ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಎನ್ ಸಿಪಿ ಮೈತ್ರಿ ಸರ್ಕಾರ ಜಾರಿಗೆ ಬಂದಿದೆ. ‘ಮಹಾ’ ರಾಜಕೀಯಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಶಿವಸೇನೆಗೆ ಬಿಜೆಪಿ ಬಿಗ್ ಶಾಕ್ ನೀಡಿದೆ.
Hon Governor Bhagat Singh Koshyari administered the oath of Chief Minister of Maharashtra to Shri Devendra Fadnavis and Deputy CM to Shri Ajit Pawar. pic.twitter.com/88AXf9EYV3
— CMO Maharashtra (@CMOMaharashtra) November 23, 2019
ಹಾಗಾದ್ರೆ ಬಿಜೆಪಿಗೆ ಬೆಂಬಲ ಸೂಚಿಸಿ, ಅಜಿತ್ ಪವಾರ್ ಡಿಸಿಎಂ ಹುದ್ದೆಗೇರಲು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕಾರಣನಾ..? ಒಂದು ಮೂಲದ ಮಾಹಿತಿ ಪ್ರಕಾರ ಶರದ್ ಪವಾರ್, ಬಿಜೆಪಿಗೆ ಬೆಂಬಲ ಸೂಚಿಸಲು ಒಪ್ಪಿದ್ದರಿಂದಲೇ ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. ಹಾಗಾದ್ರೆ ಎನ್ ಸಿಪಿಯನ್ನು ಒಡೆದು, ಅಜಿತ್ ಪವಾರ್ ಡಿಸಿಎಂ ಹುದ್ದೆಗೇರಿದರಾ ಎಂಬ ಸುದ್ದಿ ಹರಿದಾಡ್ತಿದೆ.
Ajit Pawar's decision to support the BJP to form the Maharashtra Government is his personal decision and not that of the Nationalist Congress Party (NCP).
We place on record that we do not support or endorse this decision of his.— Sharad Pawar (@PawarSpeaks) November 23, 2019
ಇತ್ತ ಶರದ್ ಪವಾರ್ ಇದ್ಯಾವುದರಲ್ಲೂ ತಮ್ಮ ಪಾಲು ಇಲ್ಲ. ಇದೆಲ್ಲಾ ಅಜಿತ್ ಪವಾರ್ ತೆಗೆದುಕೊಂಡಿರುವ ನಿರ್ಧಾರ ಎಂದು ಟ್ವೀಟ್ ಮಾಡಿದ್ದಾರೆ. ಬಿಜೆಪಿ ಜತೆ ಸೇರಿಕೊಂಡು ಸರ್ಕಾರ ರಚಿಸುವ ನಿರ್ಧಾರ ತೆಗೆದುಕೊಂಡಿರುವುದು ಅಜಿತ್ ಪವಾರ್. ಇದನ್ನು ಎನ್ ಸಿಪಿ ಅನುಮೋದಿಸುವುದಿಲ್ಲ ಎಂದು ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ.
Maharashtra Chief Minister, Devendra Fadnavis: I would like to express my gratitude to NCP's Ajit Pawar ji, he took this decision to give a stable government to Maharashtra & come together with BJP. Some other leaders also came with us and we staked claim to form government. pic.twitter.com/eq1v9syg8z
— ANI (@ANI) November 23, 2019
ಇತ್ತ ಮತ್ತೊಂದು ಅವಧಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವೀಸ್ ಮಾತನಾಡಿ, ಎನ್‌ಸಿಪಿಯ ಅಜಿತ್ ಪವಾರ್ ಗೆ ಧನ್ಯವಾದ ತಿಳಿಸಿದ್ದಾರೆ. ಅಜಿತ್ ಪವಾರ್ ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ರಚನೆಗೆ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಕೆಲವು ನಾಯಕರು ನಮ್ಮೊಂದಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ‘ಮಹಾ’ ರಾಜಕೀಯದಲ್ಲಿ ಸ್ಫೋಟಕ ತಿರುವು: ಬಿಜೆಪಿಯ ದೇವೇಂದ್ರ ಫಡ್ನವೀಸ್ ಸಿಎಂ ಆಗಿ ಪ್ರಮಾಣ
Nagpur: Bharatiya Janata Party (BJP) workers celebrate after Devendra Fadnavis takes oath as Maharashtra Chief Minister, again. pic.twitter.com/t1ab9j4USH
— ANI (@ANI) November 23, 2019
ಇತ್ತ ಬಿಜೆಪಿ ಅಧಿಕಾರಕ್ಕೇರುತ್ತಿದ್ದಂತೆ ಬಿಜೆಪಿ ಸಂಭ್ರಮಾಚರಣೆ ನಡೆಸಿತು. ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇನ್ನು ಶುಕ್ರವಾರ ಸಂಜೆಯಷ್ಟೇ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಮಹತ್ವದ ಸಭೆ ನಡೆಸಿದ್ದವು. ಉನ್ನತ ನಾಯಕರ ಮಟ್ಟದಲ್ಲಿ ನಡೆದ ಸಭೆಯಲ್ಲಿ ಮೂರು ಪಕ್ಷಗಳ ನಾಯಕರು ಭಾಗಿಯಾಗಿದ್ದರು. ಶಿವಸೇನೆ ನೇತೃತ್ವದಲ್ಲಿ ಸರ್ಕಾರ ಜಾರಿಯಾಗಲಿದ್ದು, ಉದ್ಧವ್ ಠಾಕ್ರೆ ಅವರು ಸಿಎಂ ಆಗಲಿದ್ದಾರೆ ಎಂದೇ ಹೇಳಲಾಗಿತ್ತು. ಈ ಸಭೆಯಲ್ಲಿ ಅಜಿತ್ ಪವಾರ್ ಕೂಡ ಹಾಜರಿದ್ದರು. ಆದರೆ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಗದ್ದುಗೆ ಹಿಡಿದಿದೆ.


