Homeಮುಖಪುಟಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ಉಳ್ಳವರಿಂದ ಸಂವಿಧಾನದ ಬುಡಮೇಲು :ಪ್ರೊ. ರವಿವರ್ಮಕುಮಾರ್ ಆತಂಕ

ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

- Advertisement -
- Advertisement -

ಭೂಸುಧಾರಣೆಯಿಂದ ಉಳುವವರು ಮತ್ತು ದುಡಿಯುವವರ ಭಾರತವಾಗಿದ್ದನ್ನು ಈಗ ಉಳ್ಳವರ ಭಾರತವನ್ನಾಗಿ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ಆತಂಕ ವ್ಯಕ್ತಪಡಿಸಿದರು.

ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಮಮನೋಹ ಲೋಹಿಯಾ ಮತ್ತು ಸಮತಾ ವಿದ್ಯಾಲಯ ಟ್ರಸ್ಟ್ ನಿಂದ  2 ಸಾವಿರ ಮಾಸ್ಕ್ ಗಳು ಮತ್ತು ಸ್ಯಾನಿಟೈಜರ್ ವಿತರಿಸಿ ಅವರು ಮಾತನಾಡಿದರು.

ದಿವಂಗತ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಉಳುವವನೇ ಭೂಮಿಯ ಒಡೆಯ ಎಂಬ ಕ್ರಾಂತಿಕಾರಕ ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿದರು. ಪರಿಣಾಮ ಮಠ-ದೇವಾಲಯಗಳು, ದೊಡ್ಡದೊಡ್ಡ ಭೂಮಾಲೀಕರು, ಜಾಗೀರುದಾರರ ಬಳಿಯಿದ್ದ ಲಕ್ಷಾಂತರ ಎಕರೆ ಭೂಮಿ ಗೇಣಿದಾರರು ಮತ್ತು ಉಳುವವರಿಗೆ ಸೇರುವಂತಾಯಿತು. ಇನ್ನೊಂದೆಡೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಬ್ಯಾಂಕುಗಳು, ವಿಮಾಕ್ಷೇತ್ರ, ವಿದ್ಯುಚ್ಛಕ್ತಿ ಕ್ಷೇತ್ರಗಳನ್ನು ರಾಷ್ಟ್ರೀಕರಣಗೊಳಿಸಿದರು. ರಾಜಧನ ರದ್ದುಪಡಿಸಿದರು. ಸಂವಿಧಾನದ ಆಶಯಗಳಡಿ ಕೆಲಸ ಮಾಡಿದರು. ದೇವರಾಜ ಅರಸು ಮತ್ತು ಇಂದಿರಾಗಾಂಧಿ ಕೈಗೊಂಡ ಕಾರ್ಯಗಳಿಂದ ಉಳ್ಳವರ ಭಾರತವಾಗಿದ್ದುದು ಉಳುವವರು ದುಡಿಯುವವರ ಭಾರತವಾಯಿತು ಎಂದರು.

ಆದರೆ ಇಂದು ಉಳ್ಳವರು ಪ್ರಬಲರಾಗಿದ್ದಾರೆ. ಪ್ರತೀಕಾರ ಮನೋಭಾವದಿಂದ ಉಳುವವರಿಂದ ಭೂಮಿ ಕಿತ್ತುಕೊಳ್ಳತೊಡಗಿದ್ದಾರೆ. ಉಳ್ಳವರಿಂದ ಸಂವಿಧಾನವನ್ನು ತಿರುಚುವ ಮತ್ತು ಬುಡಮೇಲು ಮಾಡುವ ಸಂಚು ನಡೆಯುತ್ತಿದೆ. ಸಂವಿಧಾನ ವಿರೋಧಿ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಅವರು ಹೇಳಿದರು.

