ ಬಿಜೆಪಿ ಯುವ ಘಟಕವು ಪ್ರತಿಭಟನೆ ನಡೆಸಿತು. ಇದನ್ನು ರಾಜ್ಯದ ಹಲವು ಭಾಗಗಳಲ್ಲಿ ಪ್ರದರ್ಶಿಸಲಾಯಿತು, ಇದರ ವಿರುದ್ಧ ಬಿಜೆಪಿಯ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆಗಳನ್ನು ಪ್ರೇರೇಪಿಸಿತು. ಯುವ ಮೋರ್ಚಾದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದರು. ಹಾಗಾಗಿ ರಾಜ್ಯ ರಾಜಧಾನಿ ಸೇರಿದಂತೆ ಕೇರಳದ ಕೆಲವು ಪ್ರದೇಶಗಳಲ್ಲಿ ಉದ್ವಿಗ್ನತೆ ಉಂಟಾಗಿದೆ.

ಸಾಕ್ಷ್ಯಚಿತ್ರ ಪ್ರದರ್ಶನಗೊಂಡ ತಿರುವನಂತಪುರಂನ ಪೂಜಾಪ್ಪುರದಲ್ಲೂ ಯುವಮೋರ್ಚಾ ಕಾರ್ಯಕರ್ತರು ಜಮಾಯಿಸಿದ್ದರು. ಮಂಗಳವಾರ ಸಂಜೆ ಎರ್ನಾಕುಲಂ ಮತ್ತು ತಿರುವನಂತಪುರಂನ ಕೆಲವು ಕಾಲೇಜುಗಳಲ್ಲಿ ಹೆಚ್ಚಿನ ಪ್ರದರ್ಶನಗಳು ನಡೆದವು. ಆದರೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳದ ಮಾಜಿ ಸಿಎಂ ಎಕೆ ಆಂಟನಿ ಅವರ ಪುತ್ರ ಅನಿಲ್ ಸಾಕ್ಷ್ಯಚಿತ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಕೆಲವೆಡೆ ಅನಿರೀಕ್ಷಿತವಾಗಿ ಬಿಜೆಪಿಗೆ ಬೆಂಬಲ ವ್ಯಕ್ತವಾಯಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...