HomeUncategorizedಬಿಜೆಪಿ-ಎನ್‌ಸಿಪಿ ಮೈತ್ರಿ: ಇದರಲ್ಲಿ ನನ್ನ ಪಾತ್ರವಿಲ್ಲ ಎಂದ ಶರದ್ ಪವಾರ್‌

ಬಿಜೆಪಿ-ಎನ್‌ಸಿಪಿ ಮೈತ್ರಿ: ಇದರಲ್ಲಿ ನನ್ನ ಪಾತ್ರವಿಲ್ಲ ಎಂದ ಶರದ್ ಪವಾರ್‌

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಎನ್ ಸಿಪಿ ಮೈತ್ರಿ ಸರ್ಕಾರ ಜಾರಿಗೆ ಬಂದಿದೆ. ‘ಮಹಾ’ ರಾಜಕೀಯಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಬಿಜೆಪಿ ಬಿಗ್ ಶಾಕ್ ನೀಡಿದೆ.

ಹಾಗಾದ್ರೆ ಬಿಜೆಪಿಗೆ ಬೆಂಬಲ ಸೂಚಿಸಿ, ಅಜಿತ್ ಪವಾರ್ ಡಿಸಿಎಂ ಹುದ್ದೆಗೇರಲು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕಾರಣನಾ..? ಒಂದು ಮೂಲದ ಮಾಹಿತಿ ಪ್ರಕಾರ ಶರದ್ ಪವಾರ್, ಬಿಜೆಪಿಗೆ ಬೆಂಬಲ ಸೂಚಿಸಲು ಒಪ್ಪಿದ್ದರಿಂದಲೇ ಅಜಿತ್ ಪವಾರ್  ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಹಾಗಾದ್ರೆ ಎನ್ ಸಿಪಿಯನ್ನು ಒಡೆದು, ಅಜಿತ್ ಪವಾರ್ ಡಿಸಿಎಂ ಹುದ್ದೆಗೇರಿದರಾ ಎಂಬ ಸುದ್ದಿ ಹರಿದಾಡ್ತಿದೆ.

ಇತ್ತ ಶರದ್ ಪವಾರ್ ಇದ್ಯಾವುದರಲ್ಲೂ ತಮ್ಮ ಪಾಲು ಇಲ್ಲ. ಇದೆಲ್ಲಾ ಅಜಿತ್ ಪವಾರ್ ತೆಗೆದುಕೊಂಡಿರುವ ನಿರ್ಧಾರ ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಜತೆ ಸೇರಿಕೊಂಡು ಸರ್ಕಾರ ರಚಿಸುವ ನಿರ್ಧಾರ ತೆಗೆದುಕೊಂಡಿರುವುದು ಅಜಿತ್ ಪವಾರ್. ಇದನ್ನು ಎನ್ ಸಿಪಿ ಅನುಮೋದಿಸುವುದಿಲ್ಲ ಎಂದು ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.

ಇತ್ತ ಮತ್ತೊಂದು ಅವಧಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಮಾತನಾಡಿ, ಎನ್‌ಸಿಪಿಯ ಅಜಿತ್ ಪವಾರ್ ಗೆ ಧನ್ಯವಾದ ತಿಳಿಸಿದ್ದಾರೆ. ಅಜಿತ್ ಪವಾರ್ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚನೆಗೆ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಕೆಲವು ನಾಯಕರು ನಮ್ಮೊಂದಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮಹಾ’ ರಾಜಕೀಯದಲ್ಲಿ ಸ್ಫೋಟಕ ತಿರುವು: ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ

ಇತ್ತ ಬಿಜೆಪಿ ಅಧಿಕಾರಕ್ಕೇರುತ್ತಿದ್ದಂತೆ ಬಿಜೆಪಿ ಸಂಭ್ರಮಾಚರಣೆ ನಡೆಸಿತು. ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಇನ್ನು ಶುಕ್ರವಾರ ಸಂಜೆಯಷ್ಟೇ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಮಹತ್ವದ ಸಭೆ ನಡೆಸಿದ್ದವು. ಉನ್ನತ ನಾಯಕರ ಮಟ್ಟದಲ್ಲಿ ನಡೆದ ಸಭೆಯಲ್ಲಿ ಮೂರು ಪಕ್ಷಗಳ ನಾಯಕರು ಭಾಗಿಯಾಗಿದ್ದರು. ಶಿವಸೇನೆ ನೇತೃತ್ವದಲ್ಲಿ ಸರ್ಕಾರ ಜಾರಿಯಾಗಲಿದ್ದು, ಉದ್ಧವ್ ಠಾಕ್ರೆ ಅವರು ಸಿಎಂ ಆಗಲಿದ್ದಾರೆ ಎಂದೇ ಹೇಳಲಾಗಿತ್ತು. ಈ ಸಭೆಯಲ್ಲಿ ಅಜಿತ್ ಪವಾರ್ ಕೂಡ ಹಾಜರಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಗದ್ದುಗೆ ಹಿಡಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....