Homeಕರ್ನಾಟಕಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾ

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾ

- Advertisement -
- Advertisement -

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಡಾ. ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ (ಮೇ 31) ಆದೇಶ ಹೊರಡಿಸಿದೆ.

ಮಂಡಳಿಯ ಪ್ರಚಾರ ಜಾಹೀರಾತು ನೀಡುವಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪ ಶಾಂತ್ ಎ ತಿಮ್ಮಯ್ಯ ಅವರ ವಿರುದ್ಧ ಕೇಳಿ ಬಂದಿತ್ತು.

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಮಂಜೂರಾತಿಯಲ್ಲಿ ಪಾರದರ್ಶಕತೆ ಕಾಯ್ದೆ ಉಲ್ಲಂಘಿಸಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಕಡೆಗಣಿಸಿ ಖಾಸಗಿ ಜಾಹೀರಾತು ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿ ಶಾಂತ್‌ ತಿಮ್ಮಯ್ಯ ಸಾರ್ವಜನಿಕ ಹಣದ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿತ್ತು.

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹದೇವ ಅವರು ತನಿಖೆ ನಡೆಸಿ ಸಲ್ಲಿಸಿದ ವರದಿಯನ್ನು ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ. ಮಂಡಳಿಯ ಸದಸ್ಯ ಸ್ಥಾನದಿಂದಲೂ ಶಾಂತ್‌ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಲಾಗಿದೆ.

ಇವರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ, ಮುಂದಿನ ಆದೇಶದವರೆಗೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ.ಪಿ ರವಿ ಅವರನ್ನು ಅಧ್ಯಕ್ಷರನ್ನಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಾಮ ನಿರ್ದೇಶನ ಮಾಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್ ಪ್ರವೀಣ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಶಾಂತ್ ತಿಮ್ಮಯ್ಯ ಅವರ ಹುದ್ದೆಯ ಅವಧಿ 2022ರಲ್ಲೇ ಮುಗಿದಿದ್ದು, ಅವರನ್ನು ವಜಾ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ತನ್ನನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಶಾಂತ್ ತಿಮ್ಮಯ್ಯ ಅವರು ಇತ್ತೀಚೆಗೆ ಹೈಕೋರ್ಟ್‌ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ, ಸರ್ಕಾರದ ಅಧಿಸೂಚನೆಯನ್ನು ಅಮಾನತ್ತಿನಲ್ಲಿಟ್ಟು ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಸೆ.7ಕ್ಕೆ ಮುಂದೂಡಿತ್ತು.

ಇದನ್ನೂ ಓದಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...