ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಯಡಿ ಶಾ ಫಾಸಲ್‌ ಬಂಧನ

ಮಾಜಿ ಐಎಸ್‌ ಅಧಿಕಾರಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್ (ಜೆಕೆಪಿಎಂ) ಮುಖ್ಯಸ್ಥ ಶಾ ಫಾಸಲ್‌ರವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಯಡಿ ಬಂಧಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೂಡಲೇ ಜಮ್ಮು ಮತ್ತು ಕಾಶ್ಮೀರದ ಶಾ ಫಾಸಲ್ ಅವರನ್ನು ಬಂಧಿಸಲಾಗಿತ್ತು. ಈಗ ಅವರ ಮೇಲೆ ಮೂರು ತಿಂಗಳವರೆಗೆ ವಿಚಾರಣೆಯಿಲ್ಲದೆ ಬಂಧನಕ್ಕೆ ಅವಕಾಶ ನೀಡುವ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ.

ಶಾ ಫಾಸಲ್ ಈಗ ಈ ಕಾಯ್ದೆಯಡಿ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ನಾಯಕರ ಸುದೀರ್ಘ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಸೇರಿದಂತೆ ಫಾರೂಕ್ ಅಬ್ದುಲ್ಲಾ, ಅಲಿ ಮೊಹಮ್ಮದ್ ಸಾಗರ್, ನಯೀಮ್ ಅಖ್ತರ್, ಸರ್ತಾಜ್ ಮದನಿ ಮತ್ತು ಹಿಲಾಲ್ ಲೋನ್ ಇದ್ದಾರೆ.

ಕಳೆದ ವರ್ಷ ರಾಜಕೀಯಕ್ಕೆ ಸೇರುವ ಇಂಗಿತವನ್ನು ವ್ಯಕ್ತಪಡಿಸಿದ ಶಾ ಫಾಸಲ್ ಅವರನ್ನು ಆಗಸ್ಟ್ 14 ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ನಂತರ ಒಂದು ವಾರದಲ್ಲಿ ಕೇಂದ್ರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸುವುದು ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಸರ್ಕಾರದ ಕ್ರಮವನ್ನು ಫಾಸಲ್ ಅತ್ಯಂತ ತೀವ್ರವಾಗಿ ಟೀಕಿಸಿದ್ದರು.

ಫಾಸಲ್ ಅವರು ಕಾಶ್ಮೀರದಲ್ಲಿ “ಅಶಿಸ್ತಿನ ಹತ್ಯೆಗಳು” ಮತ್ತು “ಭಾರತೀಯ ಮುಸ್ಲಿಮರ ಅಂಚಿನಲ್ಲಿರುವಿಕೆ” ಎಂದು ಕರೆಯುವುದನ್ನು ವಿರೋಧಿಸಿ ಕಳೆದ ವರ್ಷ ಜನವರಿಯಲ್ಲಿ ಐಎಎಸ್ ತೊರೆದಿದ್ದರು. ಅವರು 2009 ರಲ್ಲಿ ರಾಜ್ಯದಿಂದ ಆಯ್ಕೆಯಾದ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದರು.

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

1 COMMENT

LEAVE A REPLY

Please enter your comment!
Please enter your name here