ರಾಜ್ಯದ ಶಕ್ತಿ ಯೋಜನೆ ಮಾದರಿಯನ್ನು ಆಂಧ್ರಪ್ರದೇಶದಲ್ಲಿ ಜಾರಿಗೊಳಿಸುತ್ತೇವೆ ಎಂದು ಅಲ್ಲಿನ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಎಂಬ ನಾಲ್ಕು ಸರ್ಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ರಾಜ್ಯದ ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನವನ್ನು ಅಧ್ಯಯನ ಮಾಡುವ ಉದ್ದೇಶದಿಂದ ಆಂಧ್ರ ಸರ್ಕಾರದ ನಿಯೋಗವು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಶಕ್ತಿ ಯೋಜನೆ ನಮ್ಮಲ್ಲೂ
ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಅವರೊಂದಿಗೆ, ಆಂಧ್ರ ಸರ್ಕಾರದ ಸಚಿವರುಗಾಳಾದ ಗೃಹ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸಂಧ್ಯಾ ರಾಣಿ ಸೇರಿದಂತೆ ರಾಜ್ಯದ ನಿಯೋಗದೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಶುಕ್ರವಾರ ಭೇಟಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆಂಧ್ರಪ್ರದೇಶದ ಆಡಳಿತಾರೂಢ ಮೈತ್ರಿಕೂಟವು ತನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ “ಸೂಪರ್ ಸಿಕ್ಸ್” ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಪರಿಚಯಿಸುವುದಾಗಿ ಭರವಸೆ ನೀಡಿತ್ತು. ಆದ್ದರಿಂದ ನಿಯೋಗದ ಈ ಸಭೆಯು ಮಹತ್ವದ್ದಾಗಿದ್ದು, ಸರ್ಕಾರವು ನೀಡಿದ್ದ ಭರವಸೆಗಳಲ್ಲಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣವೂ ಸೇರಿತ್ತು. ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಯೋಜನೆಯನ್ನು ಜಾರಿಗೊಳಿಸುವ ಕಾರ್ಯಸಾಧ್ಯತೆ, ಪ್ರಯೋಜನಗಳು ಮತ್ತು ಸವಾಲುಗಳನ್ನು ಅರ್ಥಮಾಡಿಕೊಳ್ಳಲು ನಿಯೋಗವು ಪ್ರಯತ್ನಿಸಿತು.
“ಶಕ್ತಿ ಯೋಜನೆಯು ರಾಷ್ಟ್ರದಾದ್ಯಂತ ಸುದ್ದಿ ಮಾಡಿದೆ. ಇದು ದುಡಿಯುವ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ. ಇದು ಬಡವರ ಪರವಾದ ಉಪಕ್ರಮವಾಗಿದೆ. ಆಂಧ್ರಪ್ರದೇಶದಲ್ಲಿ ಇದೇ ರೀತಿಯ ಜನಪರ ಯೋಜನೆಗಳನ್ನು ಪ್ರಾರಂಭಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆ ನಮ್ಮಲ್ಲೂ
ಆಂಧ್ರಪ್ರದೇಶದ ನಿಯೋಗದಲ್ಲಿ ಹಣಕಾಸು ಕಾರ್ಯದರ್ಶಿ ರೊನಾಲ್ಡ್ ರೋಸ್ ಮತ್ತು ಸಾರಿಗೆ ಕಾರ್ಯದರ್ಶಿ ಕಾಂತಿಲಾಲ್ ದಂಡೆ ಕೂಡ ಇದ್ದರು. ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್ ಮತ್ತು ಕೆಎಸ್‌ಆರ್‌ಟಿಸಿ ವಿಜಿಲೆನ್ಸ್ ನಿರ್ದೇಶಕಿ ನಂದಿನಿ ದೇವಿ ಬರಮಾಡಿಕೊಂಡರು.
ರಾಜ್ಯದ ಅಧಿಕಾರಿಗಳು ಶಕ್ತಿ ಯೋಜನೆಯ ಯೋಜನೆ ಮತ್ತು ಅನುಷ್ಠಾನದ ಬಗ್ಗೆ ವಿವರವಾದ ಒಳನೋಟಗಳನ್ನು ಒದಗಿಸಿದರು, ಆಂಧ್ರಪ್ರದೇಶ ತಂಡಕ್ಕೆ ಅಮೂಲ್ಯವಾದ ಮಾಹಿತಿಗಳನ್ನು ನೀಡಿದ್ದಾರೆ. ರಾಜ್ಯದ ಶಕ್ತಿ ಯೋಜನೆಯು ಇತರ ರಾಜ್ಯಗಳಿಗೆ ಮಾದರಿಯಾಗಿ ಕಾರ್ಯನಿರ್ವಹಿಸುವುದರೊಂದಿಗೆ ಸಮಾಜದ ತಳಮಟ್ಟದಲ್ಲಿರುವ ವರ್ಗಗಳಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಸಾರ್ವಜನಿಕ ಕಲ್ಯಾಣ ಯೋಜನೆಗಳ ಮೇಲೆ ದೇಶದಾದ್ಯಂತ ಗಮನಿಸಲಾಗುತ್ತಿದೆ ಎಂಬುವುದನ್ನು ಈ ಭೇಟಿಯು ನಿರೂಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಇದನ್ನೂ ಓದಿ: ಕೇರಳ | ಕೊಲೆ ಪ್ರಕರಣ – 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ
ಕೇರಳ | ಕೊಲೆ ಪ್ರಕರಣ – 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ


