Homeಕರ್ನಾಟಕದಲಿತರಿಗೆ ಅವಮಾನ: ಬಂಧನ ಭೀತಿಯಿಂದ ತಲೆಮರಿಸಿಕೊಂಡಿದ್ದಾರಾ ನಟ ಉಪೇಂದ್ರ?

ದಲಿತರಿಗೆ ಅವಮಾನ: ಬಂಧನ ಭೀತಿಯಿಂದ ತಲೆಮರಿಸಿಕೊಂಡಿದ್ದಾರಾ ನಟ ಉಪೇಂದ್ರ?

- Advertisement -
- Advertisement -

ಚಿತ್ರನಟ ಉಪೇಂದ್ರ ಫೇಸ್ಬುಕ್ ವಿಡಿಯೋ ಸಂದೇಶದಲ್ಲಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದು, ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಪೊಲೀಸರು ಇದೀಗ ತನಿಖೆ ಆರಂಭಿಸಿದ್ದಾರೆ. ಆದರೆ ನಟ ಉಪೇಂದ್ರ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ ಉಪೇಂದ್ರ ಅವರ ಮನೆಗೆ ಭೇಟಿ ನೀಡಿರುವ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಅಟ್ರಾಸಿಟಿ ಕೇಸ್ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ನಟ ಉಪೇಂದ್ರ ಅವರು ನಾಪತ್ತೆಯಾಗಿದ್ದಾರೆ ಎನ್ನುವ ಸುದ್ದಿ ವರದಿಯಾಗುತ್ತಿವೆ.

ಉಪೇಂದ್ರ ಅವರ ಮನೆಗೆ ಪೊಲೀಸರು ನೋಟಿಸ್ ನೀಡಲು ಹೋದಾಗ ಅವರ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಕತ್ರಿಗುಪ್ಪೆ ಹಾಗೂ ಸದಾಶಿವನಗರದಲ್ಲಿರುವ ಎರಡೂ ನಿವಾಸಕ್ಕೂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಸ್ನೇಹಿತರು ಹಾಗೂ ಸಂಬಂಧಿಕರ ಸಂಪರ್ಕದಲ್ಲಿರುವ ಉಪೇಂದ್ರ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಟ ಉಪೇಂದ್ರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧನ ಮಾಡುವ ಸಾಧ್ಯತೆ ಇದೆ. ೇಕೆಂದರೆ ಉಪೇಂದ್ರ ವಿರುದ್ಧ ಜಾಮೀನುರಹಿತ ಪ್ರಕರಣಗಳು ದಾಖಲಾಗಿವೆ. ಪೊಲೀಸರು ಕೂಡ ಸದ್ಯ ಉಪೇಂದ್ರ ಅವರನ್ನು ಹುಡುಕಾಟ ನಡೆಸುತ್ತಿದ್ದಾರೆ.  ಮೊಬೈಲ್ ಸ್ವಿಚ್ ಆಫ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ: ದಲಿತ ಸಮುದಾಯಕ್ಕೆ ಅವಮಾನ: ನಟ ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲು

ಪ್ರಕರಣ ಏನಿದು?

ಉಪೇಂದ್ರ ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಾ, ”ಊರು ಅಂದರೆ ಹೋಲಗೇರಿ ಇರುತ್ತೆ” ಎಂದು ಗಾದೆ ಮಾತನ್ನು ಉಲ್ಲೇಖಿಸಿ ಮಾತನಾಡಿದ್ದರು.

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ವಿರುದ್ಧ ಹರೀಶ್ ಕುಮಾರ್ ಎಂಬವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹರೀಶ್ ಕುಮಾರ್ ಅವರು, ಭಾರತೀಯ ದಂಡಸಂಹಿತೆಯ 505(1)(B)(C), 153a, 295, 295A, sc st prevention of atrocities act 1989 ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ಅವರು, ಫೇಸ್ ಬುಕ್ ಲೈವ್ ವಿಡಿಯೋ ವೇಳೆ ‘ಊರು ಅಂದ್ಮೇಲೆ ಹೊಲೆಗೇರಿ ಕೂಡ ಇರುತ್ತೆ’ ಎಂದು ಗಾದೆಯನ್ನು ಉಲ್ಲೇಖಿಸಿ ಮಾತನಾಡಿದ್ದರು. ಇದರ ಬೆನ್ನಲ್ಲೇ ಉಪೇಂದ್ರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬವರು ನೀಡಿದ್ದ ದೂರಿನ ಮೇರೆಗೆ ಮೊದಲ ಎಫ್ಐಆರ್ ದಾಖಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...