Homeಕರ್ನಾಟಕಹುತಾತ್ಮ ಭಗತ್ ಸಿಂಗ್ ಜನ್ಮದಿನ: ಕ್ರಾಂತಿಕಾರಿ ಸೇನಾನಿಗೆ ಗೌರವ ಸಲ್ಲಿಸಿದ ನಾಯಕರು

ಹುತಾತ್ಮ ಭಗತ್ ಸಿಂಗ್ ಜನ್ಮದಿನ: ಕ್ರಾಂತಿಕಾರಿ ಸೇನಾನಿಗೆ ಗೌರವ ಸಲ್ಲಿಸಿದ ನಾಯಕರು

- Advertisement -
- Advertisement -

ಹೋರಾಟಗಾರ ಹುತಾತ್ಮ ಭಗತ್ ಸಿಂಗ್ ಅವರ ‘114ನೇ ಜನ್ಮ ಜಯಂತಿ’ಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಗಣ್ಯರು ಕ್ರಾಂತಿಕಾರಿ ಸೇನಾನಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಚನ್ನಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಿಣರಾಯಿ ವಿಜಯನ್ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿ ಗೌರವ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ “ವೀರ ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸುತ್ತಾರೆ. ಅವರ ಧೈರ್ಯ, ತ್ಯಾಗ ಅಸಂಖ್ಯಾತ ಜನರಲ್ಲಿ ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತು. ಅವರ ಉದಾತ್ತ ಆದರ್ಶಗಳನ್ನು ಸ್ಮರಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

“ದೇಶಕ್ಕಾಗಿ ಪ್ರಾಣವನ್ನೆ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿ ಸೇನಾನಿ ಭಗತ್‌ಸಿಂಗ್ ಹುಟ್ಟುಹಬ್ಬದಂದು ಅವರನ್ನು ಗೌರವದಿಂದ ನೆನೆಯುವೆ. ಅವರ ಜೀವನಾದರ್ಶಗಳು ನಮಗೆಲ್ಲ ಪ್ರೇರಣೆಯಾಗಲಿ ಎಂದು ಹಾರೈಸುವೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

’ಶಹೀದ್ ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿದ್ದಾರೆ. ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಅವರಿಗೆ ಸೇರಿದೆ. ಇಂದು, ಶಹೀದ್-ಎ-ಅಜಮ್ ಭಗತ್ ಸಿಂಗ್ ಅವರ ಜನ್ಮ ದಿನಾಚರಣೆಯಂದು, ಭಗತ್ ಸಿಂಗ್ ಅವರ ಚಿಂತನೆ, ವಿಚಾರಗಳನ್ನು ಅನುಸರಿಸುವ ಮೂಲಕ ಅವರ ಅಸ್ತಿತ್ವವನ್ನು ಜೀವಂತವಾಗಿರಿಸುವುದು  ನಮ್ಮ ಕರ್ತವ್ಯ ಎಂದು ನಾನು ಹೇಳಲು ಬಯಸುತ್ತೇನೆ” ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಚನ್ನಿ ಹೇಳಿದ್ದಾರೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

“ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಹೋರಾಟಗಾರರು, ಭಾರತಾಂಬೆಯ ಹೆಮ್ಮೆಯ ಪುತ್ರರೂ ಆದ ಭಗತ್ ಸಿಂಗ್ ಅವರ ಜನ್ಮದಿನದಂದು ಆ ಮಹಾನ್ ಚೇತನಕ್ಕೆ ನನ್ನ ಪ್ರಣಾಮಗಳು. ಅವರ ಕೆಚ್ಚು, ಅಪ್ರತಿಮ ದೇಶಭಕ್ತಿ ನಮಗೆಲ್ಲರಿಗೂ ಪ್ರೇರಣೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

“ಶಹೀದ್ ಭಗತ್ ಸಿಂಗ್ ಅವರ ಸ್ವಾತಂತ್ರ್ಯದ ಕಲ್ಪನೆಯು ವಸಾಹತುಶಾಹಿ ಗುಲಾಮಗಿರಿಯಿಂದ ಸ್ವಾತಂತ್ರ್ಯ ಪಡೆಯುವುದು ಮಾತ್ರವಲ್ಲದೆ ಜಾತಿವಾದ, ಕೋಮುವಾದ ಮತ್ತು ಬಂಡವಾಳಶಾಹಿ ಶೋಷಣೆ ಸೇರಿದಂತೆ ಎಲ್ಲಾ ವ್ಯವಸ್ಥಿತ ಅನ್ಯಾಯಗಳಿಂದ ಜನರನ್ನು ವಿಮೋಚನೆ ಮಾಡುವುದಾಗಿತ್ತು. ಇಂದು, ಅವರ ಆಲೋಚನೆಗಳು ವ್ಯರ್ಥವಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡೋಣ” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.


ಇದನ್ನೂ ಓದಿ: ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...