ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಪಿತ್ತಕೋಶದ ಸಮಸ್ಯೆ ಕಾಡುತ್ತಿದ್ದು, ಮುಂಬೈನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರದ ಸಚಿವರೊಬ್ಬರು ಸೋಮವಾರ ತಿಳಿಸಿದ್ದಾರೆ.

“ನಮ್ಮ ಪಕ್ಷದ ಅಧ್ಯಕ್ಷ ಶರದ್ ಪವಾರ್‌ ಅವರಿಗೆ ನಿನ್ನೆ ಸಂಜೆ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ತಪಾಸಣೆಗಾಗಿ ಮುಂಬೈನ ಕ್ಯಾಂಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರನ್ನು ಪರೀಕ್ಷಿಸಲಾಗಿದ್ದು, ಪಿತ್ತಕೋಶದಲ್ಲಿ ಸಮಸ್ಯೆ ಇದೆ ಎಂದು ತಿಳಿದುಬಂದಿದೆ” ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಟ್ವೀಟ್ ಮಾಡಿದ್ದಾರೆ.

“ಅವರನ್ನು ಮಾರ್ಚ್ 31, 20 ರಂದು ಆಸ್ಪತ್ರೆಗೆ ದಾಖಲಿಸಲಾಗುವುದು. ಅಲ್ಲಿ ಅವರು ಎಂಡೋಸ್ಕೋಪಿ ಮತ್ತು ಶಸ್ತ್ರಚಿಕಿತ್ಸೆಗೆ ಒಳಪಡಲಿದ್ದಾರೆ. ಆದ್ದರಿಂದ ಮುಂದಿನ ಸೂಚನೆ ಬರುವವರೆಗೂ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗುತ್ತವೆ” ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಣ್ಣೀರು ಸುರಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ

80 ವರ್ಷದ ಶರದ್ ಪವಾರ್‌‌ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಅಹಮದಾಬಾದ್‌ನ ಉನ್ನತ ಕೈಗಾರಿಕೋದ್ಯಮಿ ನಿವಾಸದಲ್ಲಿ ಶನಿವಾರ ಭೇಟಿಯಾದರು ಎಂಬ ಊಹಾಪೋಹಗಳ ಮಧ್ಯೆ ಈ ಬೆಳವಣಿಗೆ ಕಂಡುಬಂದಿದೆ.

ನವದೆಹಲಿಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಭೇಟಿಯ ಬಗ್ಗೆ ಅಮಿತ್‌ ಶಾ ಅವರನ್ನು ಪ್ರಶ್ನಿಸಿದಾಗ, ಎಲ್ಲವನ್ನೂ ಸಾರ್ವಜನಿಕವಾಗಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ಹೇಳಿ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದರು.

ಶಿವಸೇನೆ ಮತ್ತು ಕಾಂಗ್ರೆಸ್‌‌ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿರುವ ಎನ್‌ಸಿಪಿಯ ನಾಯಕ ಮಲಿಕ್, ಅಂತಹ ಯಾವುದೇ ಸಭೆ ನಡೆದಿಲ್ಲ ಎಂದು ಹೇಳಿದ್ದು, ಇಂತಹ ವದಂತಿಗಳನ್ನು ಹರಡುವ ಮೂಲಕ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮಾನವೀಯ ಘಟನೆ: ಅತ್ಯಾಚಾರ ಸಂತ್ರಸ್ತೆ ಮತ್ತು ಆರೋಪಿಯನ್ನು ಒಟ್ಟಿಗೇ ಕಟ್ಟಿ ಬೀದಿಯಲ್ಲಿ ಮೆರವಣಿಗೆ!

LEAVE A REPLY

Please enter your comment!
Please enter your name here