Homeಮುಖಪುಟ‘ಅವರಿಂದ ಪಡೆದ ಪ್ರೀತಿಯನ್ನು ದೇಶದೊಂದಿಗೆ ಹಂಚಿಕೊಳ್ಳುತ್ತಿದ್ದೇನೆ’: ತಾಯಿಯ ಕುರಿತು ರಾಹುಲ್‌ ಟ್ವೀಟ್

‘ಅವರಿಂದ ಪಡೆದ ಪ್ರೀತಿಯನ್ನು ದೇಶದೊಂದಿಗೆ ಹಂಚಿಕೊಳ್ಳುತ್ತಿದ್ದೇನೆ’: ತಾಯಿಯ ಕುರಿತು ರಾಹುಲ್‌ ಟ್ವೀಟ್

- Advertisement -
- Advertisement -

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡು ರಾಹುಲ್ ಗಾಂಧಿ ಅವರೊಂದಿಗೆ ಸ್ವಲ್ಪ ದೂರ ಹೆಜ್ಜೆ ಹಾಕಿದ್ದು, ತಮ್ಮ ತಾಯಿಯ ಕುರಿತು ರಾಹುಲ್‌ ಭಾವನಾತ್ಮಕವಾದ ಪೋಸ್ಟ್ ಹಂಚಿಕೊಂಡಿದ್ದಾರೆ.

ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, “ನಾನು ಅವರಿಂದ ಪಡೆದ ಪ್ರೀತಿಯನ್ನು ದೇಶದೊಂದಿಗೆ ಹಂಚಿಕೊಳ್ಳುತ್ತಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

ಕನ್ಯಾಕುಮಾರಿಯಿಂದ ಸೆಪ್ಟೆಂಬರ್‌ನಲ್ಲಿ ಆರಂಭವಾದ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿಯವರು ಎರಡನೇ ಬಾರಿಗೆ ಪಾಲ್ಗೊಂಡಿದ್ದಾರೆ. ಈ ಹಿಂದೆ ಅಕ್ಟೋಬರ್‌ನಲ್ಲಿ ಕರ್ನಾಟಕದಲ್ಲಿದ್ದಾಗ ಅವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಸೋನಿಯಾ ಗಾಂಧಿ ಅವರು ಮುಖಕ್ಕೆ ಮಾಸ್ಕ್ ಧರಿಸಿ, ತಮ್ಮ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಕೆಲವು ನಿಮಿಷಗಳ ಕಾಲ ಹೆಜ್ಜೆ ಹಾಕಿದರು. ಯಾತ್ರೆಯು ದೆಹಲಿ ಆಶ್ರಮ ಚೌಕ್‌ನಲ್ಲಿ ಬೆಳಿಗ್ಗೆ ವಿರಾಮ ಪಡೆಯಿತು.

ಶನಿವಾರ ಬೆಳಗ್ಗೆ ಹರಿಯಾಣದಿಂದ ದೆಹಲಿ ಪ್ರವೇಶಿಸಿದ ಯಾತ್ರೆಗೆ ಬಾದರ್‌ಪುರ ಗಡಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆತ್ಮೀಯ ಸ್ವಾಗತ ಕೋರಿದರು.

ಭಾರತ್ ಜೋಡೋ ಯಾತ್ರೆಯು ಸಂಜೆ 4:30ರ ಸುಮಾರಿಗೆ ಕೆಂಪು ಕೋಟೆಯನ್ನು ತಲುಪಲಿದೆ. ಯಾತ್ರೆಯು ರಾಜ್‌ಘಾಟ್‌ಗೆ ಭೇಟಿ ತಲುಪಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಲಿದೆ.

“ದೆಹಲಿ ಘಟಕದ ಮುಖ್ಯಸ್ಥ ಅನಿಲ್ ಚೌಧರಿ ನೇತೃತ್ವದಲ್ಲಿ ದೆಹಲಿ ಕಾಂಗ್ರೆಸ್‌ನ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು, ರಾಹುಲ್ ಗಾಂಧಿ ಮತ್ತು ಇತರ ಯಾತ್ರಿಗಳನ್ನು ಬಾದರ್‌ಪುರದ ಗಡಿಯಲ್ಲಿ ಸ್ವಾಗತಿಸಿದರು” ಎಂದು ಪಿಟಿಐ ವರದಿ ಮಾಡಿದೆ.

ಟ್ವಿಟರ್‌ ಖಾತೆಯಲ್ಲಿ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು, “ಹಣದುಬ್ಬರ, ನಿರುದ್ಯೋಗ ಮತ್ತು ದ್ವೇಷವನ್ನು ತೊಡೆದುಹಾಕಿ. ಭಾರತದ ಈ ಧ್ವನಿಯನ್ನು ಹೊತ್ತುಕೊಂಡು ನಾವು ‘ರಾಜ’ನ ಗದ್ದುಗೆ ಇರುವಲ್ಲಿಗೆ ಬಂದಿದ್ದೇವೆ, ನಾವು ದೆಹಲಿಗೆ ಬಂದಿದ್ದೇವೆ, ರಾಜಧಾನಿಗೆ ಬನ್ನಿ ನಮ್ಮೊಂದಿಗೆ ಸೇರಿಕೊಳ್ಳಿ” ಎಂದು ಮನವಿ ಮಾಡಿದೆ.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ಇದುವರೆಗೆ ಒಂಬತ್ತು ರಾಜ್ಯಗಳಲ್ಲಿ ಸಂಚರಿಸಿದ್ದು, ಜನವರಿ ಅಂತ್ಯದ ವೇಳೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳಲಿದೆ.

ಮೆರವಣಿಗೆಯು ರಾಷ್ಟ್ರ ರಾಜಧಾನಿಯ ಮೂಲಕ ಸಾಗುತ್ತಿದ್ದಂತೆ ದೆಹಲಿಯ ಕೆಲವು ಭಾಗಗಳಿಂದ ಸಂಚಾರ ದಟ್ಟಣೆ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...