ವಿರೋಧ ಪಕ್ಷಗಳು ತಮ್ಮ ಅಧಿಕಾರಾವಧಿಯಲ್ಲಿ ಈ ಕಾನೂನುಗಳನ್ನು ಜಾರಿಗೆ ತರಲು ಬಯಸಿದ್ದವು ಎಂದ ಬಿಜೆಪಿಯ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಶರದ್ ಪವಾರ್ ತಿರುಗೇಟು ನೀಡಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರಬೇಕು ಮತ್ತು ಎಪಿಎಂಸಿ ತಿದ್ದುಪಡಿ ಮಾಡಬೇಕು ಎಂದು ಅಂದಿನ ಕೃಷಿ ಸಚಿವರಾಗಿದ್ದ ಶರದ್ ಪವಾರ್ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್‌ಗೆ ಪತ್ರ ಬರೆದಿದ್ದರು ಎಂದು ಆಡಳಿತಾರೂಢ ಬಿಜೆಪಿ ನಿನ್ನೆ ಹೇಳಿತ್ತು.
ಇದನ್ನೂ ಓದಿ: ’ನನ್ನನ್ನು ಮತ್ತೊಮ್ಮೆ ಗೃಹಬಂಧನದಲ್ಲಿ ಇಡಲಾಗಿದೆ’: ಮೆಹಬೂಬಾ ಮುಫ್ತಿ
ಇದಕ್ಕೆ ಪ್ರತಿಕ್ರಿಯಿಸಿದ ಶರದ್ ಪವಾರ್, “ಎಪಿಎಂಸಿಗೆ ಕೆಲವು ಸುಧಾರಣೆಗಳು ಬೇಕು ಎಂದು ನಾನು ಹೇಳಿದ್ದೆ. ಎಪಿಎಂಸಿ ಕಾಯ್ದೆ ಮುಂದುವರಿಯಬೇಕು. ಆದರೆ ಸುಧಾರಣೆಯೂ ಆಗಬೇಕು ಎಂದು ಪತ್ರ ಬರೆದಿದ್ದೆ. ಇದರಲ್ಲಿ ಸಂದೇಹವಿಲ್ಲ. ಆದರೆ ಅವರ ಮೂರು ಕಾಯ್ದೆಗಳು ಎಪಿಎಂಸಿಯನ್ನೂ ಸಹ ಉಲ್ಲೇಖಿಸಿಲ್ಲ. ಅವರು ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ” ಎಂದು ಹೇಳಿದರು.
ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ನಾಳೆಗೆ ಭಾರತ್ ಬಂದ್‌ಗೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಈ ನಿಲುವನ್ನು ಖಂಡಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ರವಿಶಂಕರ್ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದರು.
ಎಪಿಎಂಸಿ ಕಾಯ್ದೆಯನ್ನು ಮರುತರುವುದಾಗಿ ಮತ್ತು ಯಾವುದೇ ಅಡೆತಡೆಯಿಲ್ಲದ ಅಂತರ್‌ರಾಜ್ಯ ವ್ಯಾಪಾರಕ್ಕೆ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಬರೆದಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಎಪಿಎಂಸಿ ಕಾಯ್ದೆ ಆರು ತಿಂಗಳಲ್ಲಿ ಕೊನೆಗೊಳ್ಳಲಿದೆ… ಕೇಂದ್ರ ಸರ್ಕಾರವು ಯೋಜನಾ ಆಯೋಗದ ಶಿಫಾರಸ್ಸಿನ ಮೇರೆ ಅಂತರ ರಾಜ್ಯ ಕೃಷಿ ವ್ಯಾಪಾರ ಕಾಯ್ದೆಯನ್ನು ಜಾರಿಗೆ ತರಬಹುದು ಎಂದು ಯುಪಿಎ ಸರ್ಕಾರದ ಅವಧಿಯಲ್ಲಿ ಶರದ್ ಪವಾರ್ ಹೇಳಿದ್ದರು. ಈ ಸುಧಾರಣೆಗಳನ್ನು ಒಪ್ಪಿಕೊಳ್ಳದಿದ್ದರೆ ಅನುದಾನ ನೀಡಲಾಗುವುದಿಲ್ಲ ಎಂದು ಅವರು ಹೇಳುತ್ತಿದ್ದಾಗ ಎಸ್‌ಪಿ, ಟಿಡಿಪಿ, ಎಡಪಂಥೀಯರೆಲ್ಲರೂ ಮನಮೋಹನ್ ಸರ್ಕಾರವನ್ನು ಬೆಂಬಲಿಸುತ್ತಿದ್ದರು. ಇದು ಇಮ್ಮ ದ್ವಿಮುಖ ನೀತಿ. ನೀವು ಯಾವ ಮಿತಿಗೂ ಹೋಗಲು ಸಿದ್ದರಿರುವರು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ
ಭಾನುವಾರದಿಂದ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಶಿರೋಮಣಿ ಅಕಾಲಿ ದಳ, ಎನ್.ಸಿ.ಪಿ, ಆರ್.ಜೆ.ಡಿ, ಡಿಎಂಕೆ, ಸಮಾಜವಾದಿ ಪಕ್ಷ, ಬಿಎಸ್‌ಪಿ ಸೇರಿ ಹಲವು ವಿರೋಧ ಪಕ್ಷಗಳು ರೈತರ ಭಾರತ್ ಬಂದ್‌ಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿವೆ. ಆದಾಗಿನಿಂದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ಮುಗಿಬಿದ್ದಿದೆ.
ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಕಳೆದ 13 ದಿನಗಳಿಂದ ಕೊರೆವ ಚಳಿಯಲ್ಲಿ ಹೋರಾಟ ನಡೆಸಿರುವ ರೈತರು ಕರೆ ನೀಡಿದ್ದ ಇಂದಿನ ಭಾರತ್ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಇದನ್ನೂ ಓದಿ: ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?


