Homeಮುಖಪುಟಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

- Advertisement -
- Advertisement -

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಭಾನುವಾರ (ಡಿ.28) ಬೆಂಬಲಿಸಿದ್ದಾರೆ. ಕಾಂಗ್ರೆಸ್‌ನೊಳಗೆ ಶಿಸ್ತು ಮತ್ತು ಆಂತರಿಕ ಸುಧಾರಣೆಗಳ ಅಗತ್ಯವಿದೆ ಎಂದಿದ್ದಾರೆ.

ಯಾವುದೇ ರಾಜಕೀಯ ಪಕ್ಷಕ್ಕೆ ಶಿಸ್ತು ಅತ್ಯಗತ್ಯ. ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ತನ್ನದೇ ಆದ ಈ ಹಿಂದಿನ ಅನುಭವದಿಂದ ಕಲಿಯಬೇಕಾದದ್ದು ಬಹಳಷ್ಟಿದೆ ಎಂದು ತರೂರ್ ಹೇಳಿದ್ದಾರೆ.

“ನಮಗೆ 140 ವರ್ಷಗಳ ಇತಿಹಾಸವಿದೆ, ನಾವು ಅದರಿಂದ ಬಹಳಷ್ಟು ಕಲಿಯಬಹುದು. ನಾವು ನಮ್ಮಿಂದಲೂ ಕಲಿಯಬಹುದು. ಯಾವುದೇ ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ನಮ್ಮ ಸಂಘಟನೆ ಬಲಗೊಳ್ಳಬೇಕೆಂದು ನಾನು ಬಯಸುತ್ತೇನೆ. ನಮ್ಮ ಸಂಘಟನೆಯಲ್ಲಿ ಶಿಸ್ತು ಇರಬೇಕು. ದಿಗ್ವಿಜಯ ಸಿಂಗ್ ಸ್ವತಃ ಮಾತನಾಡಬಲ್ಲರು” ಎಂದು ಶಶಿ ತರೂರ್ ಹೇಳಿಕೆ ನೀಡಿದ್ದಾರೆ.

“ರಾಜಕೀಯ ಸವಾಲುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಎದುರಿಸಲು ಕಾಂಗ್ರೆಸ್ ಆಂತರಿಕ ಶಿಸ್ತು ಮತ್ತು ಸಂಘಟನಾತ್ಮಕ ಬಲವನ್ನು ಸುಧಾರಿಸುವತ್ತ ಗಮನಹರಿಸಬೇಕು” ಎಂದು ತಿಳಿಸಿದ್ದಾರೆ.

ಹೇಳಿಕೆ ವಿವಾದ ಸ್ವರೂಪ ಪಡೆದ ಬಳಿಕ ದಿಗ್ವಿಜಯ ಸಿಂಗ್ ಜೊತೆ ಮಾತನಾಡಿದ್ದೀರಾ? ಎಂದು ಕೇಳಿದ್ದಕ್ಕೆ, “ನಮ್ಮ ನಡುವಿನ ಮಾತುಕತೆಗಳು ಸ್ವಾಭಾವಿಕ. ನಾವು ಸ್ನೇಹಿತರು, ಪರಸ್ಪರ ಮಾತುಕತೆ ನಡೆಸುವುದು ಸಹಜ. ಸಂಘಟನೆಯನ್ನು ಬಲಪಡಿಸಬೇಕು, ಅದರ ಬಗ್ಗೆ ಯಾವುದೇ ಸಂದೇಹವಿಲ್ಲ” ಎಂದು ಹೇಳಿದ್ದಾರೆ.

ದಿಗ್ವಿಜಯ ಸಿಂಗ್ ಅವರು “1995ರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಬಳಿ ನೆಲದ ಮೇಲೆ ಕುಳಿತಿದ್ದ ಫೋಟೋವನ್ನು ಶನಿವಾರ ಹಂಚಿಕೊಂಡಿದ್ದರು. ಆರ್‌ಎಸ್‌ಎಸ್ ಮತ್ತು ಬಿಜೆಪಿಯಲ್ಲಿನ ತಳಮಟ್ಟದ ಕಾರ್ಯಕರ್ತರು ಉನ್ನತ ಸ್ಥಾನಗಳಿಗೆ ಹೇಗೆ ಏರಬಹುದು ಎಂಬುದನ್ನು ಈ ಫೋಟೋ ಪ್ರತಿಬಿಂಬಿಸುತ್ತದೆ ಎಂದು ಸಿಂಗ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದರು. ಇದನ್ನು ‘ಸಂಘಟನೆಯ ಶಕ್ತಿ’ ಎಂದು ಬಣ್ಣಿಸಿದ್ದರು. ಸಿಂಗ್ ಅವರ ಈ ಪೋಸ್ಟ್‌ ಕಾಂಗ್ರೆಸ್‌ಗೆ ಮುಜುಗರ ಉಂಟು ಮಾಡಿದೆ. ಪಕ್ಷದೊಳಗೆ ಅಸಮಾಧನಕ್ಕೆ ಕಾರಣವಾಗಿದೆ.

ತರೂರ್‌ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಸಿಂಗ್, ಆರ್‌ಎಸ್‌ಎಸ್‌ನಿಂದ ಕಲಿಯಲು ಏನೂ ಇಲ್ಲ ಎಂದಿದ್ದಾರೆ. ಖೇರಾ ಅವರು ಗಾಂಧಿ ಹಂತಹ ನಾತೂರಾಮ್ ಗೋಡ್ಸೆ ಮತ್ತು ಆರ್‌ಎಸ್‌ಸ್‌ ನಡುವಿನ ಸಂಬಂಧವನ್ನು ಉಲ್ಲೇಖಿಸಿದ್ದಾರೆ.

“ಆರ್‌ಎಸ್‌ಎಸ್‌ನಿಂದ ಕಲಿಯಲು ಏನೂ ಇಲ್ಲ. ಗೋಡ್ಸೆಗೆ ಹೆಸರುವಾಸಿಯಾದ ಸಂಘಟನೆಯು ಗಾಂಧಿ ಸ್ಥಾಪಿಸಿದ ಸಂಘಟನೆಗೆ ಏನು ಕಲಿಸಲು ಸಾಧ್ಯ?” ಎಂದು ಖೇರಾ ಪ್ರಶ್ನಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ವಿರೋಧ ಪಕ್ಷವು ಒಗ್ಗಟ್ಟಾಗಿದೆ. ಆದರೆ, ಪ್ರತಿಯೊಬ್ಬರಿಗೂ ತಮ್ಮದೇ ಆದ ಅಭಿಪ್ರಾಯವನ್ನು ಹೊಂದುವ, ವ್ಯಕ್ತಪಡಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...