Homeಮುಖಪುಟ'ದ್ವೇಷಪೂರಿತ' ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

‘ದ್ವೇಷಪೂರಿತ’ ವೀಡಿಯೋ ಹಂಚಿಕೆ: 9 ಜನರ ಮೇಲೆ ಕೇಸ್ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸ್!

- Advertisement -
- Advertisement -

ಕಾಶ್ಮೀರ ಕಣಿವೆಯ ಗಂದರ್ಬಾಲ್, ಬುದ್ಗಾಮ್, ಬಾರಾಮುಲ್ಲಾ ಮತ್ತು ಅನಂತ್‌ನಾಗ್ ಜಿಲ್ಲೆಗಳಲ್ಲಿ ಸಾಮಾಜಿಕ ಮಾಧ್ಯಮಗಳ ಮೂಲಕ ದ್ವೇಷ ಹರಡುವ ವೀಡಿಯೊಗಳನ್ನು ಹಂಚಿಕೊಂಡಿದ್ದಕ್ಕಾಗಿ ಒಂಬತ್ತು ಜನರ ವಿರುದ್ಧ ದಾಖಲಿಸಿದ ಜಮ್ಮು-ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವದಂತಿಗಳನ್ನು ಹರಡಲು ಸಾಮಾಜಿಕ ಮಾಧ್ಯಮ ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಬುದ್ಗಾಮ್‌ನಲ್ಲಿ ಇಬ್ಬರ ವಿರುದ್ಧ, ಅನಂತನಾಗ್‌ನಲ್ಲಿ ಮೂವರ ವಿರುದ್ಧ ಜಾಲತಾಣದಗಳಲ್ಲಿ ಪ್ರಚೋದನೆ-ವದಂತಿ ಹಬ್ಬಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದ್ವೇಷಪೂರಿತ ವೀಡಿಯೊಗಳನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಬಾರಾಮುಲ್ಲಾದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ವಿಡಿಯೋದಲ್ಲಿ ಪ್ರಚೋದನಕಾರಿ ಮತ್ತು ದೇಶದ್ರೋಹದ ಹೇಳಿಕೆಗಳಿವೆ. ಜೊತೆಗೆ, ಗಂದರ್ಬಾಲ್‌ನಲ್ಲಿ ದ್ವೇಷಪೂರಿತ ವಿಷಯವನ್ನು ಅಪ್ಲೋಡ್ ಮತ್ತು ಹಂಚಿಕೊಂಡಿದ್ದಕ್ಕಾಗಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ,
ದ್ವೇಷಪೂರಿತ ಮತ್ತು ದೇಶದ್ರೋಹದ ಹೇಳಿಕೆಗಳನ್ನು ನೀಡಿದ ದ್ವೇಷಪೂರಿತ ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಸಲ್ಮಾನ್ ಮುಷ್ತಾಕ್ ಕುಟ್ಟೇ, ರಮೀಜ್ ಅಶ್ರಫ್ ಹಾದಿ ಮತ್ತು ಉಮರ್ ಫಾರೂಕ್ ಗನಿ ಎಂಬ ಮೂವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅನಂತನಾಗ್ ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ವಿಷಯವನ್ನು ಅಪ್ಲೋಡ್ ಮಾಡಿದ್ದಕ್ಕಾಗಿ ಅವಂತಿಪೋರಾದಲ್ಲಿಯೂ ವ್ಯಕ್ತಿಯೋರ್ವನನ್ನು ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‘144 ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಡಿಯಲ್ಲಿ ನಾವು ಇಂತಹ ಚಟುವಟಿಕೆಗಳ ಮೇಳೆ ಕಣ್ಣಿಟ್ಟಿದ್ದೇವೆ. ಕೋಮು ಸೂಕ್ಷ್ಮತೆಗೆ ಹಾನಿಯುಂಟುಮಾಡುವ ಅಥವಾ ಯಾರಿಗಾದರೂ ಬೆದರಿಕೆ ಹಾಕುವ ಪ್ರಚೋದನಾಕಾರಿ ಸಂದೇಶ, ವಿಡಿಯೋ, ಫೋಟೋ, ಆಡಿಯೋ ಹಂಚಿಕೊಳ್ಳುವುದು ಅಪರಾಧವಾಗುತ್ತದೆ. ಯಾರೂ ಕೂಡಾ ಅಂತಹ ವಿಷಯಗಳನ್ನು ಫಾರ್ವರ್ಡ್ ಮಾಡಲು ಸಾಧ್ಯವಿಲ್ಲ’ ಎಂದು ಜಮ್ಮು-ಕಾಶ್ಮೀರ ಡಿಜಿಪಿ ಹೇಳಿದ್ದಾರೆ.

‘ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷಪೂರಿತ ವಿಷಯವನ್ನು ಹರಡುವ ವ್ಯಕ್ತಿಗಳ ಕುರಿತು ಜಾಗರೂಕರಾಗಿರಬೇಕು ಎಂದು ನಾವು ಸಾರ್ವಜನಿಕರನ್ನು ಒತ್ತಾಯಿಸುತ್ತೇವೆ. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಯಾರಾದರೂ ಕಂಡುಬಂದರೆ ಕಾನೂನಿನ ಪ್ರಕಾರ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಕೋಮು ಉನ್ಮಾದವನ್ನು ಪ್ರಚೋದಿಸುವ, ಶಾಂತಿ ಕದಡುವ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದವನ್ನು ಉತ್ತೇಜಿಸುವಂತಹ ವೀಡಿಯೊಗಳನ್ನು ಹಂಚಿಕೊಳ್ಳುವುದು, ಸಾಮಾಜಿಕ ಮಾಧ್ಯಮಗಳಲ್ಲಿ ಪಠ್ಯಗಳು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುವ ಜನರ ವಿರುದ್ಧ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರಕರಣ ದಾಖಲಿಸಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ; ರಜಪೂತ ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ: ಮೂವರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...