Homeಮುಖಪುಟಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ತೀರ್ಪು ನೀಡದ ಸುಪ್ರೀಂ: 7 ಜನರ ವಿಸ್ತೃತ ಪೀಠಕ್ಕೆ ಮೇಲ್ಮನವಿ...

ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತು ತೀರ್ಪು ನೀಡದ ಸುಪ್ರೀಂ: 7 ಜನರ ವಿಸ್ತೃತ ಪೀಠಕ್ಕೆ ಮೇಲ್ಮನವಿ ವರ್ಗಾವಣೆ

- Advertisement -
- Advertisement -

ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಮರುಪರಿಶೀಲನೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಅರ್ಜಿಯನ್ನು ಅಂಗೀಕರಿಸಿದ್ದು, ತೀರ್ಪು ಪ್ರಕಟಿಸದೆ ಅರ್ಜಿಯನ್ನು 7 ಜನರ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.

ಐದು ಜನ ನ್ಯಾಯಮೂರ್ತಿಗಳಿದ್ದ ಪಂಚಪೀಠವು 3:2 ರ ಬಹುಮತದ ಆಧಾರದಲ್ಲಿ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಹಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದಲ್ಲಿ ನ್ಯಾಯಮೂರ್ತಿ ರೋಹಿಂಟನ್‌ ನಾರಿಮನ್‌, ಡಿ.ವೈ.ಚಂದ್ರಚೂಡ್,  ಹಾಗೂ ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ನ್ಯಾಯಪೀಠ ಈ ನಿರ್ಧಾರ ತೆಗೆದುಕೊಂಡಿದೆ.

ಇನ್ನು 2018ರ ಸೆಪ್ಟಂಬರ್‌ 25ರಂದು ಮಹಿಳೆಯರು ದೇಗುಲ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ಐದು ಜನ ನ್ಯಾಯಮೂರ್ತಿಗಳ ನೇತೃತ್ವದ ಪೀಠವು 4:1 ಬಹುಮತದ ಆಧಾರದಲ್ಲಿ ಎಲ್ಲಾ ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂಬ ತೀರ್ಪು ನೀಡಿತ್ತು. ಆಗ ವಯಕ್ತಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್‍ಯ ನಡುವೆ ತಿಕ್ಕಾಟ ಶುರುವಾಗಿತ್ತು.

ಈಗ ಸಿಜೆಐ ರಂಜನ್‌ ಗಗೋಯಿ ನೇತೃತ್ವದ ಪೀಠವು ನೀಡಿದ ತೀರ್ಪಿನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಕಳೆದ ವರ್ಷದ ತೀರ್ಪಿಗೆ ತಡೆಯಾಜ್ಞೆ ನೀಡಿಲ್ಲ. ಅಂದರೆ ಈಗಲೂ ಕೂಡ ಮಹಿಳೆಯರು ದೇವಾಲಯ ಪ್ರವೇಶಿಸಬಹುದಾಗಿದೆ.

ಬಹುತೇಕ ಪ್ರಕರಣಗಳಲ್ಲಿ ಮರುಪರಿಶೀಲನೆಯ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ. ಆದರೆ ಈ ಪ್ರಕರಣದಲ್ಲಿ ಮಾತ್ರ ಮರುಪರಿಶೀಲನಾ ಅರ್ಜಿಯನ್ನು ಕೋರ್ಟ್‌ ಅಂಗೀಕರಿಸಿರುವುದು ಹಲವೂ ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ವರ್ಷದ ಸುಪ್ರೀಂ ತೀರ್ಪಿನ ನಂತರ ಸುಮಾರು 56 ಮೇಲ್ಮನವಿಗಳು ಸಲ್ಲಿಕೆಯಾಗಿದ್ದವರು. 10-50 ವರ್ಷದ ಮಹಿಳೆಯರು ದೇವಾಲಯ ಪ್ರವೇಶಿಸಬಾರದು ಎಂಬುದು ಬಹುತೇಕ ಅರ್ಜಿಗಳ ಸಾರವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...