Homeಮುಖಪುಟಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಶೆಹಬಾಝ್ ಷರೀಫ್ ಆಯ್ಕೆ

- Advertisement -
- Advertisement -

ಪಾಕಿಸ್ತಾನದ 24ನೇ ಪ್ರಧಾನಿಯಾಗಿ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಅವರು ಆಯ್ಕೆಯಾಗಿದ್ದಾರೆ. ಶೆಹಬಾಝ್ ಷರೀಫ್ ಅವರ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಪ್ರಧಾನಿಯಾಗಿ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

201 ಮತಗಳನ್ನು ಪಡೆಯುವ ಮೂಲಕ ಶೆಹಬಾಝ್ ಷರೀಫ್ ಗೆಲುವನ್ನು ಸಾಧಿಸಿದ್ದಾರೆ. ಇಮ್ರಾನ್ ಖಾನ್ ಬೆಂಬಲಿತ ಪಿಟಿಐ ಅಭ್ಯರ್ಥಿ ಓಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಮಾತ್ರ ಪಡೆದುಕೊಂಡು ಸೋಲನ್ನು ಅನುಭವಿಸಿದ್ದಾರೆ. ಶೆಹಬಾಝ್ ಕಳೆದ ತಿಂಗಳ ಚುನಾವಣೆಗೆ ಮುನ್ನ ಆಗಸ್ಟ್‌ನಲ್ಲಿ ಸಂಸತ್ತು ವಿಸರ್ಜನೆಗೊಳ್ಳುವವರೆಗೂ ಪ್ರಧಾನಿಯಾಗಿದ್ದರು.

ಭಾನುವಾರದ ಮತದಾನದಲ್ಲಿ ಒಟ್ಟು 293 ಮತಗಳಲ್ಲಿ 201 ಮತಗಳನ್ನು ಪಡೆಯುವ ಮೂಲಕ ಪಿಎಂಎಲ್-ಎನ್ ಅಧ್ಯಕ್ಷ ಶೆಹಬಾಝ್ ಷರೀಫ್ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಸರ್ದಾರ್ ಅಯಾಜ್ ಸಾದಿಕ್ ಘೋಷಿಸಿದ್ದಾರೆ. ಷರೀಫ್ ಅವರ ಏಕೈಕ ಪ್ರತಿಸ್ಪರ್ಧಿ ಸುನ್ನಿ ಇತ್ತೆಹಾದ್ ಕೌನ್ಸಿಲ್ (SIC) ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಜಂಟಿ ಅಭ್ಯರ್ಥಿ ಒಮರ್ ಅಯೂಬ್ ಖಾನ್ ಅವರು 92 ಮತಗಳನ್ನು ಪಡೆದಿದ್ದರು.

ಶೆಹಬಾಝ್‌ ತಮ್ಮ ವಿಜಯ ಭಾಷಣದಲ್ಲಿ ನವಾಜ್ ಷರೀಫ್ ಅವರನ್ನು ನೆನಪಿಸಿಕೊಂಡಿದ್ದಾರೆ.  ಮಿತ್ರಪಕ್ಷಗಳಿಗೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಭಾನಾಯಕನನ್ನಾಗಿ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಪಾಕಿಸ್ತಾನವನ್ನು ಕಟ್ಟಿದ್ದು ನವಾಜ್ ಷರೀಫ್ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ್ದಾರೆ.

