Homeಮುಖಪುಟಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು. ಆಯೋಗ: ಸುಪ್ರೀಂ ಮೆಟ್ಟಿಲೇರಿದ ಶರದ್ ಪವಾರ್

ಅಜಿತ್ ಪವಾರ್ ಬಣವೇ ನಿಜವಾದ ಎನ್‌ಸಿಪಿ ಎಂದ ಚು. ಆಯೋಗ: ಸುಪ್ರೀಂ ಮೆಟ್ಟಿಲೇರಿದ ಶರದ್ ಪವಾರ್

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಣವನ್ನು ನಿಜವಾದ ಎನ್‌ಸಿಪಿ ಎಂದು ಗುರುತಿಸಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಹಿರಿಯ ನಾಯಕ ಶರದ್ ಪವಾರ್ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

ಸೋಮವಾರ ಸಂಜೆ ವಕೀಲ ಅಭಿಷೇಕ್ ಜೆಬರಾಜ್ ಮೂಲಕ ಪವಾರ್ ಅಜಿತ್ ಪವಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಈಗಾಗಲೇ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿರುವ ಅಜಿತ್ ಪವಾರ್ ಬಣ, ವಕೀಲ ಅಭಿಕಲ್ಪ್ ಪ್ರತಾಪ್ ಸಿಂಗ್ ಮೂಲಕ ಕೇವಿಯಟ್ ಸಲ್ಲಿಸಿದ್ದು, ಶರದ್ ಪವಾರ್ ಬಣ ಈ ಸಂಬಂಧ ಯಾವುದೇ ಅರ್ಜಿ ಸಲ್ಲಿಸಿದರೂ, ಅದಕ್ಕೂ ಮುನ್ನ ನಮ್ಮ ವಾದ ಆಲಿಸುವಂತೆ ಕೋರಿದೆ.

ಫೆಬ್ರವರಿ 6ರಂದು, ಚುನಾವಣಾ ಆಯೋಗವು ಅಜಿತ್ ಪವಾರ್ ಬಣ ನಿಜವಾದ ಎನ್‌ಸಿಪಿ ಎಂದು ಘೋಷಿಸಿದೆ. ಇದರಿಂದ ಪಕ್ಷದ ಸಂಸ್ಥಾಪಕ ಶರದ್ ಪವಾರ್‌ಗೆ ದೊಡ್ಡ ಹಿನ್ನಡೆಯಾಗಿದೆ. ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಗುಂಪಿಗೆ ಎನ್‌ಸಿಪಿ ಚಿಹ್ನೆಯಾದ ‘ಗಡಿಯಾರ’ವನ್ನು ಸಹ ನೀಡಿದೆ.

ಜುಲೈ 2023ರಲ್ಲಿ ಎನ್‌ಸಿಪಿ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪಕ್ಷದ ಉನ್ನತ ನಾಯಕ ಶರದ್ ಪವಾರ್ ವಿರುದ್ದ ಬಂಡೆದ್ದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಬಣಕ್ಕೆ ಬೆಂಬಲ ಸೂಚಿಸಿದ್ದರು. ಈ ಮೂಲಕ ಅವರಿಗೆ ಶಿಂದೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಮತ್ತು ಕೆಲ ಶಾಸಕರಿಗೆ ಸಚಿವ ಸ್ಥಾನ ದೊರೆತಿತ್ತು.

ಶರದ್ ಪವಾರ್ ಅವರು 1999ರಲ್ಲಿ ಎನ್‌ಸಿಪಿ ಪಕ್ಷವನ್ನು ಸ್ಥಾಪಿಸಿದ್ದರು. ಫೆ.6,2024 ಅವರು ತಮ್ಮ ಪಕ್ಷದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...