Homeಮುಖಪುಟಎನ್‌ಸಿಪಿ ಶಾಸಕರಿಗೆ ವಿಪ್ ಜಾರಿ ಮಾಡಿದ ಶರದ್ ಪವಾರ್

ಎನ್‌ಸಿಪಿ ಶಾಸಕರಿಗೆ ವಿಪ್ ಜಾರಿ ಮಾಡಿದ ಶರದ್ ಪವಾರ್

- Advertisement -
- Advertisement -

ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್‌ ನೇತೃತ್ವದ ಬಣವು ಮುಂಬೈನಲ್ಲಿ ಬುಧವಾರ ನಡೆಯಲಿರುವ ಪ್ರಮುಖ ಸಭೆಗೆ ಹಾಜರಾಗುವಂತೆ ಪಕ್ಷದ ಎಲ್ಲ ಶಾಸಕರಿಗೆ ವಿಪ್‌ ಜಾರಿ ಮಾಡಿದೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಗುಂಪು ಇಂದೇ ಪಕ್ಷದ ಶಾಸಕರ ಪ್ರತ್ಯೇಕ ಸಭೆಯನ್ನು ಕರೆದಿದೆ.

ಅಜಿತ್ ಪವಾರ್ ಬಣವು ಬಾಂದ್ರಾದಲ್ಲಿ ಬೆಳಿಗ್ಗೆ 11 ಗಂಟೆಗೆ ಮತ್ತು ಶರದ್‌ ಪವಾರ್‌ ನೇತೃತ್ವದ ಬಣವು ಮಧ್ಯಾಹ್ನ 1 ಗಂಟೆಗೆ ವೈ.ಬಿ.ಚವಾಣ್ ಸಭಾಂಗಣದಲ್ಲಿ ಸಭೆ ಕರೆದಿದೆ.

ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಯ ಮುಖ್ಯ ಸಚೇತಕ ಜಿತೇಂದ್ರ ಅನ್ಸಾದ್ ಅವರು ಶಾಸಕರು ಕಡ್ಡಾಯವಾಗಿ ಸಭೆಯಲ್ಲಿ ಭಾಗಿಯಾಗುವಂತೆ ವಿಪ್ ಜಾರಿ ಮಾಡಿದ್ದಾರೆ.

ಎನ್‌ಸಿಪಿಯ ಉಭಯ ಬಣಗಳಿಂದ ಪ್ರತ್ಯೇಕ ಸಭೆಗೆ ವೇದಿಕೆ ಸಜ್ಜಾಗಿರುವಂತೆಯೇ ಪಕ್ಷದ ಮೇಲೆ ಹಕ್ಕು ಸ್ಥಾಪಿಸುವ ಕಸರತ್ತು ಎರಡೂ ಬಣಗಳಲ್ಲಿ ತೀವ್ರಗೊಂಡಿದೆ.

ಅಜಿತ್ ಪವಾರ್ ಅವರು ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಇತರ ಎಂಟು ಶಾಸಕರೊಂದಿಗೆ ಭಾನುವಾರ ಸೇರ್ಪಡೆಯಾದ ನಂತರ ಶರದ್ ಪವಾರ್ ಅವರು ಅವ್ಹಾದ್ ಅವರನ್ನು ಮುಖ್ಯ ಸಚೇತಕರಾಗಿ ನೇಮಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...