ಶೆಹಬಾಝ್ ಅವರು ಮಾತನಾಡುವಾಗ, ಪಿಟಿಐ ಬೆಂಬಲಿತ ಶಾಸಕರು  ‘ಕಳ್ಳ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷವು ಆರೋಪಿಸಿದೆ. ಇತರೆ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆದರೂ ಪಿಎಂಎಲ್-ಎನ್ ಮತ್ತು ಪಿಪಿಪಿಯ ಹಲವು ಅಭ್ಯರ್ಥಿಗಳನ್ನು ವಿಜೇತರೆಂದು ಘೋಷಿಸಲಾಗಿದೆ ಎಂದು ಇಮ್ರಾನ್ ಖಾನ್ ಅವರ ಪಿಟಿಐ ಆರೋಪಿಸಿದೆ. ಅನೇಕ ಪಿಟಿಐ ನಾಯಕರು ಚುನಾವಣಾ ಅಧಿಕಾರಿಗಳು ಜನರ ಆದೇಶವನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದಕ್ಕೆ ಮೊದಲು ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಹಾಗೂ ಉಪ ಸ್ಪೀಕರ್ ಹುದ್ದೆಗಳಿಗೆ ಪಿಎಂಎಲ್‌–ಎನ್‌, ಪಿಪಿಪಿ ಜೊತೆಯಾಗಿ ಕಣಕ್ಕಿಳಿಸಿದಿದ್ದ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲುವು ಸಾಧಿಸಿದ್ದರು. ಗೆಲುವಿನ ಬಳಿಕ ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಪಾಕಿಸ್ತಾನ’ದ ಪ್ರಧಾನಿಯಾಗಿ ಷರೀಫ್ ಅವರನ್ನು ಘೋಷಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ. ಷರೀಫ್ ಅವರು PML-N, ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಪಾರ್ಲಿಮೆಂಟೇರಿಯನ್ಸ್, ಮುತ್ತಹಿದಾ ಕ್ವಾಮಿ ಮೂವ್ಮೆಂಟ್-ಪಾಕಿಸ್ತಾನ ಮತ್ತು ಇತರ ಮಿತ್ರಪಕ್ಷಗಳಿಂದ ಮತಗಳನ್ನು ಪಡೆದಿದ್ದರು.

ಫೆ.8ರಂದು ನಡೆದಿದ್ದ ಪಾಕಿಸ್ತಾನ ಸಂಸತ್‌ ಚುನಾವಣೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆದುಕೊಂಡಿಲ್ಲ. ಪಿಟಿಐ ಬೆಂಬಲಿತ ಪಕ್ಷೇತರರು 101, ಪಿಎಂಎಲ್‌-ಎನ್‌ (ನವಾಜ್‌) 75, ಪಿಪಿಪಿ (ಭುಟ್ಟೊ) 54, ಇತರೆ ಪ್ರಾದೇಶಿಕ ಪಕ್ಷಗಳು 34 ಸ್ಥಾನಗಳಲ್ಲಿ ಜಯ ಗಳಿಸಿವೆ.

ಪ್ರಧಾನಿ ಹುದ್ದೆ ನೀಡಿದರೆ ಸಮ್ಮಿಶ್ರ ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಹೇಳಿದ್ದ ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ಜರ್ದಾರಿ, ಮಂಗಳವಾರ ಪ್ರಧಾನಿ ರೇಸ್‌ನಿಂದ ಹಿಂದೆ ಸರಿದಿದ್ದರು. ಹೊಸ ಸರಕಾರ ರಚನೆಗೆ ಪಿಎಂಎನ್‌ಎಲ್‌ ಪಕ್ಷಕ್ಕೆ ಷರತ್ತುಬದ್ಧ ಬೆಂಬಲ ನೀಡುವುದಾಗಿ ಹೇಳಿರುವ ಭುಟ್ಟೋ ಅವರು ಮಾಜಿ ಪ್ರಧಾನಿ ನವಾಜ್ ಷರೀಫ್‌ ಆಯ್ಕೆ ಮಾಡುವ ಅಭ್ಯರ್ಥಿಗೆ ನಮ್ಮ ಪಕ್ಷ ವಿಷಯಾಧಾರಿತ ಬೆಂಬಲ ನೀಡಲಿದೆ. ಆದರೆ, ಸರಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಘೋಷಣೆ ಮಾಡಿದ್ದರು.

ಇದನ್ನು ಓದಿ: ಅದಾನಿಯ 16 ಲಕ್ಷ ಕೋಟಿ ರೂ. ಮನ್ನಾ: ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...