ಇಂದು ಉಳುವವರು ಮತ್ತು ದುಡಿಯುವವರಿಂದ ಭೂಮಿಯನ್ನು ಕಿತ್ತುಕೊಂಡು ಉಳ್ಳವರ ಭಾರತವನ್ನಾಗಿ ಮಾಡಲಾಗುತ್ತಿದೆ. ಕೊರೊನ ಸಂದರ್ಭವನ್ನು ಉಪಯೋಗಿಸಿಕೊಂಡು ಸಂವಿಧಾನವನ್ನು ನಾಶ ಮಾಡುವ ಕೆಲಸ ವ್ಯಾಪಕವಾಗಿ ನಡೆಯುತ್ತಿದೆ. ರೈತರ ಭೂಮಿಯನ್ನು ಬಂಡವಾಳಗಾರರಿಗೆ ಕೊಡಲಾಗುತ್ತಿದೆ. ಕಾರ್ಪೋರೇಟ್ ಕಂಪನಿಗಳ ಕಪ್ಪುಹಣವನ್ನು ಭೂಮಿ ಖರೀದಿಗೆ ಸುರಿದು ಬಿಳಿಹಣ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಯಾವುದೇ ಸರ್ಕಾರಕ್ಕೆ ಉತ್ತರದಾಯಿತ್ವ ಇರಬೇಕು. ಸರ್ಕಾರ ತಾನು ತೆಗೆದುಕೊಳ್ಳುವ ತೀರ್ಮಾನಕ್ಕೆ ಹೊಣೆಗಾರನಾಗಬೇಕು. ಆದರೆ ಇಂದು ಸಂವಿಧಾನ ನೋಡುತ್ತಿಲ್ಲ ಮತ್ತು ಪಾಲಿಸುತ್ತಿಲ್ಲ. ಉದಾರಹರಣೆಗೆ ನೋಟು ಅಮಾನ್ಯೀಕರಣವೇ ಸಾಕ್ಷಿಯಾಗಿದೆ ಎಂದರು.

ಸಂವಿಧಾನದ ಪ್ರಕಾರ ನೋಟು ಅಮಾನ್ಯಗೊಳಿಸುವ ಬಗ್ಗೆ ಆರ್.ಬಿ.ಐ ತೀರ್ಮಾನಿಸಬೇಕಿತ್ತು. ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕಿತ್ತು. ಕೇಂದ್ರ ಶಿಫಾರಸ್ಸ ಒಪ್ಪಬೇಕಿತ್ತು. ನಂತರ ರಿಸರ್ವ ಬ್ಯಾಂಕ್ ಜಾರಿಗೊಳಿಸಬೇಕಿತ್ತು. ಈ ಹಂತದಲ್ಲಿ ಆರ್.ಬಿ.ಐ ನೋಟು ಮುದ್ರಣದ ತಯಾರಿ ಮಾಡಿಕೊಂಡು ನೋಟುಗಳನ್ನು ಪ್ರಿಂಟ್ ಮಾಡಬೇಕಿತ್ತು. ಬ್ಯಾಂಕು, ಎಟಿಎಂಗಳಿಗೆ ರವಾನಿಸಬೇಕಿತ್ತು. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕಿತ್ತು. ಇದ್ಯಾವ ಪ್ರಕ್ರಿಯೆಯೂ ನಡೆಯಲಿಲ್ಲ ಎಂದು ಅವರು ಹೇಳಿದರು.

ನೋಟು ಅಮಾನ್ಯೀಕರಣದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿಲ್ಲ. ಹಣಕಾಸು ಸಚಿವರಿಗೆ, ಆರ್.ಬಿ.ಐ ನಿರ್ದೇಶಕರಿಗೂ ತಿಳಿದಿರಲಿಲ್ಲ. ಇಂತಹ ಕ್ರಮದಿಂದ ಆರ್ಥಿಕತೆ ಮತ್ತು ರೈತರು, ಕಾರ್ಮಿಕರು ಜನಸಾಮಾನ್ಯರು ಹೊಡೆತ ತಿಂದರು. ಜಿಎಸ್‌ಟಿಯಿಂದಲೂ ಸಾವಿರರಾರು ಉದ್ದಿಮೆಗಳು ಮುಚ್ಚಿದವು ಎಂದರು.

ಕಾರ್ಯಕ್ರಮದಲ್ಲಿ ಜನಪರ ಚಿಂತಕ ಕೆ.ದೊರೈರಾಜ್, ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ಮಾತನಾಡಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಸ್ವಾಗತಿಸಿ, ವಂದಿಸಿದರು.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಪ್ರಕರಣವನ್ನು ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....