Homeಮುಖಪುಟಶರದ್ ಪವಾರ್ ಮತ್ತು ಅಮಿತ್ ಶಾ ನಡುವೆ ಯಾವುದೇ ರಹಸ್ಯ ಸಭೆ ನಡೆದಿಲ್ಲ- ಸಂಜಯ್ ರಾವತ್

ಶರದ್ ಪವಾರ್ ಮತ್ತು ಅಮಿತ್ ಶಾ ನಡುವೆ ಯಾವುದೇ ರಹಸ್ಯ ಸಭೆ ನಡೆದಿಲ್ಲ- ಸಂಜಯ್ ರಾವತ್

- Advertisement -
- Advertisement -

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ಮುಖ್ಯಸ್ಥ ಶರದ್ ಪವಾರ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್‌ನಲ್ಲಿ ರಹಸ್ಯವಾಗಿ ಭೇಟಿಯಾಗಿದ್ದರು ಎಂಬ ವದಂತಿಗಳನ್ನು ಕೊನೆಗೊಳಿಸಬೇಕೆಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

ಶರದ್ ಪವಾರ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಪ್ರಫುಲ್ ಪಟೇಲ್ ಅವರು ಕೇಂದ್ರ ಗೃಹ ಸಚಿವರನ್ನು ಅಹಮದಾಬಾದ್‌ನ ತೋಟದ ಮನೆಯೊಂದರಲ್ಲಿ ಶನಿವಾರ ಭೇಟಿಯಾಗಿದ್ದರು ಎಂದು ಗುಜರಾತ್‌ನ ಸ್ಥಳೀಯ ಸುದ್ದಿ ಮಾಧ್ಯಮ ವರದಿ ಮಾಡಿದ್ದವು.

ವರದಿ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ ಎಂದು ಚರ್ಚೆಗೆ ಗ್ರಾಸವಾಗಿತ್ತು. ಈ ವದಂತಿಗೆ ಅಂತ್ಯ ಹಾಡಿರುವ ಶಿವಸೇನ ಮುಖಂಡ ಸಂಜಯ್ ರಾವತ್, ಶರದ್ ಪವಾರ್ ಮತ್ತು ಅಮಿತ್ ಶಾ ನಡುವೆ ಯಾವುದೇ ರಹಸ್ಯ ಸಭೆ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಕಂಗನಾ ಭೇಟಿಗೆ ರಾಜ್ಯಪಾಲರಿಗೆ ಸಮಯವಿದೆ, ರೈತರ ಭೇಟಿಗಿಲ್ಲ: ಶರದ್ ಪವಾರ್ ಟೀಕೆ

“ಕೆಲವು ವಿಷಯಗಳು ಸಮಯದೊಂದಿಗೆ ಸ್ಪಷ್ಟವಾಗಬೇಕು, ಇಲ್ಲದಿದ್ದರೆ ಗೊಂದಲ ಸೃಷ್ಟಿಯಾಗುತ್ತದೆ. ಅಹಮದಾಬಾದ್‌ನಲ್ಲಿ ಅಥವಾ ಎಲ್ಲಿಯೂ ಶರದ್ ಪವಾರ್ ಮತ್ತು ಅಮಿತ್ ಶಾ ನಡುವೆ ಯಾವುದೇ ರಹಸ್ಯ ಸಭೆ ನಡೆದಿಲ್ಲ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ಈಗ ಈ ವದಂತಿಗಳಿಗೆ ಅಂತ್ಯ ಹಾಡಿ. ಇದರಿಂದ ಯಾವುದೇ ಉಪಯೋಗವಿಲ್ಲ” ಎಂದು ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.

ಆದರೆ, ಭಾನುವಾರ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಅಮಿತ್ ಶಾ, ‘ಎಲ್ಲವನ್ನೂ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದ್ದರು.

“ಶರದ್ ಪವಾರ್ ಮತ್ತು ಅಮಿತ್ ಶಾ ನಡುವಿನ ಭೇಟಿ ವದಂತಿಯ ಬಗ್ಗೆ ಆಶ್ಚರ್ಯ ಮೂಡಿಸಲು ಏನೂ ಇಲ್ಲ. ವಾಸ್ತವವಾಗಿ, ವಿರೋಧ ಪಕ್ಷದ (ಪ್ರತಿಸ್ಪರ್ಧಿ) ಪಕ್ಷಗಳ ನಾಯಕರ ನಡುವಿನ ಸಂಭಾಷಣೆ ಒಳ್ಳೆಯದು. ಅಹಮದಾಬಾದ್‌ನಲ್ಲಿ ಅವರು ನಿಜವಾಗಿಯೂ ಒಬ್ಬರನ್ನೊಬ್ಬರು ಭೇಟಿಯಾಗಿದ್ದರೇ ನಾನು ಇದನ್ನೇ ಹೇಳುತ್ತಿದ್ದೆ”ಎಂದು ಶಿವಸೇನಾ ಸಂಸದ ಹೇಳಿದ್ದಾರೆ.

ಇಬ್ಬರು ಅನುಭವಿ ನಾಯಕರು ರಹಸ್ಯವಾಗಿ ಭೇಟಿಯಾದರೂ, ಅದರ ಬಗ್ಗೆ ಸುದ್ದಿ ಹೇಗೆ ಸಾರ್ವಜನಿಕರಲ್ಲಿ ಹರಡಿತು ಎಂಬುದರ ಕುರಿತು ಸಂಜಯ್ ರಾವತ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...