Homeಕರ್ನಾಟಕಶಕ್ತಿಯೋಜನೆ: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಸಂಗೊಳ್ಳಿಯ ಸಂಗವ್ವ-ಸಿಎಂ ಸಿದ್ದರಾಮಯ್ಯ ಭೇಟಿ

ಶಕ್ತಿಯೋಜನೆ: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಸಂಗೊಳ್ಳಿಯ ಸಂಗವ್ವ-ಸಿಎಂ ಸಿದ್ದರಾಮಯ್ಯ ಭೇಟಿ

- Advertisement -
- Advertisement -

ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ‘ಶಕ್ತಿಯೋಜನೆ’ ಜಾರಿಯಾದ ದಿನದಂದು ಮಹಿಳೆಯೊಬ್ಬರು ಬಸ್‌ನ ಫುಟ್​ಬೋರ್ಡ್​ಗೆ ನಮಸ್ಕರಿಸಿ ಬಸ್​​ ಏರಿದ್ದರು. ಆ ದೃಶ್ಯ ಅಂದು ರಾಜ್ಯದ ಗಮನ ಸೆಳೆದಿತ್ತು. ಇದೀಗ ಆ ಮಹಿಳೆಯು ಕನ್ನಡದ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಎನ್ನುವ ಮಹಿಳೆ ಶಕ್ತಿ ಯೋಜನೆ ಜಾರಿಗೆ ಬಂದ ದಿನ ಧಾರವಾಡದ ಬಸ್‌ನಿಲ್ದಾಣದಲ್ಲಿ ಸರ್ಕಾರಿ ಬಸ್​ಗೆ ನಮಸ್ಕರಿಸಿ ಬಸ್​​ ಏರಿದ್ದರು. ಇಂದು ಅವರಿಗೆ ಮುಖ್ಯಮಂತ್ರಿಯವರೊಂದಿಗೆ ಕೆಲ ಕ್ಷಣಗಳನ್ನು ಕಳೆಯುವ ಅವಕಾಶ ಸಿಕ್ಕಿದೆ. ಇಂದು ಖಾಸಗಿ ವಾಹಿನಿಯೊಂದರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಭಾಗಿಯಾಗಿದ್ದು, ಅಲ್ಲೇ ಈಕೆಯನ್ನು ಭೇಟಿ ಮಾಡಿದ ಅವರು ಆ ಕುರಿತು ಅಪಾರ ಸಂತೋಷ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ”ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು” ಎಂದಿದ್ದಾರೆ.

”ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್‌ ಕನ್ನಡ ವಾಹಿನಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...