Homeಕರ್ನಾಟಕಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ...

ಇಸ್ಕಾನ್ ಮಂದಿರವನ್ನು ಮಸೀದಿ ಎಂದ ಶಕುಂತಲಾ; ತುಮಕೂರು ಬಿಜೆಪಿ ನಾಯಕಿ ಮೇಲೆ ಒಡಿಸ್ಸಾ ಪೊಲೀಸರ ಹದ್ದಿನ ಕಣ್ಣು

ಒಡಿಸ್ಸಾ ರೈಲು ದುರಂತಕ್ಕೆ ಕೋಮು ಬಣ್ಣ ಹಚ್ಚಲು ಯತ್ನಿಸಿ ಬಿಜೆಪಿ ನಾಯಕಿ ಎಸ್.ಶಕುಂತಲಾ ಟೀಕೆಗೆ ಗುರಿಯಾಗಿದ್ದಾರೆ

- Advertisement -
- Advertisement -

ಒಡಿಶಾದ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೇ ಹೇಳಿದ್ದಾರೆ. ಆದರೆ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್​ ಎನ್ನುವವರು ಈ ದುರಂತಕ್ಕೆ ಮಸೀದಿ ಕಾರಣ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು, ಸಧ್ಯ ಅದು ವೈರಲ್ ಆಗುತ್ತಿದೆ. ಈ ಪೋಸ್ಟ್ ಹಾಕಿರುವ ತುಮಕೂರಿನ ಮಹಿಳೆ ಯಾರೆಂದು ಒಡಿಶಾ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ಎನ್ನುವವರು ಈ ಘಟನೆಗೆ ಮಸೀದಿ ಪಕ್ಕದಲ್ಲಿ ಇರುವುದು ಕಾರಣ ಎಂದು ಬಿಂಬಿಸುವ ಅರ್ಥದಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನು ಕೆಲವರು ಒಡಿಶಾ ಬಾಲಸೋರ್ ರೈಲು ದುರಂತಕ್ಕೆ ಜಿಹಾದಿಗಳು ಕಾರಣ ಎಂದು ಘಟನೆ ನಡೆದ ಸಮೀಪವಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಎಸ್ ಅವರ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಒಡಿಶಾ ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಒಡಿಶಾ ಪೊಲೀಸರು, ಮಸೀದಿ ಫೋಟೋ ಹರಿಬಿಟ್ಟ ಮಹಿಳೆ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಪೊಲೀಸರಿಂದ ಮಹಿಳೆಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಒಡಿಶಾ ಪೊಲೀಸರು ಈ ಸುಳ್ಳು ಸುದ್ದಿ ಬಗ್ಗೆ ಟ್ವಿಟ್ಟರ್​ ಮೂಲಕ ಎಚ್ಚರಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

”ರೈಲು ದುರಂತದ ಬಗ್ಗೆ ಕೇಂದ್ರ ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ಯಾರು ಕೊಡ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಬಾರದು . ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಪೋಸ್ಟ್ ಮಾಡಿರುವವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಒಡಿಶಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಒಡಿಶಾದ ಭೀಕರ ರೈಲು ದುರಂತಕ್ಕೆ ಮುಸ್ಲಿಂ ಸಮುದಾಯ ಕಾರಣವೆಂದು ಘಟನೆ ಸಮೀಪದಲ್ಲಿರುವ ಮಸೀದಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಗಳು ನಡೆಯುತ್ತಿದ್ದು, ಇದರ ಮೇಲೆ ಒಡಿಶಾ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು, ಈ ರೀತಿ ಕೋಮು ಸೌಹಾರ್ದತೆಯನ್ನು ಕೆಡಿಸುವ ಪ್ರಯತ್ನ ಮಾಡಿರುವ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಎಸ್ ವಿರುದ್ಧ ಯಾವುದೇ ಕ್ರಮ ವಹಿಸಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.

ಮಸೀದಿಯಲ್ಲ; ಮಂದಿರ

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ, ವೈರಲ್ ಚಿತ್ರದಲ್ಲಿ ಕಂಡುಬರುವ ಗುರುತು ಮಾಡಲಾದ ಧಾರ್ಮಿಕ ಕೇಂದ್ರ ಮಸೀದಿಯಲ್ಲ ಎಂದು ಸ್ಪಷ್ಟವಾಗಿದೆ. ಬದಲಿಗೆ ಗುರುತು ಮಾಡಿರುವ ಚಿತ್ರವು ದೇವಸ್ಥಾನ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ.

ಅಪಘಾತ ನಡೆದ ಸ್ಥಳದಲ್ಲಿ ಹಾಜರಿದ್ದ ಪತ್ರಕರ್ತ ತಮಲ್ ಸಹಾ ಅವರನ್ನು ಆಲ್ಟ್‌ನ್ಯೂಸ್ ತಂಡ ಸಂಪರ್ಕಿಸಿದೆ. ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲಿ ಕಂಡುಬರುವ ರಚನೆಯು ನಿಜವಾಗಿಯೂ ದೇವಾಲಯವಾಗಿದೆ ಎಂದು ಅವರು ‘ಆಲ್ಟ್ ನ್ಯೂಸ್‌’ಗೆ ಖಚಿತಪಡಿಸಿದ್ದಾರೆ.

ವೈರಲ್ ಪೋಸ್ಟ್‌ನಲ್ಲಿ ಮಸೀದಿ ಎಂದು ಪ್ರತಿಪಾದಿಸಿರುವ ಬಿಳಿ ಬಣ್ಣದ ಕಟ್ಟಡವು ಇಸ್ಕಾನ್ ದೇವಸ್ಥಾನವಾಗಿದೆ. ಐದು ತಿಂಗಳ ಹಿಂದೆ ಅಪ್‌ಲೋಡ್ ಮಾಡಲಾದ ದೇವಾಲಯದ ಯೂಟ್ಯೂಬ್ ವೀಡಿಯೊದಲ್ಲಿಯೂ ಇದು ಸ್ಪಷ್ಟವಾಗುತ್ತದೆ. ವಿಡಿಯೋವನ್ನು ಅಪ್‌ಲೋಡ್ ಮಾಡುವ ಸಂದರ್ಭದಲ್ಲಿ ದೇವಾಲಯದ ನಿರ್ಮಾಣದ ಕೆಲಸ ಪ್ರಗತಿಯಲಿರುವುದು. ಗೊತ್ತಾಗುತ್ತದೆ.

ಆಲ್ಟ್‌ನ್ಯೂಸ್ ತಂಡಕ್ಕೆ ಮಾಹಿತಿ ನೀಡಿರುವ ಪತ್ರಕರ್ತ ತಮಾಲ್ ಸಹಾ ಅವರು ದೇವಾಲಯಕ್ಕೆ ಭೇಟಿ ನೀಡಿ, ದೇವಾಲಯದ ಹೊರಗೆ ಇಸ್ಕಾನ್ ಬಹನಾಗ ಎಂಬ ಬೋರ್ಡ್‌ ಇರುವ ಚಿತ್ರವನ್ನು ಕಳುಹಿಸಿದ್ದಾರೆ ಎಂದು ‘ಆಲ್ಟ್‌ನ್ಯೂಸ್’ ವರದಿ ಮಾಡಿದೆ. ದೇವಸ್ಥಾನದ ಪ್ರವೇಶ ದ್ವಾರದ ಚಿತ್ರವನ್ನು ನೋಡಬಹುದು.

ಉದ್ದೇಶಿತ ಮಸೀದಿಯನ್ನು ತೋರಿಸುವ ವೈರಲ್ ಚಿತ್ರ ಮತ್ತು ರಾಯಿಟರ್ಸ್ ವರದಿಯಲ್ಲಿನ ಚಿತ್ರಗಳನ್ನು ಹೋಲಿಕೆ ಮಾಡಿದಾಗ ಈ ಮೂರು ಚಿತ್ರಗಳು ಒಂದೇ ಎಂಬುದು ಸ್ಪಷ್ಟವಾಗುತ್ತದೆ. ಅಂದರೆ, ವೈರಲ್ ಪೋಸ್ಟ್‌ಗಳಲ್ಲಿ, ಅದನ್ನು ಮಸೀದಿ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದ್ದು, ಅದು ನಿಜವಾಗಿಯೂ ದೇವಾಲಯವಾಗಿದೆ.

ಬಹನಾಗಾದ ಇಸ್ಕಾನ್ ದೇವಾಲಯದ ಆಡಳಿತ ಮಂಡಳಿಯ ಸದಸ್ಯರನ್ನು ಆಲ್ಟ್‌ನ್ಯೂಸ್ ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಅವರು ದೇವಾಲಯದ ಸಮೀಪವಿರುವ ಹಳಿಗಳ ಮೇಲೆ ರೈಲು ಅಪಘಾತ ಸಂಭವಿಸಿರುವುದನ್ನು ಖಚಿತಪಡಿಸಿದ್ದಾರೆ. ಅಪಘಾತ ಸ್ಥಳದ ವೈರಲ್ ಚಿತ್ರದಲ್ಲಿ ಟ್ರ್ಯಾಕ್‌ಗಳ ಪಕ್ಕದಲ್ಲಿ ಕಂಡುಬರುವ ಕಟ್ಟಡವು ಇಸ್ಕಾನ್ ದೇವಾಲಯವಾಗಿದೆ ಎಂದು ಅವರು ದೃಢಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Bjp shakuntala should be immediate FIR and arrest the odisha govt to bjp facist trying to provoke the incident as to show the Hindus bcoz of masjid it happened if not accident not happen. Sharing humanity of feel sad what happen to the people’s who died are severe wounded .sharing with poisoning bhagwa terrorist should arrest else try to do again again giving other angels.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...